ಪಂಚ ಗ್ಯಾರಂಟಿ ಯೋಜನೆಗಳು 'ಕೈ' ಹಿಡಿಯಲಿವೆ: ಸ್ಟಾರ್ ಚಂದ್ರು

Lok Sabha Elections 2024: ಉಚಿತ ಬಸ್‌ ಪ್ರಯಾಣ , ವಿದ್ಯುತ್, ತಿಂಗಳಿಗೆ ೨ ಸಾವಿರ ಹಣ ಸಿಗುತ್ತಿರುವುದರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಅಭಿನಂದನೆಗಳು ಸಲ್ಲಿಸುವುದರ ಜೊತೆಗೆ ಕಾಂಗ್ರೆಸ್ ಬೆಂಬಲಿಸುವ ಭರವಸೆ ನೀಡುತ್ತಿದ್ದಾರೆ ಎಂದು ಸ್ಟಾರ್‌ ಚಂದ್ರು ಹೇಳಿದ್ದಾರೆ. 

Written by - Puttaraj K Alur | Last Updated : Apr 7, 2024, 04:44 PM IST
  • ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಗೆಲುವಿಗೆ ಸಹಕಾರಿಯಾಗಲಿವೆ
  • ಬರಗಾಲದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಜನರ ಸಂಕಷ್ಟಕ್ಕೆ ನೆರವಾಗಿವೆ
  • ಮಂಡ್ಯದ ಜನರು ನನ್ನ 'ಕೈ' ಹಿಡಿಯಲಿದ್ದಾರೆ ಎಂದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು
ಪಂಚ ಗ್ಯಾರಂಟಿ ಯೋಜನೆಗಳು 'ಕೈ' ಹಿಡಿಯಲಿವೆ: ಸ್ಟಾರ್ ಚಂದ್ರು title=
ಸ್ಟಾರ್‌ ಚಂದ್ರು ಅಬ್ಬರ ಪ್ರಚಾರ!

ಕೆ.ಆರ್.ಪೇಟೆ: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ಗೆಲುವಿಗೆ ಸಹಕಾರಿಯಾಗಲಿದ್ದು, ಸಕ್ಕರೆ ನಾಡಿನ ಜನರು ನನ್ನ 'ಕೈ' ಹಿಡಿಯಲಿದ್ದಾರೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಹೇಳಿದ್ದಾರೆ. ಕೆ.ಆರ್.ಪೇಟೆ ತಾಲೂಕಿನ ನಾನಾ ಕಡೆ ಮತಪ್ರಚಾರ ನಡೆಸಿದ ಅವರು ಸುದ್ದಿಗಾರರ ಜೊತೆಗೆ ಮಾತನಾಡಿ, ಬರಗಾಲದ ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳು ಜನರ ಸಂಕಷ್ಟಕ್ಕೆ ನೆರವಾಗಿವೆ. ಪಂಚ ಗ್ಯಾರಂಟಿಗಳ ಜೊತೆಗೆ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಬಿಡುಗಡೆ ಮಾಡಿರುವ ನ್ಯಾಯಪತ್ರ ಕೂಡ ಕಾಂಗ್ರೆಸ್ ಗೆಲುವಿಗೆ ಪೂರಕವಾಗಲಿದೆ ಎಂದರು.

ಪ್ರಚಾರಕ್ಕೆ ಹೋದ ಕಡೆಯಲೆಲ್ಲ ಉತ್ತಮ ಸ್ಪಂದನೆ ಸಿಗುತ್ತಿದೆ. ಅದರಲ್ಲೂ ಮಹಿಳೆಯರು ಹೋದ ಕಡೆಯಲೆಲ್ಲ ಆರತಿ ಎತ್ತಿ ಬರಮಾಡಿಕೊಳ್ಳುತ್ತಿದ್ದಾರೆ. ಉಚಿತ ಬಸ್ ಪ್ರಯಾಣ, ವಿದ್ಯುತ್, ತಿಂಗಳಿಗೆ ೨ ಸಾವಿರ ಹಣ ಸಿಗುತ್ತಿರುವುದರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಅಭಿನಂದನೆಗಳು ಸಲ್ಲಿಸುವುದರ ಜೊತೆಗೆ ಕಾಂಗ್ರೆಸ್ ಬೆಂಬಲಿಸುವ ಭರವಸೆ ನೀಡುತ್ತಿದ್ದಾರೆ ಎಂದರು. ಎಸಿ ರೂಂನಲ್ಲಿ ಇರಲು ನನಗೆ ಇಷ್ಟವಿಲ್ಲ. ‌ಜನರ ಮಧ್ಯೆ ಇರಬೇಕು, ಜನಸೇವೆ ಮಾಡಬೇಕು ಎಂಬ ಕನಸು ಕಟ್ಟಿಕೊಂಡು ರಾಜಕೀಯಕ್ಕೆ ಬಂದಿದ್ದೇನೆ. ಹಣ ಮಾಡುವ ಉದ್ದೇಶ ನನಗಿಲ್ಲ. ನಾನು ಈ ಜಿಲ್ಲೆಯ ಮಣ್ಣಿನ ಮಗ. ನಾನು ಉತ್ತಿದ್ದೇನೆ, ಬಿತ್ತಿದ್ದೇನೆ, ಒಕ್ಕಲುತನ ಮಾಡಿದ್ದಾನೆ. ರೈತಾಪಿ ವರ್ಗದವರ ಕಷ್ಟಸುಖಗಳನ್ನು ಚೆನ್ನಾಗಿ ಬಲ್ಲೆ. ನಾನು ಇದೇ ಜಿಲ್ಲೆಯ ಮಣ್ಣಿನ ಮಗ. ನಾನು ಈ ಜಿಲ್ಲೆಯ ರೈತನ ಮಗ ಎಂದು ಹೇಳಿಕೊಳ್ಳಲು ಹೆಮ್ಮೆಯಿದೆ ಎಂದರು.

ಇದನ್ನೂ ಓದಿ: ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡ ನಿರ್ಮಲಾ ಸೀತಾರಾಮನ್..! 

ಕೆ.ಆರ್.ಪೇಟೆಯಲ್ಲಿ ಸ್ಟಾರ್ ಚಂದ್ರು ಪ್ರಚಾರ

ಕೆ.ಆರ್.ಪೇಟೆ ತಾಲೂಕಿನ ಮಲಕೋನಹಳ್ಳಿಯಲ್ಲಿರುವ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಸ್ಟಾರ್ ಚಂದ್ರು ಅವರು ಚುನಾವಣಾ ಪ್ರಚಾರ ಆರಂಭಿಸಿದರು. ಐಚನಹಳ್ಳಿ, ಬೂಕನಕೆರೆ, ಬಲ್ಲೇನಹಳ್ಳಿ, ಗಂಜಿಗೆರೆ, ಬಳ್ಳೇಕೆರೆ, ಮಡವಿನ ಕೋಡಿ, ಹರಿಹರಪುರ, ಬಂಡಿಹೊಳೆ, ಮಾಕವಳ್ಳಿ, ಚೌಡೇನಹಳ್ಳಿ, ದಬ್ಬೆಘಟ್ಟ, ಮಾದಾಪುರ, ಆನೆಗೋಳ, ಐಕನಹಳ್ಳಿ, ಲಕ್ಷ್ಮಿಪುರ, ಕಿಕ್ಕೇರಿ ಸೇರಿದಂತೆ ನಾನಾ ಭಾಗಗಳಲ್ಲಿ ಪ್ರಚಾರ ನಡೆಸಿದರು.

ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಪ್ರಕಾಶ್, ಹಿರಿಯ ಕಾಂಗ್ರೆಸ್ ಮುಖಂಡರಾದ ಬಿ.ಎಲ್.ದೇವರಾಜ್‌, ಮಂಡ್ಯ ಜಿಲ್ಲಾಧ್ಯಕ್ಷರಾದ ಸಿ.ಡಿ.ಗಂಗಾಧರ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ್, ರಮೇಶ್, ಕೃಷ್ಣಮೂರ್ತಿ, ಕೆ.ಬಿ.ರಮೇಶ್ ಸೇರಿದಂತೆ ತಾಲೂಕಿನ ಹಲವು ಕಾಂಗ್ರೆಸ್ ಮುಖಂಡರು ಜೊತೆಯಲ್ಲಿದ್ದರು.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಬಳ್ಳೇಕೆರೆ ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ನ ಬಿಜೆಪಿ ಕಾರ್ಯಕರ್ತರು ಹಾಗೂ ಹರಿಹರಪುರದಲ್ಲಿ ಕೆ.ಆರ್.ಪೇಟೆ ತಾಲೂಕು ಬಿಜೆಪಿ ಮಹಿಳಾ ಉಪಾಧ್ಯಕ್ಷರು ಸೇರಿದಂತೆ ಹಲವು ಮಹಿಳಾ ಕಾರ್ಯಕರ್ತೆಯರು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಸ್ಟಾರ್ ಚಂದ್ರು ಅವರು ಶಾಲು ಹಾಕಿ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.

ಇದನ್ನೂ ಓದಿ: ಕಾಂಗ್ರೆಸ್‌ನ ತೆರಿಗೆ ಹೋರಾಟಕ್ಕೆ ನಿರ್ಮಲಾ ಸೀತಾರಾಮನ್ ಟಾಂಗ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News