Loksabha Election 2024: ಕಾಂಗ್ರೆಸ್ ಪಕ್ಷದಿಂದ ಫೈನಲ್ ಆಗದ ಚಾಮರಾಜನಗರ ಎಂಪಿ ಟಿಕೆಟ್

Loksabha Election 2024: ಕಾಂಗ್ರೆಸ್ ಬಿಡುಗಡೆ ಮಾಡಿದ ಎರಡನೇ ಪಟ್ಟಿಯಲ್ಲೂ ಚಾಮರಾಜನಗರದ ಎಂಪಿ ಟಿಕೆಟ್ ಫೈನಲ್ ಆಗಿಲ್ಲ. ಸಿಎಂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲ್ಲೇ ಬೇಕಾದ ಅನಿವಾರ್ಯತೆ ಇದ್ದು ಅಳೆದು-ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ.

Written by - Yashaswini V | Last Updated : Mar 22, 2024, 08:48 AM IST
  • ಸಿಎಂ ವ್ಯಾಪ್ತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಬೇಕಾದ ಅನಿವಾರ್ಯತೆ
  • ಸಚಿವ ಮಹಾದೇವಪ್ಪ ಅವರನ್ನು ಲೋಕ ಅಖಾಡಕ್ಕೆ ಇಳಿಸಬೇಕು ಎನ್ನುವುದು ಹೈಕಮಾಂಡ್ ಮತ್ತು ಸಿದ್ದರಾಮಯ್ಯ ಅವರ ಒಲವು
  • ತನ್ನ ಬದಲು ಮಗ ಸುನೀಲ್ ಬೋಸ್ ಗೆ ಟಿಕೆಟ್ ಕೊಡುವಂತೆ ಸಚಿವ ಮಹಾದೇವಪ್ಪ ಲಾಬಿ
Loksabha Election 2024: ಕಾಂಗ್ರೆಸ್ ಪಕ್ಷದಿಂದ ಫೈನಲ್ ಆಗದ ಚಾಮರಾಜನಗರ ಎಂಪಿ ಟಿಕೆಟ್ title=

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರ ಒಳಪಡುವ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಆಯ್ಕೆ ಕಗ್ಗಂಟಾಗೆ ಮುಂದುವರೆದಿದೆ.

ಕಾಂಗ್ರೆಸ್ ಬಿಡುಗಡೆ ಮಾಡಿದ ಎರಡನೇ ಪಟ್ಟಿಯಲ್ಲೂ ಚಾಮರಾಜನಗರದ ಎಂಪಿ ಟಿಕೆಟ್ ಫೈನಲ್ ಆಗಿಲ್ಲ. ಸಿಎಂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲ್ಲೇ ಬೇಕಾದ ಅನಿವಾರ್ಯತೆ ಇದ್ದು ಅಳೆದು-ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ.

ಸಚಿವ ಮಹಾದೇವಪ್ಪ ಅವರನ್ನು ಲೋಕ ಅಖಾಡಕ್ಕೆ ಇಳಿಸಬೇಕು ಎನ್ನುವುದು ಹೈಕಮಾಂಡ್ ಮತ್ತು ಸಿದ್ದರಾಮಯ್ಯ ಅವರ ಒಲವಾಗಿದ್ದರೇ ತನ್ನ ಬದಲು ಮಗ ಸುನೀಲ್ ಬೋಸ್ ಗೆ ಟಿಕೆಟ್ ಕೊಡುವಂತೆ ಎಚ್‌ಸಿ‌ಎಂ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ , ಕ್ಷೇತ್ರ ಇನ್ನೂ ಕಗ್ಗಂಟಾಗೇ ಉಳಿದಿದೆ. 

ಇದನ್ನೂ ಓದಿ- ಚುನಾವಣಾ ಚೆಕ್ ಪೋಸ್ಟ್: ಬಿಸಿಲಿಗೆ ಬೆಂಡಾದ ಚುನಾವಣಾ ಸಿಬ್ಬಂದಿ

ತನ್ನ ಬದಲು ಮಗ ಸುನೀಲ್ ಬೋಸ್ ಗೆ ಟಿಕೆಟ್ ಕೊಡುವಂತೆ ಸಚಿವ ಮಹಾದೇವಪ್ಪ ಲಾಬಿ ನಡೆಸುತ್ತಿದ್ದು ಸಿದ್ದರಾಮಯ್ಯ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿದುಬಂದಿದೆ. ಕೊನೆಗೇ ಅಚ್ಚರಿ ಅಭ್ಯರ್ಥಿಯಾಗಿ ಶಾಸಕ ದರ್ಶನ್ ಧ್ರುವನಾರಾಯಣ ಕಣಕ್ಕಿಳಿದರೂ ಅಚ್ಚರಿಯಿಲ್ಲ ಎನ್ನುತ್ತಿವೆ ಕಾಂಗ್ರೆಸ್ ಮೂಲಗಳು.

ಸಿಎಂ ವ್ಯಾಪ್ತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಬೇಕಾದ ಅನಿವಾರ್ಯತೆ ಇದ್ದು ಈಗಾಗಲೇ ಮೊದಲ ಬಾರಿಗೆ ಕಮಲ ಅರಳಿ ಬೀಗಿದೆ. ಹಾಗಾಗಿ, ಮತ್ತೇ ಈ ಗಡಿ ಭಾಗವನ್ನು ಕೈ ವಶ ಮಾಡಿಕೊಳ್ಳಬೇಕಾದ ಅನಿವಾರ್ಯತೆ, ಸಿಎಂ ಕ್ಷೇತ್ರದಲ್ಲಿ ಗೆಲ್ಲಿಸಬೇಕಾದ ಅನಿವಾರ್ಯತೆ ಎರಡೂ ಇದೆ. ಟಿಕೆಟ್ ರೇಸ್ ನಲ್ಲಿ ಸುನೀಲ್ ಬೋಸ್, ದರ್ಶನ್ ಧ್ರುವನಾರಾಯಣ ಡಿ‌.ಎನ್.ನಟರಾಜು, ಜಿ.ಎನ್‌.ನಂಜುಂಡಸ್ವಾಮಿ ಇದ್ದು ಎಲ್ಲರೂ ಲಾಬಿ ನಡೆಸುತ್ತಿದ್ದಾರೆ.

ಇದನ್ನೂ ಓದಿ- ಬಿಜೆಪಿ ಅಭ್ಯರ್ಥಿ ಬಾಲರಾಜ್ ಗೆ ಬೆಂಬಲ‌ ಘೋಷಿಸಿದ ಸಂಸದ ಶ್ರೀನಿವಾಸಪ್ರಸಾದ ಅಳಿಯ

ಅಂತಿಮವಾಗಿ ಸಿದ್ದರಾಮಯ್ಯ ಸೂಚಿಸಿದವರಿಗೆ ಎಂಪಿ ಟಿಕೆಟ್ ಸಿಗಲಿದ್ದು ಯಾರಾಗುತ್ತಾರೆ ಹುರಿಯಾಳು ಎಂಬುದೇ ಇನ್ನೂ ಸಸ್ಪೆನ್ಸ್ ಆಗೇ ಉಳಿದಿದೆ. ಕಾಂಗ್ರೆಸ್ ಹೈಕಮಾಂಡ್ ಮಾತಿಗೆ ಕಟ್ಟುಬಿದ್ದು ಮಹಾದೇವಪ್ಪ ಅವರೇ ಚುನಾವಣೆಗೆ ನಿಲ್ಲುವರೋ ಇಲ್ಲವೇ ಮಗನಿಗೆ ಟಿಕೆಟ್ ಕೊಡಿಸುತ್ತಾರೋ, ಧ್ರುವನಾರಾಯಣ ಪುತ್ರ ದರ್ಶನ್ ಅಚ್ಚರಿ ಅಭ್ಯರ್ಥಿಯಾಗಿ ಹೊರಹೊಮ್ಮುವರೇ ಕಾದು ನೋಡಬೇಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News