ಮದಗಜ ಕಾದಾಟ: ಎದುರಾಳಿಯ ದಂತ ಚುಚ್ಚಿ ಆನೆ ಸಾವು

ಚಾಮರಾಜನಗರ: 35 ವರ್ಷದ ಗಂಡು ಕಾಡಾನೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯ ಓಂಕಾರ ವನ್ಯಜೀವಿ ವಲಯ ವ್ಯಾಪ್ತಿಯ ಕುರುಬರಹುಂಡಿಯ ಆಲದ ಮರದ ಹಳ್ಳ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕಾಡಾನೆಯು ಮತ್ತೊಂದು ಕಾಡಾನೆಯ ಜೊತೆ ಕಾದಾಟ ನಡೆಸಿ ಮೃತಪಟ್ಟಿರುವುದಾಗಿ ಅರಣ್ಯ ಅಧಿಕಾರಿಗಳು ದೃಢಪಡಿಸಿದ್ದಾರೆ.

ಕಾಡಾನೆಯ ಕಣ್ಣಿನ ಕೆಳಭಾಗದಲ್ಲಿ ಎದುರಾಳಿ ಕಾಡಾನೆಯ ದಂತ ಚುಚ್ಚಿರುವುದು ಕಂಡು ಬಂದಿದ್ದು, ರಕ್ತಸ್ರಾವ ಹಾಗೂ ನಿತ್ರಾಣದಿಂದ ಮೃತಪಟ್ಟಿದೆ. ಎದುರಾಳಿ ಕಾಡಾನೆಯ ದಂತ ಚುಚ್ಚಿ ದಂತವು ಮೃತ ಕಾಡಾನೆಯ ಮೇಲ್ದವಡೆಯವರೆಗೆ 30 ಸೆ.ಮೀ ಆಳದವರೆಗೆ ಹೊಳಹೊಕ್ಕಿದ್ದು, ದವಡೆಯ ಒಳಗೆ ದಂತವು ಮುರಿದಿರುವುದರಿಂದ ಕಾಡಾನೆಯು ಸಾವನ್ನಪ್ಪಿದೆ ಎಂದು ಬಂಡೀಪುರ ಹುಲಿ ಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್‍ಕುಮಾರ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ- ಕರ್ನಾಟಕವನ್ನು ಭಯೋತ್ಪಾದಕರ ಸ್ವರ್ಗವನ್ನಾಗಿಸುತ್ತಿರುವ ಕಾಂಗ್ರೆಸ್: ಬಿಜೆಪಿ ಆರೋಪ

ಎದುರಾಳಿ ಆನೆಯ ಮುರಿದ ದಂತದ ಭಾಗ ಹಾಗೂ ಮೃತ ಕಾಡಾನೆಯ ಎರಡು ದಂತಗಳನ್ನು ಇಲಾಖೆಯು ವಶಪಡಿಸಿಕೊಂಡು ಮೃತ ಕಾಡಾನೆಯ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕಳೆಬರವನ್ನು ನಿಯಮಾನುಸಾರ ಅರಣ್ಯ ಪ್ರದೇಶದಲ್ಲೇ ಬಿಡಲಾಗಿದೆ. 

ಇದನ್ನೂ ಓದಿ- ಆಂಜನೇಯ ಸ್ವಾಮಿ ದೇಗುಲದಲ್ಲಿ ಮೋದಿ ಹೆಸ್ರಲ್ಲಿ ಅರ್ಚನೆ

ಈ ಸಂದರ್ಭದಲ್ಲಿ ಬಂಡೀಪುರ ಹುಲಿ ಯೋಜನೆ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್ ಕುಮಾರ್, ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ, ಓಂಕಾರ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಕೆ.ಪಿ.ಸತೀಶ್ ಕುಮಾರ್, ಇಲಾಖಾ ಪಶುವೈದ್ಯಾಧಿಕಾರಿ ಡಾ.ಮಿರ್ಜಾ ವಾಸಿಂ, ಗಸ್ತು ವನಪಾಲಕ ಸಂತೋಷ್ ಸೇರಿದಂತೆ ಅರಣ್ಯ ವೀಕ್ಷಕ ಹಾಗೂ ಇಲಾಖಾ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Section: 
English Title: 
Madagaja fight: An elephant dies by piercing the opponents tusk
News Source: 
Home Title: 

ಮದಗಜ ಕಾದಾಟ: ಎದುರಾಳಿಯ ದಂತ ಚುಚ್ಚಿ ಆನೆ ಸಾವು

ಮದಗಜ ಕಾದಾಟ: ಎದುರಾಳಿಯ ದಂತ ಚುಚ್ಚಿ ಆನೆ ಸಾವು
Yes
Is Blog?: 
No
Facebook Instant Article: 
Yes
Highlights: 

ಕಾಡಾನೆಯ ಕಣ್ಣಿನ ಕೆಳಭಾಗದಲ್ಲಿ ಎದುರಾಳಿ ಕಾಡಾನೆಯ ದಂತ ಚುಚ್ಚಿರುವುದು ಕಂಡು ಬಂದಿದೆ

ರಕ್ತಸ್ರಾವ ಹಾಗೂ ನಿತ್ರಾಣದಿಂದ ಮೃತಪಟ್ಟಿದೆ. 

ಎದುರಾಳಿ ಕಾಡಾನೆಯ ದಂತ ಚುಚ್ಚಿ ದಂತವು ಮೃತ ಕಾಡಾನೆಯ ಮೇಲ್ದವಡೆಯವರೆಗೆ 30 ಸೆ.ಮೀ ಆಳದವರೆಗೆ ಹೊಳಹೊಕ್ಕಿದೆ

Mobile Title: 
ಮದಗಜ ಕಾದಾಟ: ಎದುರಾಳಿಯ ದಂತ ಚುಚ್ಚಿ ಆನೆ ಸಾವು
Yashaswini V
Publish Later: 
No
Publish At: 
Wednesday, October 4, 2023 - 12:08
Created By: 
Yashaswini V
Updated By: 
Yashaswini V
Published By: 
Yashaswini V
Request Count: 
1
Is Breaking News: 
No
Word Count: 
197