ಮಹದಾಯಿ ವಿವಾದ: ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿ

     

Last Updated : Jan 27, 2018, 02:54 PM IST
ಮಹದಾಯಿ ವಿವಾದ: ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿ title=
ಸಂಗ್ರಹ ಚಿತ್ರ

ಬೆಂಗಳೂರು: ಮಹದಾಯಿ ಮತ್ತು ಕಳಸಾ-ಬಂಡೂರಿ ನಾಲಾ ಜೋಡಣೆಯ ವಿಚಾರವಾಗಿ ಸರ್ವ ಪಕ್ಷಗಳ ಅಭಿಪ್ರಾಯ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆದಿದ್ದ ಸಭೆಯಲ್ಲಿ ಕಾಂಗ್ರೇಸ್ ಮತ್ತು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಡುವೆ ಭಾರಿ ತಿಕ್ಕಾಟಕ್ಕೆ ಸಭೆ ಸಾಕ್ಷಿಯಾಯಿತು.

ಈ ಸಂದರ್ಭದಲ್ಲಿ ಸಚಿವ ಎಂ ಬಿ ಪಾಟೀಲ್ ರನ್ನು ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡ ಬಿಜೆಪಿಯ ಈಶ್ವರಪ್ಪ ಮತ್ತು ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ರವರು ಮಹಾದಾಯಿ ವಿಚಾರದಲ್ಲಿ ರೈತರನ್ನು ಮುಂದಿಟ್ಟುಕೊಂಡು ಬಿಜೆಪಿಯ ವಿರುದ್ದ ಪಿತೂರಿ ಮಾಡಬೇಡಿ ನಮಗೂ ರಾಜಕೀಯ ಮಾಡಲು ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವಾಗ್ವಾದದಿಂದ ರೊಚ್ಚಿಗೆದ್ದ ರೈತರು ನಿಮಗೆ ರಾಜಕೀಯವೇ ಹೆಚ್ಚಾಗಿದೆ. ಪರಸ್ಪರ ಪ್ರತ್ಯಾರೋಪ ಮಾಡುವುದರಲ್ಲೇ ಕಾಲ ಕಳೆಯದೆ ನೀರು ತರುವ ಪ್ರಯತ್ನ ಮಾಡಿ ಎಂದು ಸಲಹೆ ನೀಡಿದರು. ಇದೆ ಸಂದರ್ಭದಲ್ಲಿ  ಜೆಡಿಎಸ್ ನ ನವಲಗುಂದದ ಶಾಸಕ ಎಚ್ ಎನ್ ಕೊನರೆಡ್ಡಿ ಮಾತನಾಡಿ ಈ ವಿಷಯದಲ್ಲಿ ಪ್ರಧಾನಿಗಳು ಮಧ್ಯಸ್ಥಿಕೆ ವಹಿಸಬೇಕು ಆ ನಿಟ್ಟಿನಲ್ಲಿ ಸರ್ಕಾರವು ಸರ್ವ ಪಕ್ಷಗಳ ನಿಯೋಗವನ್ನು ಪ್ರಧಾನಿಗಳ ಬಳಿ ತೆಗೆದುಕೊಂಡು ಹೊಗಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

 

 

Trending News