ಮಹಿಳೆಯ ನಗ್ನ ಫೋಟೊ ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿ ಬಂಧನ

ಹಣಕ್ಕಾಗಿ ಮಹಿಳೆಗೆ ಬೆದರಿಕೆ ಒಡ್ಡಿದ್ದ ಆರೋಪಿಯನ್ನು ನಗರ ಈಶಾನ್ಯ ವಿಭಾಗದ ಸೆನ್ ಪೊಲೀಸರು ಬಂಧಿಸಿದ್ದಾರೆ.

Written by - VISHWANATH HARIHARA | Edited by - Ranjitha R K | Last Updated : Oct 25, 2022, 11:24 AM IST
  • ಮಹಿಳೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿ ಬಂಧನ
  • ಸಾಮಾಜಿಕ ಮಾಧ್ಯಮದಲ್ಲಿ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ
  • ಮಹಿಳೆಯ ದೂರಿನ ಆಧಾರದ ಮೇಲೆ ಬಂಧನ
ಮಹಿಳೆಯ ನಗ್ನ ಫೋಟೊ ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿ ಬಂಧನ title=
Cyber Criminal arrest

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕ ವಿವರ ಹಾಗೂ ಇನ್ನಿತರ ಫೋಟೊ- ವಿಡಿಯೋ ಪೋಸ್ಟ್ ಮಾಡಬೇಡಿ ಎಂದು ಪೊಲೀಸರು ಜಾಗೃತಿ ಮೂಡಿಸುತ್ತಿದ್ದರೂ ಜನ ಮಾತ್ರ  ಎಚ್ಚೆತ್ತುಕೊಳ್ಳುವಂತೆ ಕಾಣುತ್ತಿಲ್ಲ. ಸದ್ಯ ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಕ್ರಿಮಿಗಳು ಮಹಿಳೆಯರ ನಗ್ನ-ಅರೆನಗ್ನ ವಿಡಿಯೋ ಇಟ್ಟುಕೊಂಡು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಇದೇ‌ ರೀತಿ ಹಣಕ್ಕಾಗಿ ಮಹಿಳೆಗೆ ಬೆದರಿಕೆ ಒಡ್ಡಿದ್ದ ಆರೋಪಿಯನ್ನು ನಗರ ಈಶಾನ್ಯ ವಿಭಾಗದ ಸೆನ್ ಪೊಲೀಸರು ಬಂಧಿಸಿದ್ದಾರೆ.

ಭುವನೇಶ್ವರಿ ನಗರದ ಮಹಾಂತೇಶ್ ಬಂಧಿತ ಆರೋಪಿ. ಈತ ಡೇಟಿಂಗ್ ಆ್ಯಪ್ ಆಗಿರುವ ಟ್ಯಾಂಗೋ ಸದಸ್ಯನಾಗಿದ್ದ. ಈ ಆ್ಯಪ್ ನಲ್ಲಿ ಅಪರಿಚಿತರೊಂದಿಗೂ ವಿಡಿಯೊ ಚಾಟ್ ಮಾಡಬಹುದಾಗಿದೆ. ಇದನ್ನೇ ದುರ್ಬಳಕೆ ಮಾಡಿಕೊಂಡ ಆರೋಪಿ ಆ್ಯಪ್ ನಲ್ಲಿ ಮಹಿಳೆಯರ ನಗ್ನ-ಅರೆನಗ್ನ ಫೋಟೊ ಹಾಗೂ ವಿಡಿಯೊಗಳನ್ನು ಸ್ಕ್ರಿನ್ ಶಾಟ್ ತೆಗೆದುಕೊಂಡು ಮಹಿಳೆಯ ಮೊಬೈಲ್ ನಂಬರ್ ಸಂಗ್ರಹಿಸಿದ್ದ. 

ಇದನ್ನೂ ಓದಿ : ಗ್ರಹಣ ನಿಮಿತ್ತ ರಾಜ್ಯದ ಯಾವ ದೇವಾಲಯದಲ್ಲಿ ಏನು ವಿಶೇಷ ? ಇಲ್ಲಿದೆ ಸಂಪೂರ್ಣ ವರದಿ

ಬಳಿಕ ಮಹಿಳೆಗೆ‌‌ ಕರೆ ಮಾಡಿ 'ನಿನ್ನ ಏಕಾಂತದ ಫೋಟೊ ಹಾಗೂ ವಿಡಿಯೋ ನನ್ನ ಬಳಿಯಿದೆ ಎಂದು 30 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದ. 30 ಲಕ್ಷ ರೂಪಾಯಿ ನೀಡದಿದ್ದರೆ ಫೋಟೋ ಹಾಗೂ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡುವುದಾಗಿ' ಬ್ಲ್ಯಾಕ್ ಮೇಲ್ ಮಾಡಿದ್ದ. 

ಆರೋಪಿಯ ಈ ಕೃತ್ಯದಿಂದ ಆತಂಕಗೊಂಡ ಮಹಿಳೆ, ಪೊಲೀಸರಿಗೆ ದೂರು ನೀಡಿದ್ದಾಳೆ. ಮಹಿಳೆಯ ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ : 27 ವರ್ಷಗಳ ಬಳಿಕ ದೀಪಾವಳಿ ಹಬ್ಬದ ದಿನ ಸೂರ್ಯಗ್ರಹಣ .! ನಿಮ್ಮ ನಗರದಲ್ಲಿ ಗ್ರಹಣ ಗೋಚರ ಸಮಯ ಯಾವುದು ?

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News