ಕಾವೇರಿ ನದಿ ನೀರು ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್

 "ನ್ಯಾಯಾಲಯವೇ ಕಾವೇರಿ ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿದ್ದು, ಇದು ತಾಂತ್ರಿಕ ಸಮಿತಿಯಾಗಿದೆ. ಸದ್ಯ ಅವರು ತಾಂತ್ರಿಕ ಅಂಶಗಳ ಬಗ್ಗೆ ಗಮನಹರಿಸಬೇಕು ಎಂದು ಡಿಕೆಶಿ ಹೇಳಿದ್ದಾರೆ

Written by - Ranjitha R K | Last Updated : Aug 25, 2023, 02:24 PM IST
  • ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ
  • ಕಳೆದ ವರ್ಷ 400ಕ್ಕೂ ಹೆಚ್ಚು ಟಿಎಂಸಿ ನೀರು ವ್ಯರ್ಥವಾಗಿ ಸಮುದ್ರದ ಪಾಲಾಗಿದೆ
  • ರಾಜ್ಯದ ರೈತರ ಹಿತ ಕಾಯಲು ಬದ್ಧವಿದ್ದೇವೆ.
ಕಾವೇರಿ ನದಿ ನೀರು ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್ title=

ಬೆಂಗಳೂರು: ಸದ್ಯ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಎದ್ದಿರುವ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ. ಈ ಬಗ್ಗೆ ನಾವು ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದೇವೆ" ಎಂದು ನೀರಾವರಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

"ನ್ಯಾಯಾಲಯವೇ ಕಾವೇರಿ ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿದ್ದು, ಇದು ತಾಂತ್ರಿಕ ಸಮಿತಿಯಾಗಿದೆ. ಸದ್ಯ ಅವರು ತಾಂತ್ರಿಕ ಅಂಶಗಳ ಬಗ್ಗೆ ಗಮನಹರಿಸಬೇಕು ಎಂದು ಹೇಳಿದ್ದಾರೆ. ಈ ಪರಿಸ್ಥಿತಿಯಲ್ಲಿ ಪ್ರಮುಖ ಪರಿಹಾರ ಎಂದರೆ ಅದು ಮೇಕೆದಾಟು ಯೋಜನೆ ಮಾತ್ರ. ಮೇಕೆದಾಟು ಆಣೆಕಟ್ಟು ನಿರ್ಮಾಣವಾಗಿದ್ದರೆ ಇಂದು ಈ ಸಮಸ್ಯೆ ಹಾಗೂ ಪರಿಸ್ಥಿತಿಯೇ ಉದ್ಭವಿಸುತ್ತಿರಲಿಲ್ಲ. ಕಳೆದ ವರ್ಷ 400ಕ್ಕೂ ಹೆಚ್ಚು ಟಿಎಂಸಿ ನೀರು ವ್ಯರ್ಥವಾಗಿ ಸಮುದ್ರದ ಪಾಲಾಗಿದೆ. ಅದರಲ್ಲಿ ಸ್ವಲ್ಪ ಪ್ರಮಾಣದ ನೀರನ್ನು ಮೇಕೆದಾಟು ಆಣೆಕಟ್ಟು ಮೂಲಕ ಹಿಡಿದಿಟ್ಟಿದ್ದರೆ ಈ ಸಮಸ್ಯೆಯೇ ಎದುರಾಗುತ್ತಿರಲಿಲ್ಲ ಎಂದಿದ್ದಾರೆ. 

ಇದನ್ನೂ ಓದಿ : Bengaluru: ಕೆಲಸವಿಲ್ಲದೆ ಖಾಲಿ ಕೂತ ಗಂಡನಿಗೆ ಬುದ್ಧಿ ಕಲಿಸಲು ಹೋಗಿ ಪೇಚಿಗೆ ಸಿಲುಕಿದ ಪತ್ನಿ!

ಮೇಕೆದಾಟು ಆಣೆಕಟ್ಟು ನೀರನ್ನು ನಾವು ನೀರಾವರಿಗೆ ಬಳಸಲು ಸಾಧ್ಯವಿಲ್ಲ. ಕೇವಲ ಕುಡಿಯುವ ನೀರಿಗೆ ಬಳಸಬಹುದು. ಮೇಕೆದಾಟು ಇಂತಹ ಸಂಕಷ್ಟದ ಸಮಯದಲ್ಲಿ ಹೆಚ್ಚು ಸಹಾಯಕ್ಕೆ ಬರುತ್ತದೆ. ಈ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್ ಗಮನ ಹರಿಸಬೇಕಿದೆ. ನಾವು ನಮ್ಮ ಅರ್ಜಿಯಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದೇವೆ. ನಾವು ಈ ವಿಚಾರವನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತರುತ್ತೇವೆ ಎಂದಿದ್ದಾರೆ. 

ನಮ್ಮ ಸರ್ಕಾರ ನ್ಯಾಯಾಲಯಕ್ಕೆ ಎಲ್ಲಾ ಮಾಹಿತಿ ನೀಡಿದ್ದು, ನಮ್ಮ ರಾಜ್ಯದ ರೈತರ ಹಿತ ಕಾಯಲು ಬದ್ಧವಿದ್ದೇವೆ. ತಮಿಳುನಾಡು ತನ್ನ ಪಾಲಿನ ನೀರನ್ನು ಯಾವ ಉದ್ದೇಶಕ್ಕಾಗಿ ಬೇಕಾದರೂ ಬಳಸಬಹುದು. ಅದನ್ನು ನಾವು ಪ್ರಶ್ನಿಸಲು ಸಾಧ್ಯವಿಲ್ಲ. ಆದರೆ ತಮಿಳುನಾಡು ಸಂಕಷ್ಟದ ಸಮಯದಲ್ಲಿ ಈ ನೀರನ್ನು ಎಚ್ಚರಿಕೆಯಿಂದ ಬಳಸಬಹುದಾಗಿತ್ತು. ನಾವು ನಮ್ಮ ರೈತರಿಗೆ ಬಿತ್ತನೆ ಮಾಡದಂತೆ ಸಲಹೆ ನೀಡಿರುವಂತೆ ಅವರು ಅವರ ರೈತರಿಗೆ ಸಲಹೆ ನೀಡಬಹುದಾಗಿತ್ತು ಎಂದು ಹೇಳಿದ್ದಾರೆ. 

ಇದನ್ನೂ ಓದಿ : ಚಾಮರಾಜನಗರ:‌ 1.63 ಕೋಟಿ ಪ್ರಯಾಣಿಕರಲ್ಲಿ ಕೋಟಿ ಮಹಿಳೆಯರ 'ಶಕ್ತಿ' ಪ್ರಯಾಣ!!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Trending News