ವಿಧಾನ ಪರಿಷತ್ ಸದಸ್ಯ ಅಪ್ಸರ್ ಆಗಾ ನಿಧನ

ಕರ್ನಾಟಕ ವಿಧಾನ ಪರಿಷತ್ ಸದಸ್ಯ ಅಪ್ಸರ್‌ ಆಗಾ(67) ಅವರು ಶುಕ್ರವಾರ ತಡರಾತ್ರಿ ಪೋರ್ಟಿಸ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

Last Updated : Jun 9, 2018, 12:06 PM IST
ವಿಧಾನ ಪರಿಷತ್ ಸದಸ್ಯ ಅಪ್ಸರ್ ಆಗಾ ನಿಧನ title=

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಸದಸ್ಯ ಅಪ್ಸರ್‌ ಆಗಾ(67) ಅವರು ಶುಕ್ರವಾರ ತಡರಾತ್ರಿ ಪೋರ್ಟಿಸ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

ಜೆಡಿಎಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಅವರಿಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಗಾ ಕೊನೆಯುಸಿರೆಳೆದಿದ್ದಾರೆ. 

ರಾಮನಗರದಲ್ಲಿ ಮಾವಿನ ಹಣ್ಣುಗಳು ಮತ್ತು ರೇಷ್ಮೆ ಉದ್ಯಮ ನಡೆಸುತ್ತಿದ್ದ ಆಗಾ, ಕಳೆದ 3 ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳುತ್ತಿದ್ದರು ಎಂದು ತಿಳಿದು ಬಂದಿದೆ. ಶನಿವಾರ ಮಧ್ಯಾಹನ್ 3 ಗಂಟೆಗೆ ಅಂತಿಮ ಸಂಸ್ಕಾರ ನೆರವೇರಲಿದ್ದು, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದಾರೆ.

Trending News