ಟಿಕೆಟ್ ಹಂಚಿಕೆ ಅಸಮಾಧಾನ: ಜಿಲ್ಲಾ ವಕ್ತಾರ ಸ್ಥಾನಕ್ಕೆ ಎನ್.ಆರ್.ರಮೇಶ್ ರಾಜೀನಾಮೆ

ಬೆಂಗಳೂರು ನಗರ ಜಿಲ್ಲಾ ವಕ್ತಾರ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ಎನ್.ಆರ್.ರಮೇಶ್ ತಿಳಿಸಿದರು.

Last Updated : Apr 9, 2018, 03:14 PM IST
ಟಿಕೆಟ್ ಹಂಚಿಕೆ ಅಸಮಾಧಾನ: ಜಿಲ್ಲಾ ವಕ್ತಾರ ಸ್ಥಾನಕ್ಕೆ ಎನ್.ಆರ್.ರಮೇಶ್ ರಾಜೀನಾಮೆ title=

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ 72 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಟಿಕೆಟ್ ಹಂಚಿಕೆ ಕುರಿತು ಅಸಮಾಧಾನ ವ್ಯಕ್ತವಾಗಿದ್ದು, ಚಿಕ್ಕಪೇಟೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎನ್.ಆರ್.ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತಮಗೆ ಟಿಕೆಟ್ ದೊರೆಯದಿರಲು ಕೇಂದ್ರ ಸಚಿವ ಅನಂತ್ ಕುಮಾರ್ ಕಾರಣ. ಟಿಕೆಟ್ ಹಂಚಿಕೆ ಬಗ್ಗೆ ಅಸಮಾಧಾನವಿದೆ. ಆದ್ದರಿಂದ ಬೆಂಗಳೂರು ನಗರ ಜಿಲ್ಲಾ ವಕ್ತಾರ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ತಿಳಿಸಿದರು. ಅಲ್ಲದೆ, ತಮ್ಮ ಬೆಂಬಲಿಗರ ಜೊತೆ  ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ. ಪಕ್ಷಾಂತರ ಮಾಡುವುದು ನನ್ನ ಜಾಯಮಾನವಲ್ಲ, ಸಾಧ್ಯವಾದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಏನೇ ಇರಲಿ, ಬಿಜೆಪಿಯಲ್ಲಿ ಇರಬೇಕೋ, ಬೇಡವೋ ಎಂಬ ಬಗ್ಗೆ ಏ.11ರಂದು ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಎನ್.ಆರ್.ರಮೇಶ್ ಹೇಳಿದ್ದಾರೆ. 

ಚಿಕ್ಕಪೇಟೆ ಕ್ಷೇತ್ರದಿಂದ ಉದ್ಯಮಿ ಉದಯ ಗರುಡಾಚಾರ್ ಅವರಿಗೆ ಬಿಜೆಪಿ ಟಿಕೆಟ್ ನಿದಿಯ ಹಿನ್ನೆಲೆಯಲ್ಲಿ ಆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದ ಎನ್.ಆರ್.ರಮೇಶ್ ಅವರಿಗೆ ಈ ಬಾರಿಯೂ ಟಿಕೆಟ್ ಕೈತಪ್ಪಿರುವುದು ಬಹಳ ಬೇಸರ ಮೂಡಿಸಿದೆ. ಅಲ್ಲದೆ ಈ ಕ್ಷೇತ್ರದ ಟಿಕೆಟ್'ಗಾಗಿ 2 ಕೋಟಿ ರೂ. ಡೀಲ್ ನಡೆದಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. 

Trending News