ಕಾಂಗ್ರೆಸನ್ನು ಶಾಶ್ವತ ನಿದ್ರೆಗೆ ಕಳುಹಿಸಲು ಜನರು ಸಜ್ಜಾಗಿದ್ದಾರೆ: ನಳೀನ್ ಕುಮಾರ್ ಕಟೀಲ್

ಕಾಂಗ್ರೆಸ್ ಶಾಸಕರು ವಿಧಾನಸೌಧದಲ್ಲಿ ಮಲಗುವುದರಿಂದ ಅವರು ಅದಕ್ಕೆ ಮಾತ್ರ ಲಾಯಕ್ ಎಂದು ರಾಜ್ಯದ ಜನರಿಗೆ ಅನಿಸಿದೆ ಅಂತಾ ನಳೀನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ.

Written by - Zee Kannada News Desk | Last Updated : Feb 20, 2022, 06:59 AM IST
  • ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ತಮ್ಮ ಸ್ವಪ್ರತಿಷ್ಟೆ ಮುಖ್ಯವಾಗಿದೆ
  • ಕಾಂಗ್ರೆಸ್ ಸದನದ ಕಲಾಪಗಳಿಗೆ ಅಡ್ಡಿ ಮಾಡುವ ಮೂಲಕ ಜನರಿಗೆ ಅನ್ಯಾಯವೆಸಗಿದೆ
  • ಜನರ ದಿಕ್ಕು ತಪ್ಪಿಸಲು ಅಹೋರಾತ್ರಿ ನಿದ್ರಾ ಧರಣಿ ಮೂಲಕ ಕಾಂಗ್ರೆಸ್ ಅನಗತ್ಯ ಕೆಲಸಕ್ಕೆ ಕೈಹಾಕಿದೆ
ಕಾಂಗ್ರೆಸನ್ನು ಶಾಶ್ವತ ನಿದ್ರೆಗೆ ಕಳುಹಿಸಲು ಜನರು ಸಜ್ಜಾಗಿದ್ದಾರೆ: ನಳೀನ್ ಕುಮಾರ್ ಕಟೀಲ್ title=
ಕಾಂಗ್ರೆಸ್ ವಿರುದ್ಧ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ

ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯದಲ್ಲಿಯೂ ಕಾಂಗ್ರೆಸನ್ನು ಶಾಶ್ವತ ನಿದ್ರೆಗೆ ಕಳುಹಿಸಲು ಜನರು ಸಜ್ಜಾಗಿದ್ದಾರೆ ಅಂತಾ ಬಿಜೆಪಿ ರಾಜ್ಯಾಧ‍್ಯಕ್ಷ ನಳೀನ್ ಕುಮಾರ್ ಕಟೀಲ್(Nalin Kumar Kateel) ಟೀಕಿಸಿದ್ದಾರೆ.

‘ಸದನದಲ್ಲಿ ಆರೋಗ್ಯಪೂರ್ಣ ಚರ್ಚೆಯಿಂದ ಪಲಾಯನವಾದ ಮಾಡುವ ಕಾಂಗ್ರೆಸ್ ನಾಯಕರಿಗೆ(Congress leader's) ರಾಜ್ಯದ ಅಭಿವೃದ್ಧಿಗಿಂತ ತಮ್ಮ ಸ್ವಪ್ರತಿಷ್ಟೆ ಮುಖ್ಯವಾಗಿದೆ. ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಯಶಸ್ವಿ ಕ್ರಮಗಳು, ಅಭಿವೃದ್ಧಿ ಯೋಜನೆಗಳಿಂದ ಕಂಗೆಟ್ಟಿರುವ ಕಾಂಗ್ರೆಸ್ ಮುಖಂಡರು ವಿಷಯಾಂತರ ಮಾಡಲು ಧರಣಿಯ ನಾಟಕಕ್ಕೆ ಕೈ ಹಾಕಿರುವುದು ಸ್ಪಷ್ಟವಾಗಿದೆ’ ಅಂತಾ ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಧ್ವಜ ಬದಲಿಸುವುದು ಕಾಂಗ್ರೆಸ್ ಅಜೆಂಡಾ, ಸಾಕ್ಷಿ ಇಲ್ಲಿದೆ ನೋಡಿ: ಬಿಜೆಪಿ

‘ಕಾಂಗ್ರೆಸ್ ಶಾಸಕರು ವಿಧಾನಸೌಧದಲ್ಲಿ ಮಲಗುವುದರಿಂದ ಅವರು ಅದಕ್ಕೆ ಮಾತ್ರ ಲಾಯಕ್ ಎಂದು ರಾಜ್ಯದ ನಾಗರಿಕರಿಗೆ ಅನಿಸಿದೆ. ಕಾಂಗ್ರೆಸ್ ಶಾಸಕ(Congress MLA)ರನ್ನು ಆರಿಸಿ ಕಳುಹಿಸಿದ ಮತದಾರ ಇವರ ಬೇಜವಾಬ್ದಾರಿ ನಡೆಯಿಂದ ಭ್ರಮನಿರಸನಗೊಂಡಿದ್ದಾನೆ. ಕಾಂಗ್ರೆಸ್ ಸದನದಲ್ಲಿ ಜನರ ಪರವಾಗಿರದೇ, ಸದನದ ಕಲಾಪಗಳಿಗೆ ಅಡ್ಡಿ ಮಾಡುವ ಮೂಲಕ ಜನರಿಗೆ ಅನ್ಯಾಯವೆಸಗಿದೆ’ ಅಂತಾ ಟ್ವೀಟ್ ಮಾಡಿದ್ದಾರೆ.

‘ಜನರ ದಿಕ್ಕು ತಪ್ಪಿಸಲು ಅಹೋರಾತ್ರಿ ನಿದ್ರಾ ಧರಣಿಯ ಮೂಲಕ ಕಾಂಗ್ರೆಸ್(Congress Party) ಅನಗತ್ಯ ಕೆಲಸಕ್ಕೆ ಕೈ ಹಾಕಿದೆ. ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯದಲ್ಲಿಯೂ ಕಾಂಗ್ರೆಸನ್ನು ಶಾಶ್ವತ ನಿದ್ರೆಗೆ ಕಳುಹಿಸಲು ನಾಗರಿಕರು ಸಜ್ಜಾಗಿದ್ದಾರೆ. ಜನರ ವಿಶ್ವಾಸವನ್ನು ಕಳೆದುಕೊಂಡ ಕಾಂಗ್ರೆಸ್ಸಿಗೆ ಈಗ ರಾಜ್ಯ ಸರ್ಕಾರದ ವಿರುದ್ಧ ಯಾವುದೇ ವಿಷಯ ಇಲ್ಲ’ ಅಂತಾ ಕುಟುಕಿದ್ದಾರೆ.

ಇದನ್ನೂ ಓದಿ: ಹೆಣ್ಣು ಮಕ್ಕಳ ಶಿಕ್ಷಣದಲ್ಲಿ ಬಿಜೆಪಿಯ ನಿಲುವೇನು?: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

‘ಜವಾಬ್ದಾರಿಯುತ ವಿಪಕ್ಷ ಯಾವ ವಿಷಯಕ್ಕೆ ಹೋರಾಡುತ್ತೆ ಎಂದು‌ ರಾಜ್ಯದ ಪ್ರಜ್ಞಾವಂತ ನಾಗರಿಕರು ಗಮನಿಸುತ್ತಾರೆ. ವಿವಾದವೇ ಇಲ್ಲದ ವಿಷಯಗಳಿಗೆ ಸದನದಲ್ಲಿ ಮಲಗುವುದರಿಂದ ರಾಜ್ಯದ ಜನತೆಗೆ ಏನು ಪ್ರಯೋಜನವಾಗುತ್ತೆ ಎನ್ನುವುದಕ್ಕೆ ಕಾಂಗ್ರೆಸ್(Congress) ಮುಖಂಡರ ಬಳಿ ಉತ್ತರ ಇಲ್ಲ. ಅನಗತ್ಯ ಧರಣಿ ಕಾಂಗ್ರೆಸ್ ಬೌದ್ಧಿಕ ದಿವಾಳಿಯಾಗಿರುವುದಕ್ಕೆ ಸಾಕ್ಷಿ’ ಅಂತಾ ಟೀಕಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News