ರಾಜ್ಯದಲ್ಲಿ ಅಧಿಕಾರಿಗಳು ಸರ್ಕಾರದ ಹಿಡಿತದಲ್ಲಿಲ್ಲ- ದೇವೇಗೌಡ

    

webmaster A | Updated: Mar 13, 2018 , 06:09 PM IST
ರಾಜ್ಯದಲ್ಲಿ ಅಧಿಕಾರಿಗಳು ಸರ್ಕಾರದ ಹಿಡಿತದಲ್ಲಿಲ್ಲ- ದೇವೇಗೌಡ

ಬೆಂಗಳೂರು: ಇಂದು ಬೆಂಗಳೂರಿನ ಮಲ್ಯ ಆಸ್ಪತ್ರೆಯಲ್ಲಿ ಲೋಕಾಯುಕ್ತ ವಿಶ್ವನಾಥ ಶೆಟ್ಟಿ ಅವರ ಆರೋಗ್ಯ ವಿಚಾರಿಸಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ ರಾಜ್ಯದಲ್ಲಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ರಾಜ್ಯ ಸರ್ಕಾರದ ಹಿಡಿತದಲ್ಲಿಲ್ಲವೆಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿನ ಪರಿಸ್ಥಿತಿಗೆ ತೀವ್ರ ಕಳವಳ ವ್ಯಕ್ತಪಡಿಸಿದ ದೇವೇಗೌಡರು "ಗೃಹ ಮಂತ್ರಿಗಳು ಸ್ವತಂತ್ರವಾಗಿ ಕೆಲಸ ಮಾಡುತ್ತಿಲ್ಲ, ರಾಜ್ಯಸರ್ಕಾರದಲ್ಲಿ ಕೋ ಆರ್ಡಿನೇಶನ್ ಸರಿಯಿಲ್ಲ, ಮುಖ್ಯಮಂತ್ರಿಗಳು ಗೃಹಮಂತ್ರಿಗೆ ಸ್ವತಂತ್ರವಾಗಿ ಕೆಲಸ ಮಾಡಲು ಬಿಡುತ್ತಿಲ್ಲ ಗೃಹ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡ್ತಿದ್ದಾರೆ. ಇಡೀ ದೇಶದಲ್ಲಿ ಇಂತಹ ದುರ್ಘಟನೆ ಮೊದಲ‌ ಬಾರಿಗೆ ಇಲ್ಲಿ ನಡೆಯುತ್ತಿದೆ" ಎಂದರು.

ಇದೇ ಸಂದರ್ಭದಲ್ಲಿ ಮಲ್ಯ ಆಸ್ಪತ್ರೆ ವೈದ್ಯ ಡಾ.ದಿವಾಕರ್ ರವರು ಮಾತನಾಡಿ ನ್ಯಾ.ವಿಶ್ವನಾಥ್ ಶೆಟ್ಟಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ನಾಳೆ ಲೋಕಾಯುಕ್ತರನ್ನು ಡಿಸ್ಚಾರ್ಜ್ ಮಾಡ್ತಾ ಇದ್ದೇವೆ, ಅವರು ಸಂಪೂರ್ಣ ಗುಣಮುಖವಾಗಲು ಒಂದು ತಿಂಗಳ ಕಾಲಾವಕಾಶ ಬೇಕಿದೆ ಎಂದು ತಿಳಿಸಿದರು.