ಇಂದು ಸಿಎಂ ನೇತೃತ್ವದಲ್ಲಿ ಮೈಸೂರು ದಸರಾ ಮಹೋತ್ಸವ ಪೂರ್ವಭಾವಿ ಸಭೆ

ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ದಸರಾ ಪೂರ್ವಭಾವಿ ಸಭೆ ನಡೆಯಲಿದೆ. 

Updated: Jul 11, 2018 , 11:55 AM IST
ಇಂದು ಸಿಎಂ ನೇತೃತ್ವದಲ್ಲಿ ಮೈಸೂರು ದಸರಾ ಮಹೋತ್ಸವ ಪೂರ್ವಭಾವಿ ಸಭೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ- 2018 ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. 

ಇಂದು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ನಡೆಯಲಿರುವ ಸಭೆಯಲ್ಲಿ ದಸರಾ ಮಹೋತ್ಸವ ಆಚರಣೆ ಪೂರ್ವ ತಯಾರಿ, ಗಣ್ಯರ ಆಯ್ಕೆ, ಮಹೋತ್ಸವದ ಉದ್ಘಾಟನೆ, ವೆಚ್ಚ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ ನಡೆಸಲಿದ್ದಾರೆ.

ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.