PSI Recruitment Scam: ಅಕ್ರಮದಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಮುಖಂಡನ ಬಂಧನ

ಬೆಂಗಳೂರು-ಕಲಬುರಗಿಯ ಸಿಐಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮಹಾಂತೇಶ್ ಪಾಟೀಲ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Written by - Puttaraj K Alur | Last Updated : Apr 22, 2022, 02:54 PM IST
  • ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡನ ಬಂಧನ
  • ಕಲಬುರಗಿ ಜಿಲ್ಲೆ ಅಫಜಲಪುರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್ ಪಾಟೀಲ್‌ ಅರೆಸ್ಟ್
  • ಬ್ಲೂಟೂತ್ ಡಿವೈಸ್ ಬಳಕೆ ಮಾಡಿ ಪರೀಕ್ಷೆ ಬರೆಯುಸುವಲ್ಲಿ ಆರೋಪಿ ಅಕ್ರಮ ಎಸಗಿದ್ದ
PSI Recruitment Scam: ಅಕ್ರಮದಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಮುಖಂಡನ ಬಂಧನ title=
ಕಾಂಗ್ರೆಸ್ ಮುಖಂಡನ ಬಂಧನ

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡನನ್ನು ಬಂಧಿಸಲಾಗಿದೆ. ಅಕ್ರಮದಲ್ಲಿ ಭಾಗಿಯಾಗಿದ್ದ ಕಲಬುರಗಿ ಜಿಲ್ಲೆಯ ಅಫಜಲಪುರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್ ಪಾಟೀಲ್‌ರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.

ಬೆಂಗಳೂರು-ಕಲಬುರಗಿಯ ಸಿಐಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮಹಾಂತೇಶ್ ಪಾಟೀಲ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬ್ಲೂಟೂತ್ ಡಿವೈಸ್ ಬಳಕೆ ಮಾಡಿ ಪರೀಕ್ಷೆ ಬರೆಸುವಲ್ಲಿ ಆರೋಪಿ ಅಕ್ರಮ ಎಸಗಿದ್ದ. ಸಿಐಡಿ ವಿಚಾರಣೆ ವೇಳೆ ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಗನ್‌ಮ್ಯಾನ್ ಹಯ್ಯಾಳಿ ದೇಸಾಯಿ ಈ ಪ್ರಭಾವಿ ಮುಖಂಡನ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ್ದ. ಹೀಗಾಗಿ ಕಾಂಗ್ರೆಸ್ ಮುಖಂಡ ಮಹಾಂತೇಶ್ ಪಾಟೀಲ್‍ನನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ: ‘ಆರೋಪಿಗಳಿಗೆ ಹಲಾಲ್ ಕಬಾಬ್ ನೀಡಿ ಉಪಚರಿಸಬೇಕಿತ್ತೇ?’

ಅಫಜಲಪುರ ಪಟ್ಟಣದ ನ್ಯಾಷನಲ್ ಫಂಕ್ಷನ್ ಹಾಲ್‍ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮಹಾಂತೇಶ್ ಪಾಟೀಲ್ ಮತ್ತು ಆತನ ಸಹೋದರ್ ಆರ್.ಡಿ.ಪಾಟೀಲ್ ಇದೇ ಫಂಕ್ಷನ್ ಹಾಲ್‍ನಲ್ಲಿ ನಾಳೆ 101 ಸಾಮೂಹಿಕ ವಿವಾಹ ಏರ್ಪಡಿಸಿದ್ದರು. ಬಂಧಿತ ಮಹಾಂತೇಶ್ ಪಾಟೀಲ್‍ನನ್ನು ಬಿಗಿ ಭದ್ರತೆಯಲ್ಲಿ ಅಫಜಲಪುರದಿಂದ ಕಲಬುರಗಿಯ ಸಿಐಡಿ ಕಚೇರಿಗೆ ಕರೆತರಲಾಗಿದೆ. ಸಿಐಡಿ ಅಧಿಕಾರಿಗಳ ಆತನ ಶರ್ಟ್ ಕಾಲರ್ ಪಟ್ಟಿ ಹಿಡಿದು ಸಿಐಡಿ ಕಚೇರಿಯೊಳಗೆ ಕರೆದ್ಯೊಯ್ದರು. ನಾಳೆ ನಡೆಯಲಿರುವ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮದ ಸಿದ್ಧತೆಯಲ್ಲಿದ್ದ ಮಹಾಂತೇಶ್ ಪಾಟೀಲ್‍ಗೆ ಸಿಐಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಬಂಧನದ ವೇಳೆ ಹೈಡ್ರಾಮಾ!

ಕಾಂಗ್ರೆಸ್ ಮುಖಂಡ ಮಹಾಂತೇಶ್ ಪಾಟೀಲ್‍ನನ್ನು ಸಿಐಡಿ ಅಧಿಕಾರಿಗಳು ಬಂಧಿಸುವ ವೇಳೆ ಹೈಡ್ರಾಮಾ ನಡೆದಿದೆ. ಮಹಾಂತೇಶ್ ಬಂಧನಕ್ಕೆ ಸಿಐಡಿ ಅಧಿಕಾರಿಗಳಿಗೆ ಆತನ ಬೆಂಬಲಿಗರು ಅಡ್ಡಿಪಡಿಸಿದ್ದಾರೆ. ಮಹಾಂತೇಶ್‍ನನ್ನು ಬಂಧಿಸಿ ಕರೆ ತರುವ ವೇಳೆ ಸಿಐಡಿ ಅಧಿಕಾರಿಗಳಿಗೆ ಅವಾಜ್ ಹಾಕಲಾಗಿದೆ. ಅಜ್ಞಾತ ಸ್ಥಳದಿಂದಲೇ ಸಿಐಡಿ ಅಧಿಕಾರಿಗಳಿಗೆ ಕರೆ ಮಾಡಿದ ಮಹಾಂತೇಶ್ ಸಹೋದರ ಆರ್.ಡಿ.ಪಾಟೀಲ್ ಅವಾಜ್ ಹಾಕಿದ್ದಾನೆ. ‘ನನ್ನ ಸಹೋದರನನ್ನು ಏಕೆ ಬಂಧಿಸಿದ್ದಿರಿ? ನಿಮ್ಮನ್ನು ನೋಡಿಕೊಳ್ಳತ್ತೇನೆ' ಎಂದು ಸಿಡಿಐ ಅಧಿಕಾರಿಗಳಿಗೆ ಏಕವಚನದಲ್ಲಿಯೇ ಅವಾಜ್ ಹಾಕಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ ಗಲಭೆಗೂ ಕೆಜಿ ಹಳ್ಳಿ, ಡಿ ಜೆ ಹಳ್ಳಿ ಗಲಭೆಗೂ ಸಾಮ್ಯತೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News