ಕೊಡಗಿನಲ್ಲಿ ಮತ್ತೆ ವರುಣನ ಆರ್ಭಟ: ರೆಡ್ ಅಲರ್ಟ್ ಘೋಷಣೆ, ಸೆ.5ರಂದು ಶಾಲಾ, ಕಾಲೇಜುಗಳಿಗೆ ರಜೆ

ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸೆಪ್ಟೆಂಬರ್ 5 ರಂದು ಶಾಲಾ, ಕಾಲಾಜುಗಳಿಗೆ ರಜೆ ಘೋಷಿಸಲಾಗಿದೆ.

Last Updated : Sep 4, 2019, 09:49 PM IST
ಕೊಡಗಿನಲ್ಲಿ ಮತ್ತೆ ವರುಣನ ಆರ್ಭಟ: ರೆಡ್ ಅಲರ್ಟ್ ಘೋಷಣೆ, ಸೆ.5ರಂದು ಶಾಲಾ, ಕಾಲೇಜುಗಳಿಗೆ ರಜೆ title=

ಕೊಡಗು: ಕೆಲ ದಿನಗಳ ಹಿಂದಷ್ಟೇ ಭಾರೀ ಮಳೆಯಿಂದಾಗಿ ತತ್ತರಿಸಿದ್ದ ಕೊಡಗಿನಲ್ಲಿ ಮತ್ತೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. 

ಈಗಾಗಲೇ ಅತಿವೃಷ್ಟಿಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ತಗ್ಗು ಪ್ರದೇಶಗಳಲ್ಲಿ, ನದಿ ಪಾತ್ರ ಮತ್ತು ಬೆಟ್ಟಗುಡ್ಡಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸೆಪ್ಟೆಂಬರ್ 5 ರಂದು ಶಾಲಾ, ಕಾಲಾಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನ್ನೀಸ್ ಕಣ್ಮಣಿ ಹೇಳಿದ್ದಾರೆ. 

ಮಳೆ ಅನಾಹುತದಿಂದಾಗುವ ಯಾವುದೇ ಸಂಸ್ಯೆಗಲ್ಗೆ ತುರ್ತು ಸೇವಗಾಗಿ ಸಹಾಯವಾಣಿ ಕೇಂದ್ರಗಳನ್ನೂ ಸಹ ಜಿಲ್ಲೆಯಲ್ಲಿ ತೆರೆಯಲಾಗಿದೆ. ಜತೆಗೆ 24x7 ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 08272-221077 ಅಥವಾ ವಾಟ್ಸಪ್ ಸಂಖ್ಯೆ 8550001077 ಸಂಪರ್ಕಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 

Trending News