ಕಾಂಗ್ರೆಸ್ ಅಭ್ಯರ್ಥಿಯಾಗಿ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸ್ಪರ್ಧೆ?

 ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೇಟ್ ಆಕಾಂಕ್ಷಿಯಾಗಿ  ರಾಕ್ ಲೈನ್ ವೆಂಕಟೇಶ್ ಅರ್ಜಿ ಸಲ್ಲಿಸಿದ್ದಾರೆ.

Updated: Mar 13, 2018 , 11:50 AM IST
ಕಾಂಗ್ರೆಸ್ ಅಭ್ಯರ್ಥಿಯಾಗಿ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸ್ಪರ್ಧೆ?

ಬೆಂಗಳೂರು: ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ರಾಜಕೀಯ ಪ್ರವೇಶಿಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೇಟ್ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಆಹ್ವಾನಿಸಿದ್ದ ಆಕಾಂಕ್ಷಿಗಳ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಿರುವ ರಾಕ್ಲೈನ್ ವೆಂಕಟೇಶ್, ತಾವು ಹುಟ್ಟಿ ಬೆಳೆದ ಮಲ್ಲೇಶ್ವರಂ ಕ್ಷೇತ್ರದಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಈ ಮೂಲಕ ರಾಜಕೀಯ ಭವಿಷ್ಯವನ್ನೂ ಪರೀಕ್ಷಿಸಲು ರಾಕ್ಲೈನ್ ಮುಂದಾಗಿದ್ದಾರೆ.

ಅಷ್ಟೇ ಅಲ್ಲದೆ, ಈ ಕ್ಷೇತ್ರದಲ್ಲಿ ರಾಕ್​​ಲೈನ್​ ವೆಂಕಟೇಶ್​ ಸೇರಿದಂತೆ ಸಚಿವ ಎಂ.ಆರ್. ಸೀತಾರಾಂ, ಕೆಂಗಲ್​ ಹನುಮಂತಯ್ಯರ ಮೊಮ್ಮಗ ಕೆಂಗಲ್ ಶ್ರೀಪಾದ ರೇಣು, ಮಾಜಿ ಶಾಸಕ ಲಕ್ಕಣ್ಣರ ಪುತ್ರ ಗಿರೀಶ್ ಲಕ್ಕಣ್ಣ, 2013 ರ ಚುನಾವಣೆಯ ಪರಾಜಿತ ಅಭ್ಯರ್ಥಿ ಬಿ.ಕೆ.ಶಿವರಾಂ, ಜೊತೆಗೆ ಅವರ ಪುತ್ರ ರಕ್ಷಿತ್ ಶಿವರಾಂ ಕೂಡ ಕಾಂಗ್ರೆಸ್​ನ ಟಿಕೆಟ್​ ಗಾಗಿ ಪೈಪೋಟಿ ನಡೆಸುತ್ತಿದ್ದಾರೆ ಎನ್ನಲಾಗಿದೆ. 

ಏನೇ ಆಗಲಿ, ಕಾಂಗ್ರೆಸ್ ರಾಕ್ಲೈನ್ ಅವರಿಗೆ ಟಿಕೆಟ್ ನೀಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.