ಲೋಕಸಭೆ ಫಲಿತಾಂಶ ಬಂದ ನಂತರ ಶಿಂದೆಯೇ ಮಾಜಿ ಆಗುತ್ತಾರೆ - ಎಂ ಬಿ ಪಾಟೀಲ್

ಜೂನ್ ಮೊದಲ ವಾರದ ನಂತರ ಶಿಂದೆ ಅವರ ಸರಕಾರವೇ ಪತನವಾಗಿ,ಅವರೇ ಮಾಜಿ ಆಗಲಿದ್ದಾರೆ ಎಂದು ಎಂ ಬಿ ಪಾಟೀಲ್ ಅವರು ಭವಿಷ್ಯ ನುಡಿದಿದ್ದಾರೆ.

Written by - Ranjitha R K | Last Updated : May 13, 2024, 03:41 PM IST
  • ಏಕನಾಥ ಶಿಂದೆ ವಿರುದ್ದ ಎಂ ಬಿ ಪಾಟೀಲ್ ಕಿಡಿ
  • ಶಿಂದೆಯೇ ಮಾಜಿ ಆಗಲಿದ್ದಾರೆ ಎಂದ ಪಾಟೀಲ್
  • ಬೇರೆ ಪಕ್ಷಕ್ಕೆ ಹೋಗುವ ದಡ್ಡರು ಯಾರೂ ಇಲ್ಲ
ಲೋಕಸಭೆ ಫಲಿತಾಂಶ ಬಂದ ನಂತರ ಶಿಂದೆಯೇ ಮಾಜಿ ಆಗುತ್ತಾರೆ - ಎಂ ಬಿ ಪಾಟೀಲ್  title=

ಬೆಂಗಳೂರು : ಲೋಕಸಭೆ ಚುನಾವಣೆಯ ಬಳಿಕ ಕರ್ನಾಟಕ ಸರಕಾರ ಉರುಳಿ ಬೀಳಲಿದೆ ಎನ್ನುತ್ತಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಮೊದಲು ಸಂವಿಧಾನ ಮತ್ತು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಅರ್ಥ ಮಾಡಿಕೊಳ್ಳಲಿ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಲೋಕಸಭಾ ಚುನಾವಣೆ ನಂತರ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ 20 ಶಾಸಕರು ಕಾಂಗ್ರೆಸ್ಸನ್ನು ಸೇರಲಿದ್ದು,ಅವರೆಲ್ಲರೂ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಸರಕಾರ ಬೀಳಿಸಲು ಇದು ಮಹಾರಾಷ್ಟ್ರವಲ್ಲ.ಜೂನ್ ಮೊದಲ ವಾರದ ನಂತರ ಶಿಂದೆ ಅವರ ಸರಕಾರವೇ ಪತನವಾಗಿ,ಅವರೇ ಮಾಜಿ ಆಗಲಿದ್ದಾರೆ ಎಂದು ಅವರು ಭವಿಷ್ಯ ನುಡಿದರು.

ಇದನ್ನೂ ಓದಿ : ಕರ್ನಾಟಕದಲ್ಲಿ ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ 136 ಶಾಸಕರಿದ್ದೇವೆ.ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲು ನಮ್ಮ 89 ಶಾಸಕರು ಬಿಜೆಪಿಗೆ ಹೋಗಬೇಕು.ಈಗ ಬೇರೆ ಪಕ್ಷಕ್ಕೆ ಹೋಗುವ ದಡ್ಡರು ಯಾರೂ ಇಲ್ಲ ಎಂದು ಅವರು ವಿವರಿಸಿದರು.

ಏಕನಾಥ ಶಿಂದೆಗೆ ಶಕ್ತಿ ಇದ್ದರೆ ನಮ್ಮ ಐದು ಶಾಸಕರನ್ನು ಮೊದಲು ತಮ್ಮತ್ತ ಸೆಳೆದುಕೊಂಡು ತೋರಿಸಲಿ.ಇನ್ನು ಒಂದೆರಡು ತಿಂಗಳಲ್ಲಿ ಆ ರಾಜ್ಯದಲ್ಲಿ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಮಹಾವಿಕಾಸ ಅಘಾಡಿ ಮೈತ್ರಿಕೂಟದ ಸರಕಾರ ಬರಲಿದೆ ಎಂದು ಪಾಟೀಲ ಹೇಳಿದ್ದಾರೆ.

ಇದನ್ನೂ ಓದಿ : "ಬರಗಾಲದ ಪರಿಸ್ಥಿತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ, ನಿಮ್ಮ ಶುಭ ಹಾರೈಕೆಯೊಂದೇ ಸಾಕು" 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News