ಬಾದಾಮಿಗೆ ಅಗತ್ಯ ಸೌಲಭ್ಯ ಕಲ್ಪಿಸಿ; ಸಿಎಂಗೆ 3 ಪತ್ರ ಬರೆದ ಸಿದ್ದರಾಮಯ್ಯ!

ಬಾದಾಮಿ ನಗರಕ್ಕೆ ಹಲವು ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗೆ 3 ಪತ್ರಗಳನ್ನು ಬರೆದಿದ್ದಾರೆ.

Last Updated : Jul 10, 2018, 06:01 PM IST
ಬಾದಾಮಿಗೆ ಅಗತ್ಯ ಸೌಲಭ್ಯ ಕಲ್ಪಿಸಿ; ಸಿಎಂಗೆ 3 ಪತ್ರ ಬರೆದ ಸಿದ್ದರಾಮಯ್ಯ! title=

ಬಾಗಲಕೋಟೆ : ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಶಾಸಕ ಸಿದ್ದರಾಮಯ್ಯ ಅವರ ಪತ್ರ ಸಮರ ಮುಂದುವರೆದಿದ್ದು, ಬಾದಾಮಿ ನಗರಕ್ಕೆ ಹಲವು ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗೆ 3 ಪತ್ರಗಳನ್ನು ಬರೆದಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರಗಳಲ್ಲಿ ಸ್ಪರ್ಧಿಸಿ, 
ಬಾದಾಮಿ ಕ್ಷೇತ್ರದಲ್ಲಿ ಮಾತ್ರ ಜಯಗಳಿಸಿದ್ದ ಸಿದ್ದರಾಮಯ್ಯ ಅವರು, ಈಗ ಸಂಪೂರ್ಣ ಬಾದಾಮಿ ಕ್ಷೇತ್ರದ ಅಭಿವೃದ್ಧಿಗಾಗಿ ಪಣ ತೊಟ್ಟಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ 3 ಪತ್ರಗಳನ್ನು ಬರೆದಿದ್ದು, ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ, ಬಾದಾಮಿಯ ಕೆರೂರು ನಗರಕ್ಕೆ ಸರ್ಕಾರಿ ಐಟಿಐ ಕಾಲೇಜು ಮತ್ತು ಗುಳೇದಗುಡ್ಡ ನಗರಕ್ಕೆ ಪಶು ವೈದ್ಯಕೀಯ ಕಾಲೇಜು ಮಂಜೂರು ಮಾಡುವಂತೆ ಕೋರಿದ್ದಾರೆ. 

ಅಲ್ಲದೆ, ಸರ್ಕಾರಿ ಐಟಿಐ ಕಾಲೇಜು ಮಂಜೂರಾತಿ ಸಂಬಂಧ ಕಾರ್ಮಿಕ ಸಚಿವ ವೆಂಕಟರಮಣಪ್ಪಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಪಶು ವೈದ್ಯಕೀಯ ಕಾಲೇಜು ಮತ್ತು ತಾಂತ್ರಿಕ ಮಹಾವಿದ್ಯಾಲಯ ಮಂಜೂರಾತಿಗಾಗಿ ನೇರವಾಗಿ ಮುಖ್ಯಮಂತ್ರಿಗೆ ಮನವಿ ಪತ್ರ ಬರೆದಿದ್ದಾರೆ. 

ಈ ಮೊದಲು ಗುಳೇದಗುಡ್ಡ ದಲ್ಲಿ ಗಾರ್ಮೆಂಟ್ಸ್ ಪಾಕ್೯, ಬಾದಾಮಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ, ಕೆರೆಗಳಿಗೆ ನೀರು ತುಂಬುವ ಯೋಜನೆ ಬಗ್ಗೆ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಆಯಾ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಭೆ ನಡೆಸುವಂತೆ ಸೂಚಿಸಿದ್ದರು. ಇದೀಗ ಮತ್ತೆ ಕ್ಷೇತ್ರದ ಅಗತ್ಯತೆಗಳ ಬಗ್ಗೆ ಮುಖ್ಯಮಂತ್ರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಮತ್ತೆ  ಸಿದ್ದರಾಮಯ್ಯ ಸರ್ಕಾರಕ್ಕೆ ಪತ್ರಗಳನ್ನು ಬರೆದಿದ್ದಾರೆ.

Trending News