ಅಧಿಕಾರಿಗಳು ಕರ್ತವ್ಯದಲ್ಲಿ ನಿರ್ಲಕ್ಷ್ಯ-ಉದಾಸೀನ ತೋರಿಸಿದ್ರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Udupi Progress review meeting: ಅಧಿಕಾರಿಗಳಿಗೆ ಸ್ಥಾನಮಾನ, ಸಂಬಳ, ಸವಲತ್ತುಗಳು ಸಿಗುವುದು ಜನರ ತೆರಿಗೆ ಹಣದಿಂದ. ಜನಸ್ಪಂದನೆಗಾಗಿ ಕೆಲಸ ಮಾಡಲು ಸಾಕಷ್ಟು ಅಧಿಕಾರಿಗಳು ಇದ್ದಾರೆ. ಜನ ಸ್ಪಂದನೆಗೆ ಸಿದ್ಧರಿಲ್ಲದವರು ಸ್ಥಾನ ತ್ಯಾಗ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Written by - Puttaraj K Alur | Last Updated : Aug 1, 2023, 05:31 PM IST
  • ಜನ ಸ್ಪಂದನೆಗೆ ಸಿದ್ಧರಿಲ್ಲದ ಅಧಿಕಾರಿಗಳು ತಮ್ಮ ಸ್ಥಾನ ತ್ಯಾಗ ಮಾಡಬೇಕು
  • ಜನಸ್ಪಂದನೆಗಾಗಿ ಕೆಲಸ ಮಾಡಲು ಸಾಕಷ್ಟು ಅಧಿಕಾರಿಗಳು ಇದ್ದಾರೆ
  • ಅಧಿಕಾರಿಗಳಿಗೆ ಸ್ಥಾನಮಾನ, ಸಂಬಳ, ಸವಲತ್ತುಗಳು ಸಿಗುವುದು ಜನರ ತೆರಿಗೆ ಹಣದಿಂದ
ಅಧಿಕಾರಿಗಳು ಕರ್ತವ್ಯದಲ್ಲಿ ನಿರ್ಲಕ್ಷ್ಯ-ಉದಾಸೀನ ತೋರಿಸಿದ್ರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ   title=
ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ!

ಬೆಂಗಳೂರು: ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು. ಪಕ್ಷ-ರಾಜಕಾರಣ ಚುನಾವಣೆ ವೇಳೆ ಮಾತ್ರ. ಅಧಿಕಾರಿಗಳು ನಿರ್ಲಕ್ಷ್ಯ, ಉದಾಸೀನ ತೋರಿಸಿದರೆ, ಜನರಿಗೆ ಸ್ಪಂದಿಸದಿದ್ದರೆ ಎಷ್ಟೇ ದೊಡ್ಡ ಅಧಿಕಾರಿಯಾಗಿದ್ದರೂ ಸಹಿಸಲು ಸಾಧ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಉಡುಪಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ, ಅಧಿಕಾರಿಗಳಿಗೆ ಒಂದಷ್ಟು ಸಲಹೆ-ಸೂಚನೆಗಳನ್ನು ನೀಡಿದರು. ‘ಜನ ಸ್ಪಂದನೆಗೆ ಸಿದ್ಧರಿಲ್ಲದವರು ಸ್ಥಾನ ತ್ಯಾಗ ಮಾಡಿ. ಜನಸ್ಪಂದನೆಗಾಗಿ ಕೆಲಸ ಮಾಡಲು ಸಾಕಷ್ಟು ಅಧಿಕಾರಿಗಳು ಇದ್ದಾರೆ. ಅಧಿಕಾರಿಗಳಿಗೆ ಸ್ಥಾನಮಾನ, ಸಂಬಳ, ಸವಲತ್ತುಗಳು ಸಿಗುವುದು ಜನರ ತೆರಿಗೆ ಹಣದಿಂದ. ಜಿಲ್ಲಾಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕೆಲಸ ಮಾಡಬಾರದು. ಸ್ಥಳಕ್ಕೆ ಕಡ್ಡಾಯವಾಗಿ ಭೇಟಿ ನೀಡಬೇಕು. ಜಿಲ್ಲಾ ರಕ್ಷಣಾಧಿಕಾರಿಗಳು ಠಾಣೆಗಳಿಗೆ ಭೇಟಿ ನೀಡಬೇಕು. ದೂರುಗಳು ಬಂದಾಗ ಮೊದಲು ಎಫ್ಐಆರ್ ದಾಖಲಿಸಿಕೊಳ್ಳಬೇಕು’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಿಮ್ಮಪ್ಪನಿಗೆ ನಂದಿನಿ ತುಪ್ಪ ಕೊಡದ ಬಿಜೆಪಿ ಹಿಂದೂ ವಿರೋಧಿ ಅಲ್ಲವೇ?: ಕಾಂಗ್ರೆಸ್

‘ಮಳೆ ಅನಾಹುತಗಳಲ್ಲಿ ಪೂರ್ಣ ಮನೆ ಹಾನಿ ಆಗಿದ್ದರೆ 5 ಲಕ್ಷ ರೂ. ಪರಿಹಾರ ನೀಡಬೇಕು. ಇದು ಸರ್ಕಾರದ ನಿರ್ಧಾರ. ಮನೆ ಸ್ವಂತ ಜಾಗದಲ್ಲಿ ಕಟ್ಟಿದ್ದಾರೋ-ಇಲ್ಲವೋ, ಹಕ್ಕು ಪತ್ರ ಇದೆಯೋ-ಇಲ್ಲವೋ ಎನ್ನುವುದನ್ನು ನೋಡದೆ ಮಳೆಯಿಂದ ಬಿದ್ದ ಮನೆಗೆ ಕೂಡಲೇ ಪರಿಹಾರ ನೀಡಬೇಕು. ಸಂತ್ರಸ್ತರಿಗೆ ಮೊದಲು ಸೂರು ದೊರಕುವಂತಾಗಬೇಕು. ಮಳೆ ಹಾನಿಗೆ ಸಂಬಂಧಪಟ್ಟಂತೆ ಸಂಪೂರ್ಣ ಸಮೀಕ್ಷೆ ನಡೆಸಿ, ಬೆಳೆ ಹಾನಿಗೊಳಗಾದವರಿಗೆ ತಪ್ಪದೆ ಪರಿಹಾರ ಸಿಗಬೇಕು. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸಬೇಕು. ಬೆಳೆ ಹಾನಿ ಆದವರಿಗೆ ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಿಸಬೇಕು. ಒಮ್ಮೆ ಬೆಳೆ ಪರಿಹಾರ ಕೊಟ್ಟ ಬಳಿಕ ಪರ್ಯಾಯ ಬೆಳೆ ಬೆಳೆ ಬೆಳೆಯಲು ಅಗತ್ಯವಾದ ಬೀಜ-ಗೊಬ್ಬರ ಸೇರಿದಂತೆ ಎಲ್ಲಾ ಸವಲತ್ತುಗಳನ್ನು ಒದಗಿಸಬೇಕು. ಅಡಿಕೆ ಬೆಳೆಗೆ ಬಂದಿರುವ ಎಲೆಚುಕ್ಕೆ ರೋಗದ ಬಗ್ಗೆ ಕೃಷಿ ವಿಜ್ಞಾನಿಗಳ ನೆರವು ಪಡೆದು ಪರಿಹಾರ ಕಂಡುಕೊಳ್ಳಬೇಕು’ ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

‘ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದ ಜನರಿಗೆ ಕಾಲು ಸಂಕದಿಂದ ಆಗುತ್ತಿರುವ ಅನಾಹುತಗಳನ್ನು ತಪ್ಪಿಸಲು ಅಗತ್ಯವಿರುವ ಕಡೆ ಸೇತುವೆಗಳನ್ನು ನಿರ್ಮಿಸಬೇಕು. ನರೇಗಾ ಮತ್ತು ಲೋಕೋಪಯೋಗಿ ಇಲಾಖೆ ಜಂಟಿಯಾಗಿ ಸೇತುವೆಗಳನ್ನು ನಿಮಿಸಲು ಯೋಜನೆ ಸಿದ್ಧಪಡಿಸಿ ಮತ್ತು 2 ವರ್ಷಗಳಲ್ಲಿ ಸೇತುವೆ ನಿರ್ಮಾಣ ಕೆಲಸಗಳು ಮುಗಿಯುವ ರೀತಿಯಲ್ಲಿ ಕಾರ್ಯಪ್ರವೃತ್ತರಾಗಬೇಕು. 2015ರಲ್ಲಿ ಆರೋಗ್ಯ ಸೂಚ್ಯಂಕದಲ್ಲಿ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿತ್ತು. ಈಗ 18ನೇ ಸ್ಥಾನದಲ್ಲಿರುವುದಕ್ಕೆ ತಾಯಂದಿರು ಮತ್ತು ಮಕ್ಕಳ ಸಾವಿನ ಪ್ರಮಾಣದಲ್ಲಿ ಏರಿಕೆ ಆಗಿರುವುದು ಕಾರಣ. ಉಡುಪಿ ಸುಶಿಕ್ಷಿತರ ಜಿಲ್ಲೆ. ಆರೋಗ್ಯ ಸೂಚ್ಯಂಕದಲ್ಲಿ ಈ ಪ್ರಮಾಣದ ಕುಸಿತ ಕಂಡಿರುವುದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹೊಣೆ. ಜಿಲ್ಲೆಯನ್ನು ಮತ್ತೆ ಮೊದಲ ಸ್ಥಾನಕ್ಕೆ ತರಬೇಕು. ಇಲ್ಲದಿದ್ದರೆ ಕರ್ತವ್ಯದಿಂದ ಅಮಾನತು ಮಾಡಲಾಗುವುದು’ ಎಂದ ಸಿಎಂ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ʼನನ್ನ ಹೆಂಡತಿ ಜೊತೆಗೆ ಫೋನ್‌ನಲ್ಲಿ ಮಾತನಾಡಬೇಡʼ ಎಂದಿದ್ದಕ್ಕೆ ಅಣ್ಣನ ಕಥೆ ಮುಗಿಸಿದ ತಮ್ಮ..!

‘ಉಡುಪಿ ಜಿಲ್ಲೆ ಶೈಕ್ಷಣಿಕ ಸೂಚ್ಯಂಕದಲ್ಲಿ 13ನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಜಿಲ್ಲಾ ಶಿಕ್ಷಣಾಧಿಕಾರಿಗಳು ಹೊಣೆ. ಮುಂದಿನ ಅವಧಿ ವೇಳೆಗೆ ಜಿಲ್ಲೆಯು ಶೈಕ್ಷಣಿಕ ಸೂಚ್ಯಂಕದಲ್ಲಿ ಕಡ್ಡಾಯವಾಗಿ ಏರುಗತಿಯಲ್ಲಿ ಸಾಗಬೇಕು, ಇಲ್ಲದಿದ್ದರೆ ಇದನ್ನು ಕರ್ತವ್ಯಲೋಪವೆಂದು ಪರಿಗಣಿಸಿ ಅಮಾನತು ಮಾಡಬೇಕಾಗುತ್ತದೆ. ಉಡುಪಿ ಜಿಲ್ಲೆಯಲ್ಲಿ ರಸ್ತೆ ಗುಂಡಿಗಳು, ಅಪಘಾತ ಮತ್ತು ಸಾವುಗಳ ಪ್ರಮಾಣ ಹಾಗೂ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಳವಾಗಿದೆ. ಇದನ್ನು ಪರಿಣಾಮಕಾರಿಯಾಗಿ ನಿರ್ವಹಿಸುವುದು ಲೋಕೋಪಯೋಗಿ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಕರ್ತವ್ಯ. ಉಡುಪಿ ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ, ಕಾನೂನು ಸುವ್ಯವಸ್ಥೆ, ಮೂಲ ಸೌಕರ್ಯಗಳ ಕೊರತೆ ಆಗದಂತೆ ಎಲ್ಲಾ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಜನರಿಗೆ ಸಕಾಲದಲ್ಲಿ ಸ್ಪಂದಿಸಿ, ಅವರ ಸಮಸ್ಯೆಗಳನ್ನು ಪರಿಹರಿಸಬೇಕು’ ಎಂದು ಸಲಹೆ ನೀಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News