ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು!!

7th Pay Commission Report: ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

Written by - Savita M B | Last Updated : Mar 16, 2024, 12:05 PM IST
  • ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು
  • ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ.
  • ವರದಿಯಲ್ಲಿ ಕನಿಷ್ಠ ಮೂಲವೇತನವನ್ನು 17000 ರೂ ಗಳಿಂದ 27 ಸಾವಿರ ರೂಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ.
ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು!! title=

7th Pay Commission: ಇಂದು ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. 

ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ. ವರದಿಯಲ್ಲಿ ಕನಿಷ್ಠ ಮೂಲವೇತನವನ್ನು 17000 ರೂ ಗಳಿಂದ 27 ಸಾವಿರ ರೂಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. 

ಇದನ್ನೂ ಓದಿ-"ನಮ್ಮದೇ ಗ್ಯಾರಂಟಿ ಸ್ಕೀಂಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ"-ಸಿಎಂ ಸಿದ್ದರಾಮಯ್ಯ

ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾ ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.

ಇದನ್ನೂ ಓದಿ-ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥ : ದಾವಣೆಗೆರೆಯ ಮಲೇಬೆನ್ನೂರಿನಲ್ಲಿ ಘಟನೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News