ಕರ್ನಾಟಕ ಚುನಾವಣೆ : ಸ್ವರಾಜ್ ಇಂಡಿಯಾದಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ವರಾಜ್ ಇಂಡಿಯಾ ಪಕ್ಷ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. 

Last Updated : Apr 3, 2018, 06:44 PM IST
ಕರ್ನಾಟಕ ಚುನಾವಣೆ : ಸ್ವರಾಜ್ ಇಂಡಿಯಾದಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ  title=
Pic : Twitter/@_SwarajIndia

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ವರಾಜ್ ಇಂಡಿಯಾ ಪಕ್ಷ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. 

ಇಂದಿಲ್ಲಿ ನಡೆದ ಸಮಾರಂಭದಲ್ಲಿ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷ ಯೋಗೇಂದ್ರ ಯಾದವ್, ಮಂಡ್ಯ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಮತ್ತು ಬೆಂಗಳೂರು, ಚಾಮರಾಜನಗರ, ಚಿತ್ರದುರ್ಗ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಲಾ ಒಂದು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿದರು.

ಮಂಡ್ಯ ಜಿಲ್ಲೆಯ ಮೇಲುಕೋಟೆಯಿಂದ ದರ್ಶನ್ ಪುಟ್ಟಣ್ಣಯ್ಯ, ಮದ್ದೂರಿನಿಂದ ಹೆಸ್.ಹೆಚ್. ಲಿಂಗೇಗೌಡ, ಯಾದಗಿರಿಯಿಂದ ವೈಜಯಂತ್ ಪಾಟೀಲ್, ಮಹದೇವಪುರದಿಂದ ಪಿ. ರಮೇಶ ಚಂದ್ರ, ಚಳ್ಳಕೆರೆಯಿಂದ ಕೆ.ಪಿ,ಭೂತಯ್ಯ, ಹನೂರಿನಿಂದ ಶೈಲೇಂದ್ರ ಅವರು ಸ್ಪರ್ಧಿಸುತ್ತಿರುವುದಾಗಿ ಯಾದವ್ ತಿಳಿಸಿದರು. 

ಈಗಾಗಲೇ ರಾಜಕೀಯ ವಲಯದಲ್ಲಿ ಸಾಕಷ್ಟು ಸುದ್ದಿ ಮಾಡುತ್ತಿರುವ ಸ್ವರಾಜ್ ಇಂಡಿಯಾ ಪಕ್ಷ ಉಳಿದ ಆರು ಅಥವಾ ಅದಕ್ಕಿಂತ ಹೆಚ್ಚು ಅಭ್ಯರ್ಥಿಗಳನ್ನು ಮುಂದಿನ ದಿನಗಳಲ್ಲಿ ಘೋಷಿಸಲಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಏಪ್ರಿಲ್ 17 ರಿಂದ ನಾಮಪತ್ರ ಸಲ್ಲಿಕೆಗೆ ಚುನಾವಣಾ ಆಯೋಗ ಅವಕಾಶ ನೀಡಿದ್ದು, ಏಪ್ರಿಲ್ 25 ನಾಮಪತ್ರ ಸಲ್ಲಿಸಲು ಕಡೇ ದಿನವಾಗಿದೆ. ಮೇ 12ರಂದು ಮತದಾನ ನಡೆಯಲಿದ್ದು, ಮೇ 15 ರಂದು ಮತಎಣಿಕೆ ನಡೆಯಲಿದೆ.

Trending News