ರಾಜಕೀಯದಲ್ಲಿ ಸಂಚಲನ ಮೂಡಿಸಿದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ

    

Last Updated : May 15, 2018, 05:00 PM IST
ರಾಜಕೀಯದಲ್ಲಿ ಸಂಚಲನ ಮೂಡಿಸಿದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ  title=

ಬೆಂಗಳೂರು: ರಾಜ್ಯ ಚುನಾವಣೆಯಲ್ಲಿ ಯಾವುದೇ ಪಕ್ಷವು ಬಹುಮತ ಬರದ ಹಿನ್ನಲೆಯಲ್ಲಿ ಈಗ ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ರಚಿಸಲು ಮುಂದಾಗಿರುವುದು ಕರ್ನಾಟಕದ ರಾಜಕೀಯದಲ್ಲಿ ಮತ್ತೊಮ್ಮೆ ಸಂಚಲನ ಮೂಡಿಸಿದೆ.

ಈ ಹಿಂದೆ 2004 ರಲ್ಲಿ  ಅತಂತ್ರ ಪರಿಸ್ಥಿತಿ ಉಂಟಾಗಾದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸೇರಿ ಸಮ್ಮಿಶ್ರ ಸರ್ಕಾರವನ್ನು ರಚಿಸಿದ್ದವು. ಈಗ ರಾಜ್ಯದಲ್ಲಿ ಬಿಜೆಪಿ ಪಕ್ಷವು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರು ಸಹಿತ  ಬಹುಮತಕೆ ಮ್ಯಾಜಿಕ ನಂಬರ್ ನ್ನು ತಲುಪಿಲ್ಲ. ಈಗ ಕಾಂಗ್ರೆಸ್ ಪಕ್ಷವು ಜೆಡಿಎಸ್ ಗೆ ಮುಖ್ಯಮಂತ್ರಿ ಸ್ಥಾನವನ್ನು ಆಫರ್ ಮಾಡಿದೆ.ಇದಕ್ಕೆ ಸಕರಾತ್ಮಕವಾಗಿ ಸ್ಪಂಧಿಸಿರುವ  ಜೆಡಿಎಸ್ ಕೂಡ ಈಗ ಅಧಿಕೃತವಾಗಿ ಕಾಂಗ್ರೆಸ್ ನ ಮೈತ್ರಿ ಸರಕಾರದ ಆಹ್ವಾನಕ್ಕೆ ಪೂರಕವಾಗಿ ಸ್ಪಂಧಿಸಿದೆ. 

ಈ ಹಿನ್ನಲೆಯಲ್ಲಿ ಇಂದು ಸಾಯಂಕಾಲ ಜೆಡಿಎಸ್ ನ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನ ನಾಯಕರು ರಾಜ್ಯಪಾಲರ ಭೇಟಿ ಮಾಡಲಿದ್ದಾರೆ. ಭೇಟಿಯ ನಂತರ  ಉಭಯ ಪಕ್ಷಗಳು ಸೇರಿ ಸರ್ಕಾರವನ್ನು ರಚಿಸಲಿವೆ ಎನ್ನಲಾಗಿದೆ. ಒಂದು ಕಡೆ ದಕ್ಷಿಣ ಭಾರತದಲ್ಲಿ ಸರ್ಕಾರವನ್ನು ರಚಿಸಬೇಕೆಂದು ಪಣತೊಟ್ಟಿದ್ದ ಬಿಜೆಪಿಗೆ ಈಗ ತೀವ್ರ ಹಿನ್ನಡೆಯುಂಟಾಗಿದೆ ಎನ್ನಲಾಗಿದೆ.

 

Trending News