"ರಾಜ್ಯ ಸರ್ಕಾರ ಶೇ.50 ರಷ್ಟು ಸಬ್ಸಿಡಿ ನೀಡುತ್ತಿದೆ. ಆದರೂ ಹೆಸರು ಮಾತ್ರ ಮೋದಿಯವರ ಸಬ್ಸಿಡಿ ಎನ್ನುತ್ತಾರೆ"

CM Siddaramaiah: ಸೋಲಾರ್ ವಿದ್ಯುತ್ ಪಂಪ್ ಸೆಟ್ ಮತ್ತು ಪ್ಯಾನಲ್ ಗಳಿಗೆ ರಾಜ್ಯ ಸರ್ಕಾರದ ಸಬ್ಸಿಡಿ ಮೊತ್ತವನ್ನು ಶೇ.30 ರಿಂದ ಶೇ.50 ಕ್ಕೆ ಹೆಚ್ಚಿಸಿದೆ. ನಮ್ಮ ಸರ್ಕಾರದ ಈ ಸೌಲಭ್ಯವನ್ನು ರೈತರು ಹೆಚ್ಚೆಚ್ಚು ಬಳಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು,

Written by - Manjunath N | Last Updated : Mar 10, 2024, 01:14 AM IST
  • ಸೌರವಿದ್ಯುತ್ ಬಳಕೆಯನ್ನು ಹೆಚ್ಚೆಚ್ಚು ಮಾಡುವ ಮೂಲಕ ವಿದ್ಯುತ್ ಕೊರತೆಯನ್ನು ನೀಗಿಸಿಕೊಳ್ಳಲು ಸಾಧ್ಯವಾಗುತ್ತದೆ.
  • ಆದ್ದರಿಂದ ಈ ಬಗ್ಗೆ ರೈತರಿಗೆ ಹೆಚ್ಚೆಚ್ಚು ಮನವರಿಕೆ ಮಾಡಿಕೊಡಬೇಕು ಎಂದು ಸೂಚಿಸಿದರು.
 "ರಾಜ್ಯ ಸರ್ಕಾರ ಶೇ.50 ರಷ್ಟು ಸಬ್ಸಿಡಿ ನೀಡುತ್ತಿದೆ. ಆದರೂ ಹೆಸರು ಮಾತ್ರ ಮೋದಿಯವರ ಸಬ್ಸಿಡಿ ಎನ್ನುತ್ತಾರೆ" title=

ಬೆಂಗಳೂರು: ಸೋಲಾರ್ ವಿದ್ಯುತ್ ಗೆ ಕೇಂದ್ರ ಸರ್ಕಾರ ಕೇವಲ ಶೇ30 ರಷ್ಟು ಸಬ್ಸಿಡಿ ನೀಡುತ್ತಿದೆ. ಆದರೆ ರಾಜ್ಯ ಸರ್ಕಾರ ಶೇ.50 ರಷ್ಟು ಸಬ್ಸಿಡಿ ನೀಡುತ್ತಿದೆ. ಆದರೂ ಹೆಸರು ಮಾತ್ರ ಮೋದಿಯವರ ಸಬ್ಸಿಡಿ ಎನ್ನುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅಸಮಧಾನ ವ್ಯಕ್ತಪಡಿಸಿದರು.

ಅವರು ಜಿ.ಕೆ.ವಿ.ಕೆ ಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈತ ಸೌರಶಕ್ತಿ ಮೇಳ ಉದ್ಘಾಟಿಸಿ ಮಾತನಾಡುತ್ತಿದ್ದರು.

ದೇಶದಲ್ಲೇ ಅತಿ ಹೆಚ್ಚು ಒಣಭೂಮಿ ಹೊಂದಿರುವ ಎರಡನೇ ರಾಜ್ಯ ಕರ್ನಾಟಕ. ಹೀಗಾಗಿ ಒಣಭೂಮಿಯ ಕೃಷಿಗೆ ಆದ್ಯತೆ ನೀಡಿ ಸಂಶೋಧನೆಗಳು ನಡೆಯಬೇಕು. ಜನಸಂಖ್ಯೆ ಹೆಚ್ಚಾಗಿ ರೈತರ ಬೆಳೆಗಳ ಇಳುವರಿ ಪ್ರಮಾಣ ಕಡಿಮೆ ಆಗುತ್ತಿದೆ. ಆದ್ದರಿಂದ ಸಮಗ್ರ ಕೃಷಿಗೆ ಹೆಚ್ಚಿನ ಬೆಂಬಲ ನೀಡುವ ಸಲುವಾಗಿ ಕೃಷಿಯ ಉಪಕಸುಬುಗಳ ಬೆಳವಣಿಗೆಗೆ ಸರ್ಕಾರ ಸಂಪೂರ್ಣ ಸಹಕಾರ, ಬೆಂಬಲ ನೀಡುತ್ತಿದೆ.‌

ಪ್ರಸ್ತುತ ರಾಜ್ಯದಲ್ಲಿ 32 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಮುಂದಿನ 7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದವರಿಗೆ ಒದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್, ಅಮಾನತು

ಸೋಲಾರ್ ವಿದ್ಯುತ್ ಪಂಪ್ ಸೆಟ್ ಮತ್ತು ಪ್ಯಾನಲ್ ಗಳಿಗೆ ರಾಜ್ಯ ಸರ್ಕಾರದ ಸಬ್ಸಿಡಿ ಮೊತ್ತವನ್ನು ಶೇ.30 ರಿಂದ ಶೇ.50 ಕ್ಕೆ ಹೆಚ್ಚಿಸಿದೆ. ನಮ್ಮ ಸರ್ಕಾರದ ಈ ಸೌಲಭ್ಯವನ್ನು ರೈತರು ಹೆಚ್ಚೆಚ್ಚು ಬಳಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು,

ಸೌರವಿದ್ಯುತ್ ಬಳಕೆಯನ್ನು ಹೆಚ್ಚೆಚ್ಚು ಮಾಡುವ ಮೂಲಕ ವಿದ್ಯುತ್ ಕೊರತೆಯನ್ನು ನೀಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಆದ್ದರಿಂದ ಈ ಬಗ್ಗೆ ರೈತರಿಗೆ ಹೆಚ್ಚೆಚ್ಚು ಮನವರಿಕೆ ಮಾಡಿಕೊಡಬೇಕು ಎಂದು ಸೂಚಿಸಿದರು.

ಇವತ್ತಿನವರೆಗೂ ನಾಡಿನ ಒಂದು ಕೋಟಿ ಇಪ್ಪತ್ತು ಲಕ್ಷ ಕುಟುಂಬಗಳು ಬಳಸುತ್ತಿರುವ 200 ಯೂನಿಟ್ ವರೆಗಿನ ಉಚಿತ ವಿದ್ಯುತ್ ಗಾಗಿ ರಾಜ್ಯ ಸರ್ಕಾರ ಉಚಿತ ವಿದ್ಯುತ್ತಿನ ಬಾಬ್ತು 5,320 ಕೋಟಿ ರೂಪಾಯಿಯನ್ನು ಇಂಧನ ಇಲಾಖೆಗೆ ನೀಡಿದೆ. ನಮ್ಮ ಜನರಿಗೆ ಜೀರೋ ಬಿಲ್ ಬರುತ್ತಿದೆ. ನಮ್ಮ ಸರ್ಕಾರ ಈ ಜನೋಪಯೋಗಿ ಗ್ಯಾರಂಟಿ ಯೋಜನೆಯನ್ನು ಯಶಸ್ವಿಯಾಗಿ ಮುಂದುವರೆಸಲಿದೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಒಂದು ಕಡೆ ಬಾಂಬ್ ಭೀತಿ ಇನ್ನೊಂದು ಕಡೆ ನೀರಿನ ಭೀತಿ

ಸೌರಶಕ್ತಿ ಕ್ಷೇತ್ರದ ಹೊಸ ಆವಿಷ್ಕಾರಗಳು, ತಂತ್ರಜ್ಞಾನಗಳು ರೈತರ ಮನೆ ಬಾಗಿಲಿಗೆ ತಲುಪಿ, ಕೃಷಿಯಲ್ಲಿ ಬಳಕೆ ಆದರೆ ಮಾತ್ರ ಸಾರ್ಥಕತೆ ಬರುತ್ತದೆ. ಕೃಷಿ ಕ್ಷೇತ್ರದಲ್ಲಿ ಹೆಚ್ಚೆಚ್ಚು ಸಂಶೋಧನೆಗಳು ನಡೆದು ಅವು ರೈತರನ್ನು ಮುಟ್ಟಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ರೈತರು ಹೆಚ್ಚೆಚ್ಚು ಆಹಾರ ಬೆಳೆದು ವಿದೇಶಕ್ಕೂ ರಫ್ತು ಮಾಡುವಂತಾಗಬೇಕು. ಇದಕ್ಕೆ ನಮ್ಮ ಸರ್ಕಾರ ಸಕಲ ನೆರವು ನೀಡುತ್ತದೆ ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News