ಪಕ್ಷಕ್ಕೆ ಎಲ್ಲರೂ ಬೇಕು, ಬಂದರೆ ಜೊತೆಯಾಗಿ- ಇಲ್ಲದಿದ್ದವರನ್ನು ಬಿಟ್ಟು ಹೋಗುತ್ತೇವೆ: ಸಚಿವೆ ಶೋಭಾ ಖಡಕ್ ಮಾತು

ಅರಿಶಿಣದ ಬೆಲೆ ಪಾತಾಳಕ್ಕೆ ಕುಸಿತ ಕಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮುಂದಿನ ದಿನಗಳಲ್ಲಿ ಅಧಿಕಾರಿಗಳನ್ನು ಚಾಮರಾಜನಗರಕ್ಕೆ ಕರೆತಂದು ಅರಿಶಿಣ ಉತ್ಪನ್ನ ತಯಾರಿಕೆ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ಕೊಟ್ಟರು.

Written by - Yashaswini V | Last Updated : Mar 2, 2023, 09:57 AM IST
  • ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಇನ್ನಿತರ ನಾಯಕರು ಆಶೀರ್ವಾದ ಮಾಡಿದ್ದಾರೆ
  • ನನಗೆ ಟಿಕೆಟ್ ಫೈನಲ್ ಎನ್ನುವಂತೆ ಬಿಎಸ್ವೈ ಆಶೀರ್ವಾದ ಮಾಡಿದ್ದಾರೆ
  • ಕೊಳ್ಳೇಗಾಲದಲ್ಲಿ ಬಿಜೆಪಿ ಮತ್ತೇ ಗೆಲ್ಲಲ್ಲಿದ್ದೆ ಎಂದು ಶಾಸಕ ಎನ್. ಮಹೇಶ್ ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷಕ್ಕೆ ಎಲ್ಲರೂ ಬೇಕು, ಬಂದರೆ ಜೊತೆಯಾಗಿ- ಇಲ್ಲದಿದ್ದವರನ್ನು ಬಿಟ್ಟು ಹೋಗುತ್ತೇವೆ: ಸಚಿವೆ ಶೋಭಾ ಖಡಕ್ ಮಾತು title=

ಚಾಮರಾಜನಗರ: ಪಾರ್ಟಿ ಅನ್ನುವುದು ಸಮುದ್ರ ಇದ್ದಂತೆ ಇಲ್ಲಿ ಎಲ್ಲರೂ ಬೇಕು, ನಮ್ಮ ಜೊತೆ ಬಂದರೆ ಜೊತೆಯಾಗಿ ಹೋಗುತ್ತೇವೆ ಬರದಿದ್ದವರನ್ನು ಬಿಟ್ಟು ಹೋಗುತ್ತೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪಕ್ಷಕ್ಕೆ ಅವರು ಬೇಕು- ಇವರು ಬೇಕು ಅಂಥಲ್ಲಾ, ಎಲ್ಲರೂ ಬೇಕು, ಜೊತೆಯಾಗಿ ಬಂದರೆ ಜೊತೆಯಾಗಿ ಹೋಗುತ್ತೇವೆ, ಬರಲಿಲ್ಲವೆಂದರೇ ಬಿಟ್ಟು ಹೋಗುತ್ತೇವೆ ಎಂದು ಕೊಳ್ಳೇಗಾಲದಲ್ಲಿ ಟಿಕೆಟ್ ಆಕಾಂಕ್ಷಿ ಜಿ.ಎನ್‌‌.ನಂಜುಂಡಸ್ವಾಮಿ ಗೈರಾದ ಬಗ್ಗೆ ಕೇಳಿದ ಪ್ರಶ್ನೆಗೆ ಖಡಕ್ ಉತ್ತರ ಕೊಟ್ಟರು. 

ಇದನ್ನೂ ಓದಿ- ಬಿಜೆಪಿ ರಥಯಾತ್ರೆಗೆ ಜೆ.ಪಿ.ನಡ್ಡಾ ಚಾಲನೆ: ಅಸಮಾಧಾನದಿಂದ ಸಚಿವ ಸೋಮಣ್ಣ ಗೈರು!?

ಸಂಸದ ವಿ‌‌.ಶ್ರೀನಿವಾಸಪ್ರಸಾದ್ ಅನಾರೋಗ್ಯದ ಕಾರಣ ಮಣಿಪಾಲ್ ಆಸ್ಪತ್ರೆಯಲ್ಲಿರುವುದರಿಂದ ವಿಜಯ ಸಂಕಲ್ಪ ಯಾತ್ರೆಗೆ ಬರಲಿಲ್ಲ, ಇನ್ನು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಅವರಿಗೂ ಸಣ್ಣ ಆರೋಗ್ಯ ತೊಂದರೆ ಕಾಣಿಸಿಕೊಂಡಿದೆ ಎಂದು ಕರೆ ಮಾಡಿ ತಿಳಿಸಿದ್ದಾರೆ ಎಂದು ಸೋಮಣ್ಣ ಗೈರಾದದ್ದಕ್ಕೆ ಸ್ಪಷ್ಟನೆ ಕೊಟ್ಟರು. 

ಅರಿಶಿಣದ ಬೆಲೆ ಪಾತಾಳಕ್ಕೆ ಕುಸಿತ ಕಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮುಂದಿನ ದಿನಗಳಲ್ಲಿ ಅಧಿಕಾರಿಗಳನ್ನು ಚಾಮರಾಜನಗರಕ್ಕೆ ಕರೆತಂದು ಅರಿಶಿಣ ಉತ್ಪನ್ನ ತಯಾರಿಕೆ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ಕೊಟ್ಟರು.

ಇದನ್ನೂ ಓದಿ- ಮುಂದೆ ಸಂಭವಿಸುವ ಎಲ್ಲಾ ಅವಘಡಗಳಿಗೆ ಬಿಜೆಪಿ ಸರ್ಕಾರವೇ ಹೊಣೆ ಹೊರಬೇಕು: ಸಿದ್ದರಾಮಯ್ಯ

ನನಗೆ ನಾಯಕರ ಆಶೀರ್ವಾದ ಇದೆ:  
ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಇನ್ನಿತರ ನಾಯಕರು ಆಶೀರ್ವಾದ ಮಾಡಿದ್ದಾರೆ, ನನಗೆ ಟಿಕೆಟ್ ಫೈನಲ್ ಎನ್ನುವಂತೆ ಬಿಎಸ್ವೈ ಆಶೀರ್ವಾದ ಮಾಡಿದ್ದಾರೆ, ಕೊಳ್ಳೇಗಾಲದಲ್ಲಿ ಬಿಜೆಪಿ ಮತ್ತೇ ಗೆಲ್ಲಲ್ಲಿದ್ದೆ ಎಂದು ಶಾಸಕ ಎನ್. ಮಹೇಶ್ ವಿಶ್ವಾಸ ವ್ಯಕ್ತಪಡಿಸಿದರು. 

ತಮ್ಮ ಪೋಸ್ಟರ್ ಗಳಿಗೆ ಸಗಣಿ ಎರೆಚಿದ್ದು, ಸಾಮಾಜಿಕ ಜಾಲತಾಣದಲ್ಲಿ ಅಪಮಾನ ಮಾಡುವ ಪೋಸ್ಟ್ ಗಳ ಸಂಬಂಧ ಉತ್ತರಿಸಿ, ನೆಗೆಟಿವ್ ಫೋರ್ಸ್ ಗಳನ್ನು ಎದುರಿಸಿಕೊಂಡೇ ನಾನು ಬಂದಿರುವುದು, ಧ್ವೇಷದಿಂದ ಮಾತನಾಡುವವರು ಬಹಳ ಬೇಗ ಸುಸ್ತಾಗಿಬಿಡುತ್ತಾರೆ, ಇವೆಲ್ಲವನ್ನು ಆರೋಗ್ಯಕಾರಿಯಾಗಿ ನಾನು ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News