ಬಿ.ಎಸ್.ಯಡಿಯೂರಪ್ಪ ಶಕುನಿ ಇದ್ದ ಹಾಗೆ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ

ಯಡಿಯೂರಪ್ಪ ಭಾನುವಾರ ಹೇಳಿಕೆ ನೀಡಿದ್ದಾರೆ. ಈಗಾಗಲೇ ನನ್ನ ವಿರುದ್ಧ ಹೈಕಮಾಂಡ್ ಬಳಿ ದೂರು ಕೊಟ್ಟಿದ್ದಾರೆ. ತಮ್ಮ ಮರ್ಯಾದೆ ಹೋಗಬಾರದು ಅಂತಾ ದೂರು ನೀಡಿಲ್ಲವೆಂದು ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ಯಡಿಯೂರಪ್ಪ ಶಕುನಿ ಥರ ಆಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Puttaraj K Alur | Last Updated : Dec 25, 2023, 04:38 PM IST
  • ಬಿ.ಎಸ್.ಯಡಿಯೂರಪ್ಪ ಏನು ಹೇಳುತ್ತಾರೋ ಅದು ಉಲ್ಟಾ ನಡೆದಿರುತ್ತದೆ
  • ಯಡಿಯೂರಪ್ಪ ನನ್ನ ವಿರುದ್ಧ ದೂರು ನೀಡಿದ್ದಾರೆ, ಈಗ ದೂರು ನೀಡಿಲ್ಲವೆಂದು ಹೇಳುತ್ತಿದ್ದಾರೆ
  • ಯಡಿಯೂರಪ್ಪ ಶಕುನಿ ಇದ್ದ ಹಾಗೆ ಎಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬಿ.ಎಸ್.ಯಡಿಯೂರಪ್ಪ ಶಕುನಿ ಇದ್ದ ಹಾಗೆ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ title=
ಯಡಿಯೂರಪ್ಪ ವಿರುದ್ಧ ಯತ್ನಾಳ್ ಕಿಡಿ!

ವಿಜಯಪುರ: ಮಾಜಿ ಸಿಎಂ ಬಿ.ಎಸ್.​ಯಡಿಯೂರಪ್ಪ ಶಕುನಿ ಇದ್ದ ಹಾಗೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಏನು ಹೇಳುತ್ತಾರೋ ಅದು ಉಲ್ಟಾ ನಡೆದಿರುತ್ತದೆ’ ಅಂತಾ ಟೀಕಿಸಿದ್ದಾರೆ.

ಈ ಹಿಂದೆ ಶೋಭಾ ಕರಂದ್ಲಾಜೆ ಬಿಜೆಪಿ ರಾಜ್ಯಾಧ್ಯಕ್ಷೆಯಾಗಲಿ ಎಂದಿದ್ದರು. ಯತ್ನಾಳ್ ಅವರು ವಿಪಕ್ಷ ನಾಯಕರಾಗಲು ನಮ್ಮ ಅಭ್ಯಂತರವಿಲ್ಲವೆಂದು ಬಿವೈ ವಿಜಯೇಂದ್ರ ಹೇಳಿದ್ದರು. ಅಷ್ಟರಲ್ಲಿ ಹೈಕಮಾಂಡ್​ ಬಳಿ ಎಲ್ಲಾ ಮಾತನಾಡಿಕೊಂಡು ಬಂದಿದ್ದರು. ಯಡಿಯೂರಪ್ಪ ನನ್ನ ವಿರುದ್ಧ ದೂರು ನೀಡಿದ್ದಾರೆ. ನನ್ನ ವಿರುದ್ಧ ದೂರು ನೀಡಿದರೂ ಅವರದ್ದು ಏನೂ ನಡೆಯುತ್ತಿಲ್ಲ’ವೆಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಬಿಜೆಪಿ ಘಟಕ ನವೀಕರಿಣ: ಹೊಸ ಪದಾಧಿಕಾರಿಗಳ ನೇಮಕ!

‘ಯಡಿಯೂರಪ್ಪ ಭಾನುವಾರ ಹೇಳಿಕೆ ನೀಡಿದ್ದಾರೆ. ಈಗಾಗಲೇ ನನ್ನ ವಿರುದ್ಧ ಹೈಕಮಾಂಡ್ ಬಳಿ ದೂರು ಕೊಟ್ಟಿದ್ದಾರೆ. ತಮ್ಮ ಮರ್ಯಾದೆ ಹೋಗಬಾರದು ಅಂತಾ ದೂರು ನೀಡಿಲ್ಲವೆಂದು ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ಯಡಿಯೂರಪ್ಪ ಶಕುನಿ ಥರ ಆಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯತ್ನಾಳ್​ 3ನೇ ಟಿಪ್ಪು ಎಂಬ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿರುವ ಅವರು, ‘ನಾನು 3ನೇ ಟಿಪ್ಪು ಆದರೆ ಎಂ.ಬಿ.ಪಾಟೀಲ್ 4ನೇ ಟಿಪ್ಪು ಸುಲ್ತಾನ್ ಎಂದಿದ್ದಾರೆ. ಹಿಜಾಬ್ ಆದೇಶ ವಾಪಸ್ ಎಂಬ ಸಿಎಂ ಸಿದ್ದರಾಮಯ್ಯರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ‘ಇದೇ ರೀತಿ ಡ್ರೆಸ್ ಇರಬೇಕೆಂದು ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಎಲ್ಲಿಯೂ ಹಸ್ತಕ್ಷೇಪ ಮಾಡಿಲ್ಲ. ಇಡಿ ದೇಶದಲ್ಲಿ ಎಲ್ಲಿಯೂ ಈ ವಿಷಯ ಇಲ್ಲ, ಕರ್ನಾಟಕದಲ್ಲಿ ಯಾಕೆ? ಇದು ಇವರೇ ತೆಗೆದಿದ್ದು, ಈ ವಿಚಾರ ಕಾಂಗ್ರೆಸ್​ಗೆ ಲೋಕಸಭೆಯಲ್ಲಿ ನಿಶ್ಚಿತವಾಗಿ ಮುಳುವಾಗುತ್ತದೆ’ ಅಂತಾ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಬದ್ಧ: ಸಚಿವ. ಕೆ.ಹೆಚ್ ಮುನಿಯಪ್ಪ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News