ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದೆ ಬರುತ್ತದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

    

Manjunath Naragund Manjunath Naragund | Updated: Jan 13, 2018 , 05:43 PM IST
ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದೆ ಬರುತ್ತದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ: ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಗೆಲುವು ಸಾಧಿಸುವುದರ ಮೂಲಕ ಮತ್ತೆ ಬಾರಿಗೆ ಅಧಿಕಾರಕ್ಕೆ ಬರುತ್ತದೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. 

ಶನಿವಾರದಂದು ಕರ್ನಾಟಕ ಕಾಂಗ್ರೆಸ್ ಕಾಂಗ್ರೆಸ್ ಉಸ್ತುವಾರಿ  ಕೆ.ಸಿ.ವೇಣುಗೋಪಾಲ್ ಜೊತೆಗೆ  ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ದೆಹಲಿಗೆ ಆಗಮಿಸಿದರು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಪಕ್ಷದ ಪ್ರಗತಿಯ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಂತಸ ವ್ಯಕ್ತಪಡಿಸಿದ್ದಾರೆ, 2013ರ ಚುನಾವಣೆಯ ವೇಳೆ ಪ್ರಣಾಳಿಕೆಗಳಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಪೂರೈಸಿದೆ ಎಂದು ಹೇಳಿದರು.

ರಾಹುಲ್ ಗಾಂಧಿ ನಮ್ಮ ಸರಕಾರಕ್ಕೆ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲವೆಂದು ತಿಳಿದು ಬಹಳ ಸಂತಸಗೊಂಡಿದ್ದಾರೆ. ನಮ್ಮ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿರುವ ಎಲ್ಲಾ ಕಾರ್ಯಕ್ರಮಗಳನ್ನು ಈಗಾಗಲೇ ಈಡೇರಿಸಲಾಗಿದೆ ಎಂದ ಅವರು ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಸುಲಭ ಬಹುಮತದೊಂದಿಗೆ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರವರ  ಹಿಂದೂಗಳ ಹತ್ಯೆಗಳ ಆರೋಪಕ್ಕೆ ಪ್ರತಿಕ್ರಿಯಿಸಿದ  ಸಿದ್ದರಾಮಯ್ಯ ಅವರು ಬಿಜೆಪಿಗೆ ಚರ್ಚಿಸಲು ಯಾವುದೇ ಸಮಸ್ಯೆಗಳು ಇಲ್ಲದ ಕಾರಣಕ್ಕಾಗಿ ಇಂತಹ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಬಿಜೆಪಿಯು ಕರ್ನಾಟಕದಲ್ಲಿ ಇಲ್ಲ ಸಲ್ಲದ  ಸಮಸ್ಯೆಗಳನ್ನು ಎತ್ತುತ್ತಿದೆ. ಹಿಂದುತ್ವವು ಅವರ ಏಕೈಕ ವಿಷಯವಾಗಿದೆ ಆದ್ದರಿಂದ ಯೋಗಿ ಆದಿತ್ಯನಾಥ್ ಮತ್ತು ಅಮಿತ್ ಷಾ ಕೂಡ ಇದೇ ಸಮಸ್ಯೆಯನ್ನು ಬೆಳೆಸುತ್ತಿದ್ದಾರೆ, ಮತ್ತು ಮುಂದೆ ನರೇಂದ್ರ ಮೋದಿ ಸಹ ಇದಕ್ಕೆ ಅಂಟಿಕೊಳ್ಳುಬಹುದು ಎಂದು ಬಿಜೆಪಿಯ ಮೇಲೆ ಕಿಡಿ ಕಾರಿದರು 

ಈ ವರ್ಷದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಿಯೋಗ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ, ಮೂರು ಗಂಟೆಗಳ ಕಾಲ ನಡೆದ ಸಭೆಯಲ್ಲಿ ರಾಹುಲ್  ಗಾಂಧಿಯವರು ರಾಜ್ಯದಲ್ಲಿ ಪಕ್ಷದ ಕಾರ್ಯನೀತಿಯನ್ನು ಪರಿಶೀಲಿಸಿ ಚರ್ಚಿಸಿದರು.

ಮುಂದಿನ ತಿಂಗಳು  ಫೆಬ್ರವರಿ 10 ರಿಂದ ರಾಹುಲ್ ಗಾಂಧಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಆ ಸಂದರ್ಭದಲ್ಲಿ  ಬುದ್ಧಿಜೀವಿಗಳು, ರೈತರು, ಮಹಿಳೆಯರು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ  ಜಿ.ಪರಮೇಶ್ವರ ತಿಳಿಸಿದ್ದಾರೆ. 

By continuing to use the site, you agree to the use of cookies. You can find out more by clicking this link

Close