ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

 ಯುವಕನೊಬ್ಬ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್‌ ಕಾಲೇಜು ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ. 

Updated: Jan 11, 2019 , 05:03 PM IST
ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತೆ ಅಲ್ಲೇ ಇದ್ದ ಯುವಕನೊಬ್ಬ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್‌ ಕಾಲೇಜು ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ. 

ಇಂದು ಬೆಳಿಗ್ಗೆಯಿಂದಲೇ ರೈಲ್ವೆ ನಿಲ್ದಾಣದಲ್ಲಿ ಕುಳಿತಿದ್ದ ಯುವಕವನ್ನು ಕಂಡು ಅಲ್ಲಿದ್ದವರು ವಿಚಾರಿಸಿದ್ದಾರೆ. ಆದರೆ, ಈತ ತನ್ನ ಸಂಬಂಧಿಕಾರಿಗಾಗಿ ಕಾಯುತ್ತಿರುವುದಾಗಿ ಹೇಳಿದ್ದ ಎನ್ನಲಾಗಿದೆ. ಆದರೆ, ಕೆಲ ಸಮಯದ ಬಳಿಕ ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಟ್ರ್ಯಾಕ್‌ನ 750 ವೋಲ್ಟೇಜ್‌ ವಿದ್ಯುತ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಅದೃಷ್ಟವಶಾತ್ ವೇಣು ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಯುವಕನ ತಲೆಗೆ ಬಲವಾದ ಪೆಟ್ಟಾಗಿದ್ದು, ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.