ಕರ್ಕಾಟಕ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ನೆರೆದಿದ್ದ ಸಾವಿರಾರು ಭಕ್ತರಿಗೆ ಕಾವೇರಿ ಮಾತೆ ದರ್ಶನ

ಕೊಡಗಿನ ಜನರ ಪಾಲಿಗೆ ಕಾವೇರಿ ಕೇವಲ ನದಿಯಲ್ಲ ಆಕೆ ಕೊಡಗಿನ ಜನರ ಕುಲದೇವತೆ, ಪಾಪನಾಶಿನಿ, ಬೇಡಿದ ವರವನೀಡೋ ಕರುಣಾಮಯಿ ಹಾಗಾಗಿಯೆ ಕಾವೇರಿ ತಾಯಿಯ ದರ್ಶನಕ್ಕೆ ಇಷ್ಟೊಂದು ಬಾರೀ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು.

Written by - Yashaswini V | Last Updated : Oct 18, 2023, 07:20 AM IST
  • ‌ತೀರ್ಥೋದ್ಭವದ ಸಮಯ ಹತ್ತಿರವಾದಂತೆ, ಹತ್ತಿರವಾದಂತೆ ಭಕ್ತರ ಹರ್ಷೋದ್ಘಾರ ಹೆಚ್ಚುತ್ತಲೇ ಇತ್ತು.
  • ಉಕ್ಕಿ ಬಾ ತಾಯೆ ಎಂದು ಕಾವೇರಿ ಮಾತೆಯನ್ನು ನೆನೆಯುತ್ತಾ ಭಜಿಸುತ್ತಿದ್ದರು.
  • ನಿಗದಿತ ಸಮಯದಂತೆ ಕಾವೇರಿ ಮಾತೆ ಕರ್ಕಾಟಕ ಲಗ್ನದಲ್ಲಿ ರಾತ್ರಿ 1ಗಂಟೆ 27 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು.
ಕರ್ಕಾಟಕ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ನೆರೆದಿದ್ದ ಸಾವಿರಾರು ಭಕ್ತರಿಗೆ ಕಾವೇರಿ ಮಾತೆ ದರ್ಶನ  title=

ತೀರ್ಥ ರೂಪಿಣಿಯಾದ ಕಾವೇರಿ: ಕೊಡಗಿನ ಕುಲದೇವಿ ನಾಡಿನ ಜೀವನದಿ ಮಾತೆ ಕಾವೇರಿ ನಿಗಧಿಯಂತೆ ಕರ್ಕಟಕ ಲಗ್ನದಲ್ಲಿ ರಾತ್ರಿ 1ಗಂಟೆ 26 ನಿಮಿಷಕ್ಕೆ ತೀರ್ಥ ರೂಪಿಣಿಯಾಗಿ ನೆರೆದಿದ್ದ ಸಾವಿರಾರು ಭಕ್ತರಿಗೆ ದರ್ಶನ ನೀಡಿದಳು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜ್,   ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ವೆಂಕಟರಾಜ, ಜಿ.ಪಂ. ಮುಖ್ಯಕಾಯ೯ನಿವ೯ಹಣಾಧಿಕಾರಿ ವಣಿ೯ತ್ ನೇಗಿ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್,  ಸೇರಿದಂತೆ ಅಧಿಕಾರಿಗಳು ಹಾಜರಿದ್ದರು. ಸಿನಿಮಾ ರಂಗದ ನವ ಜೋಡಿ ಭುವನ್ ಪೊನ್ನಣ್ಣ. ಹರ್ಷಿಕಾ ಪೂಣಚ್ಚ ಕೂಡ ತೀರ್ಥ ರೂಪಿಣಿಯಾದ ಕಾವೇರಿ ಮಾತೆಯನ್ನ ಕಣ್ತುತುಂಬಿಕೊಂಡರು.

ರಾಜ್ದದ ಹಲವೆಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕಾವೇರಿ ಕ್ಷೇತ್ರಕ್ಕೆ ಬಂದು ಪುಣ್ಯ ತೀಥ೯ ಸ್ವೀಕರಿಸಿದರು. ಮಂಗಳವಾರ (ಅಕ್ಟೋಬರ್ 17) ಸಂಜೆ 5 ಯಿಂದಲೇ ಪ್ರಧಾನ ಅರ್ಚಕರು ನೇತೃತ್ವದಲ್ಲಿ ಸಹಸ್ರ ನಾಮಾರ್ಚನೆ, ಪುಷ್ಪಾರ್ಚನೆ ಮತ್ತು ಕುಂಕುಮಾರ್ಚನೆ ನೆರವೇರಿಸಿದರು. 

ಮತ್ತೊಂದೆಡೆ ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಭಾಗಮಂಡಲದಿಂದ 8 ಕಿ ಲೋಮೀಟರ್ ದೂರದ ತಲಕಾವೇರಿವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿದ್ದರು. ಕೊಡವ ಸಾಂಪ್ರದಾಯಿಕ ಉಡುಗೆ ತೊಟ್ಟ ಭಕ್ತರು ಕಾವೇರಿ ಮಾತೆಯನ್ನು ನೆನೆಯುತ್ತಾ ತಲಕಾವೇರಿ ತಲುಪಿದರು. ಕೊಡಗು ಅಷ್ಟೇ ಅಲ್ಲದೆ ಹೊರ ಜಿಲ್ಲೆ ಮತ್ತು ಹೊರ ರಾಜ್ಯ ತಮಿಳುನಾಡಿನಿಂದಲೂ ಅಪಾರ ಸಂಖ್ಯೆಯ ಭಕ್ತರು ತಲಕಾವೇರಿಗೆ ಆಗಮಿಸಿದ್ದರು. 

ಇದನ್ನೂ ಓದಿ- Astro Tips: ದುರದೃಷ್ಟವನ್ನೂ ಅದೃಷ್ಟವಾಗಿ ಬದಲಾಯಿಸುತ್ತೆ ತುಳಸಿ ಎಲೆ

ಕೊಡಗಿನ ಜನರ ಪಾಲಿಗೆ ಕಾವೇರಿ ಕೇವಲ ನದಿಯಲ್ಲ ಆಕೆ ಕೊಡಗಿನ ಜನರ ಕುಲದೇವತೆ, ಪಾಪನಾಶಿನಿ, ಬೇಡಿದ ವರವನೀಡೋ ಕರುಣಾಮಯಿ ಹಾಗಾಗಿಯೆ ಕಾವೇರಿ ತಾಯಿಯ ದರ್ಶನಕ್ಕೆ ಇಷ್ಟೊಂದು ಬಾರೀ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ಬ್ರಹ್ಮಕುಂಡಿಕೆಯಲ್ಲಿ ತೀರ್ಥಸ್ವರೂಪಿಣಿಯಾಗಿ ಬರೋ ಪವಿತ್ರ ಕಾವೇರಿ ಮಾತೆಯ ಜಲವನ್ನು ಸಂಗ್ರಹಿಸಲು ಜನರು ಮುಂಜಾನೆಯಿಂದ ಕಾದು ಕುಳಿತಿದ್ದರು, ವಿಶೇಷಾಗಿ ಕಾವೇರಿ ತನ್ನ ಸಹೋದರಿ ಗಂಗೆಯೊಂದಿಗೆ ಸೇರಿ ತುಲಾ ಸಂಕ್ರಮಣದ ಈ ಕಾಲದಲ್ಲಿ ತೀರ್ಥಸ್ವರೂಪಿಣಿಯಾಗಿ ಉಕ್ಕಿಬರುವುದರಿಂದ ಈ ಸಮಯದಲ್ಲಿ ತಲಕಾವೆರಿಯಲ್ಲಿ ಪುಣ್ಯಸ್ನಾನಮಾಡಿ ತೀರ್ಥ ಸಂಗ್ರಹಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತೆಂಬ ನಂಬಿಕೆಯಿಂದ ಭಕ್ತರು ಬಾರೀ ಸಂಖ್ಯೆಯಲ್ಲಿ ಆಗಮಿಸಿದ್ದರು. ಬ್ರಹ್ಮಕುಂಕೆಯ ಮಂಭಾಗದಲ್ಲಿರೋ ಪವಿತ್ರ ಕೊಳದಲ್ಲಿ ಜನರು ನಾ ಮುಂದು ತಾ ಮುಂದು ಅಂತಾ ಮಿಂದೆದ್ದದ್ದು ವಿಶೇಷವಾಗಿತ್ತು. 

ಇದನ್ನೂ ಓದಿ- ಮಹಾಲಯ ಅಮಾವಾಸ್ಯೆ ಜಾತ್ರೆ ಸಡಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ

‌ತೀರ್ಥೋದ್ಭವದ ಸಮಯ ಹತ್ತಿರವಾದಂತೆ, ಹತ್ತಿರವಾದಂತೆ ಭಕ್ತರ ಹರ್ಷೋದ್ಘಾರ ಹೆಚ್ಚುತ್ತಲೇ ಇತ್ತು. ಉಕ್ಕಿ ಬಾ ತಾಯೆ ಎಂದು ಕಾವೇರಿ ಮಾತೆಯನ್ನು ನೆನೆಯುತ್ತಾ ಭಜಿಸುತ್ತಿದ್ದರು. ನಿಗದಿತ ಸಮಯದಂತೆ ಕಾವೇರಿ ಮಾತೆ  ಕರ್ಕಾಟಕ  ಲಗ್ನದಲ್ಲಿ ರಾತ್ರಿ 1ಗಂಟೆ  27  ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು. ತೀರ್ಥೋದ್ಭವಾಗುತ್ತಿದ್ದಂತೆ ತೀರ್ಥರೂಪಿಣಿಯಾದ ಕಾವೇರಿ ಮಾತೆಯನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಸ್ಥಳದಲ್ಲಿದ್ದ ಅರ್ಚಕರು ಭಕ್ತರಿಗೆ ಕಾವೇರಿ ತೀರ್ಥವನ್ನು  ಪ್ರೋಕ್ಷಣೆ ಮಾಡಿದರು. ಕಾವೇರಿ ಮಾತೆಯನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು ಭಕ್ತಿಭಾವ ಮೆರೆದು ಪುನೀತರಾದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News