ಬೆಂಗಳೂರು: ಕಾಂಗ್ರೆಸ್ ಸೇರಿ ವಿರೋಧ ಪಕ್ಷಗಳು ಸೇರಿ ಮಾಡಿಕೊಂಡಿರುವ ತಮ್ಮ ಒಕ್ಕೂಟಕ್ಕೆ I.N.D.I.A ಎಂಬ ಹೆಸರು ಇಟ್ಟುಕೊಂಡಿವೆ. ಈ ಒಕ್ಕೂಟವನ್ನು ಟೀಕಿಸಿದ್ದ ಪ್ರಧಾನಿ ಮೋದಿ ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ಗೆ ಹೋಲಿಸಿ ಟೀಕಿಸಿದ್ದರು. ಇದೀಗ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟ ನೀಡಿದ್ದಾರೆ.
#AnswerMadiModi ಹ್ಯಾಶ್ಟ್ಯಾಗ್ ಬಳಸಿ ಬುಧವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಪ್ರಧಾನಿ ಮೋದಿಯವರೇ, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ?’ ಎಂದು ಪ್ರಶ್ನಿಸಿದ್ದಾರೆ.
ಪ್ರಧಾನಿ @narendramodi ಅವರೇ, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ?
ಇಂಡಿಯಾ ಹೆಸರಿನ ಬಗ್ಗೆ ಇಷ್ಟೊಂದು ಅಸಹನೆ ಹೊಂದಿರುವ ನೀವು ನಿಮ್ಮದೇ ಸರ್ಕಾರದ ಕಾರ್ಯಕ್ರಮಗಳಾದ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ ಮೊದಲಾದ ಕಾರ್ಯಕ್ರಮಗಳ ಹೆಸರನ್ನೂ ಬದಲಾಯಿಸುವಿರಾ?…
— Siddaramaiah (@siddaramaiah) July 26, 2023
ಇದನ್ನೂ ಓದಿ: ಬ್ರೈನ್ ಮ್ಯಾಪಿಂಗ್ ಟೆಸ್ಟ್ನಲ್ಲಿ ಕಳ್ಳಿಯ ಅಸಲಿಯತ್ತು ಬಯಲು : ರಾಜ್ಯದಲ್ಲಿ ಇದೇ ಮೊದಲು
‘ಇಂಡಿಯಾ ಹೆಸರಿನ ಬಗ್ಗೆ ಇಷ್ಟೊಂದು ಅಸಹನೆ ಹೊಂದಿರುವ ನೀವು ನಿಮ್ಮದೇ ಸರ್ಕಾರದ ಕಾರ್ಯಕ್ರಮಗಳಾದ ‘ಮೇಕ್ ಇನ್ ಇಂಡಿಯಾ’, ‘ಸ್ಟಾರ್ಟ್ ಅಪ್ ಇಂಡಿಯಾ’, ‘ಸ್ಕಿಲ್ ಇಂಡಿಯಾ’ ಮೊದಲಾದ ಕಾರ್ಯಕ್ರಮಗಳ ಹೆಸರನ್ನೂ ಬದಲಾಯಿಸುವಿರಾ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ಸನ್ಮಾನ ಪ್ರಧಾನಿ @narendramodi ಅವರೇ.
ಭಾರತೀಯರ ನೂರಾರು ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿ ದೇಶ ಬಿಟ್ಟು ಓಡಿಹೋಗಿರುವ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ? ಅವರನ್ನು…— Siddaramaiah (@siddaramaiah) July 26, 2023
‘ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ಪ್ರಧಾನಿ ಮೋದಿಯವರೇ, ಭಾರತೀಯರ ನೂರಾರು ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿ ದೇಶ ಬಿಟ್ಟು ಓಡಿಹೋಗಿರುವ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ? ಅವರನ್ನು ನಿಮ್ಮ ಜೊತೆ ಹೋಲಿಸಬಹುದಾ?’ ಎಂದು ಕುಟುಕಿದ್ದಾರೆ.
ಇದನ್ನೂ ಓದಿ: ಸಂಸದ ಸಿದ್ದೇಶ್ವರ ಅವರಿಗೆ ವಿಡಿಯೋ ಕಾಲ್ ಮಾಡಿ ಮಹಿಳೆಯಿಂದ ಅಶ್ಲೀಲ ವರ್ತನೆ, ದೂರು ದಾಖಲು
‘ಲಲಿತ್ ಮತ್ತು ನೀರವ್ ಹೆಸರಲ್ಲಿಯೂ ಮೋದಿ ಇದೆಯಲ್ಲಾ ಎಂಬ ಸಾಮಾನ್ಯ ಪ್ರಶ್ನೆ ಕೇಳಿದ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿ, 2 ವರ್ಷ ಜೈಲು ಶಿಕ್ಷೆ ನೀಡಿ, ಲೋಕಸಭೆಯಿಂದ ಅನರ್ಹಗೊಳಿಸಲಾಯಿತು. ಈಗ ಇಂಡಿಯಾವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ಗೆ ಹೋಲಿಸಿರುವ ನಿಮ್ಮ ಹೋಲಿಕೆಗೆ ರಾಹುಲ್ ಗಾಂಧಿಯವರ ವಿರುದ್ಧದ ಕ್ರಮ ಅನ್ವಯವಾಗುವುದಿಲ್ಲವೇ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.