Diabetes Diet: ಮಧುಮೇಹಿಗಳ ಡಯಟ್ನಲ್ಲಿರಲಿ ಈ ನಾಲ್ಕು ಆಹಾರ

Diet For Diabetic Patient: ಮಧುಮೇಹ ರೋಗಿಗಳು ತಮ್ಮ ಆರೋಗ್ಯದ ವಿಷಯದಲ್ಲಿ ತುಂಬಾ ನಿಗಾವಹಿಸಬೇಕು. ಅದರಲ್ಲೂ ಅವರು ಸೇವಿಸುವ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. 

Diet For Diabetic Patient: ಮಧುಮೇಹ ರೋಗಿಗಳು ತಮ್ಮ ಆರೋಗ್ಯದ ವಿಷಯದಲ್ಲಿ ತುಂಬಾ ನಿಗಾವಹಿಸಬೇಕು. ಅದರಲ್ಲೂ ಅವರು ಸೇವಿಸುವ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಮಧುಮೇಹಿಗಳು ತಮ್ಮ ದಿನ ನಿತ್ಯದ ಡಯಟ್ನಲ್ಲಿ ಕೆಲವು ಆಹಾರಗಳನ್ನು ಸೇರಿಸುವ ಮೂಲಕ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಬಹುದು. ಅವುಗಳ ಬಗ್ಗೆ ತಿಳಿಯೋಣ... 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
  

1 /5

ಮಧುಮೇಹಿಗಳು ತಮ್ಮ ದಿನನಿತ್ಯದ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು, ಇಲ್ಲದಿದ್ದರೆ ಇತರ ಅನೇಕ ರೋಗಗಳ ಅಪಾಯ ಹೆಚ್ಚಾಗಬಹುದು.

2 /5

ಡ್ರಮ್ ಸ್ಟಿಕ್: ಸೌತ್ ಇಂಡಿಯನ್ ಖಾದ್ಯವಾದ ಸಾಂಬಾರ್ ಅಡುಗೆಯಲ್ಲಿ ಡ್ರಮ್ ಸ್ಟಿಕ್ ಅಂದರೆ ನುಗ್ಗೆ ಕಾಯಿಯನ್ನು ಹೆಚ್ಚಾಗಿ ಬಳಸಲಾಗುತ್ತದೆ. ನುಗ್ಗೆ ಕಾಯಿ  ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವಲ್ಲಿ ಪರಿಣಾಮಕಾರಿ ಎಂದು ನಿಮಗೆ ತಿಳಿದಿದೆಯೇ. ಇದು ಚಯಾಪಚಯವನ್ನು ಬಲಪಡಿಸುತ್ತದೆ.

3 /5

ಬಾಳೆ ಕಾಯಿ: ಮಧುಮೇಹಿಗಳು ಆರೋಗ್ಯವಾಗಿರಬೇಕೆಂದರೆ ನಿಮ್ಮ ಡಯಟ್ ನಲ್ಲಿ ಬಾಳೆಕಾಯಿಯನ್ನು ತಪ್ಪದೇ ಸೇರಿಸಿ. ಅದರಲ್ಲಿ ಸಕ್ಕರೆ ಅಂಶವು ತುಂಬಾ ಕಡಿಮೆಯಿರುತ್ತದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಪರಿಣಾಮಕಾರಿಯಾಗಿದೆ, ಇದರೊಂದಿಗೆ ಉದರ ಸಂಬಂಧಿತ ಸಮಸ್ಯೆಗಳಿಂದಲೂ ದೂರ ಉಳಿಯಬಹುದು.

4 /5

ನೆಲ್ಲಿ ಕಾಯಿ:  ಆಮ್ಲಾವನ್ನು ಅಂದರೆ ನೆಲ್ಲಿ ಕಾಯಿಯನ್ನು ಆಯುರ್ವೇದದ ನಿಧಿ ಎಂದು ಪರಿಗಣಿಸಲಾಗಿದೆ, ಇದರಲ್ಲಿ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್‌ಗಳಿವೆ. ಇದು ದೇಹದಲ್ಲಿ ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ನೆಲ್ಲಿಕಾಯಿಯನ್ನು ಉಪ್ಪಿನಕಾಯಿ ರೂಪದಲ್ಲಿ ಸೇವಿಸಿದರೆ, ಮಧುಮೇಹ ರೋಗಿಗಳಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ.

5 /5

 ಹಾಗಲಕಾಯಿ: ಇದು ಕಹಿ ತರಕಾರಿಯಾದರೂ ಇದರ ಔಷಧೀಯ ಗುಣಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿರುತ್ತದೆ. ಮಧುಮೇಹಿಗಳು ಹಾಗಲಕಾಯಿಯ ರಸವನ್ನು ನಿಯಮಿತವಾಗಿ ಸೇವಿಸಿದರೆ ಅವರ ರಕ್ತದಲ್ಲಿನ ಸಕ್ಕರೆಯು ಕಡಿಮೆಯಾಗುವುದು, ಜೊತೆಗೆ ಜೀರ್ಣಕ್ರಿಯೆಯು ಉತ್ತಮವಾಗಿರುತ್ತದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.