ನಿಮ್ಮ ಚರ್ಮವೇ ನೀಡುತ್ತದೆ ಹೃದಯಾಘಾತದ ಮುನ್ಸೂಚನೆ

ಹೃದಯಕ್ಕೆ ಸರಿಯಾಗಿ ರಕ್ತ ಪೂರೈಕೆ ಆಗದೆ ಹೃದಯವು ಕಾರ್ಯನಿರ್ವಹಿಸುವುದನ್ನು ನಿಲ್ಲಿಸುವುದಕ್ಕೆ ಹೃದಯಾಘಾತ ಎನ್ನುತ್ತಾರೆ. ಹೃದಯಾಘಾತಕ್ಕೂ ಮುನ್ನ ನಮ್ಮ ದೇಹದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಈ ಲಕ್ಷಣಗಳನ್ನು ಅರ್ಥ ಮಾಡಿಕೊಳ್ಳಬೇಕು. ಈ ಸಂಕೇತಗಳನ್ನು ಅರ್ಥ ಮಾಡಿಕೊಂಡರೆ ಸಂಭವಿಸಬಹುದಾದ ದೊಡ್ಡ ಅಪಘಾತವನ್ನು ತಡೆಯಬಹುದು. 

Signs of Heart Attack : ಹೃದಯಕ್ಕೆ ಸರಿಯಾಗಿ ರಕ್ತ ಪೂರೈಕೆ ಆಗದೆ ಹೃದಯವು ಕಾರ್ಯನಿರ್ವಹಿಸುವುದನ್ನು ನಿಲ್ಲಿಸುವುದಕ್ಕೆ ಹೃದಯಾಘಾತ ಎನ್ನುತ್ತಾರೆ. ಹೃದಯಾಘಾತಕ್ಕೂ ಮುನ್ನ ನಮ್ಮ ದೇಹದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಈ ಲಕ್ಷಣಗಳನ್ನು ಅರ್ಥ ಮಾಡಿಕೊಳ್ಳಬೇಕು. ಈ ಸಂಕೇತಗಳನ್ನು ಅರ್ಥ ಮಾಡಿಕೊಂಡರೆ ಸಂಭವಿಸಬಹುದಾದ ದೊಡ್ಡ ಅಪಘಾತವನ್ನು ತಡೆಯಬಹುದು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

1 /5

ಎದೆನೋವಿನ ಹೊರತಾಗಿ, ಹೃದಯಾಘಾತದ ಮೊದಲು ಅನೇಕ ಲಕ್ಷಣಗಳು ಕಾಣಿಸುತ್ತವೆ. ಚರ್ಮವು ತೆಳುವಾಗಿ, ತಿಳಿ ಬೂದು ಬಣ್ಣಕ್ಕೆ ತಿರುಗುತ್ತದೆ. ಪದೇ ಪದೇ ವಿನಾ ಕಾರಣ ಬೆವರು ಬರುತ್ತದೆ. ವಾಕರಿಕೆ, ಉಸಿರಾಟದಲ್ಲಿ ತೊಂದರೆ, ಆತಂಕ, ತಲೆಸುತ್ತುವುದು ಮುಂತಾದ ಲಕ್ಷಣಗಳು ಕಾಣಿಸುತ್ತವೆ.   

2 /5

ಪುರುಷರಿಗೆ  ಹೃದಯಾಘಾತಕ್ಕೂ ಮುನ್ನ ಎದೆ ನೋವು ಕಾಣಿಸಿಕೊಂಡರೆ, ಮಹಿಳೆಯರಿಗೆ ಉಸಿರಾಟದ ತೊಂದರೆ, ಕುತ್ತಿಗೆ ಮತ್ತು ದವಡೆಯಲ್ಲಿ ನೋವು  ಕಾಣಿಸಿಕೊಳ್ಳುತ್ತದೆ.   

3 /5

ಹೃದಯಾಘಾತದ ಅಪಾಯವನ್ನು ಹೆಚ್ಚಿಸುವ ಇನ್ನೊಂದು ಕಾರಣವೆಂದರೆ ಮಧುಮೇಹ. ಮಧುಮೇಹವು ಹೃದಯಾಘಾತದ ಅತ್ಯಂತ ಸಂದಿಗ್ದ ಲಕ್ಷಣಗಳಲ್ಲಿ ಒಂದಾಗಿದೆ. ಈ ಕಾರಣದಿಂದಾಗಿ ರೋಗಿಗೆ ಸೌಮ್ಯವಾದ ಎದೆಯುರಿ ಅಥವಾ ಎದೆ ನೋವು ಕಾಣಿಸುತ್ತದೆ. ಬಹುತೇಕ ಮಂದಿ ಈ ಹಂತವನ್ನು ನಿರ್ಲಕ್ಷಿಸಿ ಬಿಡುತ್ತಾರೆ.   

4 /5

ಆರೋಗ್ಯಕರ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯ ಸಹಾಯದಿಂದ ಮಾತ್ರ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಬಹುದು. ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು, ಎಲ್ಲಾ ಪೋಷಕಾಂಶಗಳನ್ನು ಒಳಗೊಂಡಿರುವ  ಆಹಾರವನ್ನು ತೆಗೆದುಕೊಳ್ಳಿ. 

5 /5

ಆಹಾರದಲ್ಲಿ ತರಕಾರಿಗಳನ್ನು ಸೇರಿಸಿಕೊಳ್ಳಬೇಕು. ಇದು ಅನೇಕ ಜೀವಸತ್ವಗಳು ಮತ್ತು ಖನಿಜಗಳ ಸಮೃದ್ಧ ಮೂಲವಾಗಿದೆ. ಆರೋಗ್ಯಕರ ಆಹಾರವು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.  ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)