ನಿಮ್ಮ ದುರ್ಬಲ ಕೂದಲನ್ನು ಸ್ಟ್ರಾಂಗ್ ಆಗಿಸಲು ಇಲ್ಲಿವೆ 5 ಸಿಂಪಲ್ ಟಿಪ್ಸ್

Hair Fall: ಈ ಒತ್ತಡಭರಿತ ಜೀವನ ಶೈಲಿಯಲ್ಲಿ ಕೂದಲು ಉದುರುವಿಕೆ ಸರ್ವೇ ಸಾಮಾನ್ಯವಾದ ಸಮಸ್ಯೆಯಾಗಿದೆ. ಈ ಸಮಸ್ಯೆಗೆ ಸರಿಯಾದ ಸಮಯದಲ್ಲಿ ಸೂಕ್ತ ಗಮನಹರಿಸದಿದ್ದರೆ ಭವಿಷ್ಯದಲ್ಲಿ ಇದು ಬೋಳು ತಲೆ  ಸಮಸ್ಯೆಗೂ ಕಾರಣವಾಗಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಬದಲಾದ ವಾತಾವರಣ, ಧೂಳು, ಮಾಲಿನ್ಯ, ಒತ್ತಡದ ಜೀವನಶೈಲಿ ಹೀಗೆ ಕೂದಲು ಉದುರುವಿಕೆ, ಕೂದಲು ದುರ್ಬಲಗೊಳ್ಳುವಿಕೆಗೆ ಹಲವು ಕಾರಣಗಳಿರಬಹುದು. ಆದರಿದು ಅತಿ ಚಿಕ್ಕ ವಯಸ್ಸಿನಲ್ಲಿಯೇ ಬೋಳು ತಲೆ ಸಮಸ್ಯೆಗೆ ಪ್ರಮುಖ ಕಾರಣವಾಗಬಹುದು. ಆದರೆ, ಕೆಲವು ಮನೆಮದ್ದುಗಳ ಸಹಾಯದಿಂದ ಈ ಸಮಸ್ಯೆಗೆ ಸುಲಭ ಪರಿಹಾರ ಪಡೆಯಬಹುದು. ಅಂತಕ ಕೆಲವು ಮನೆಮದ್ದುಗಳೆಂದರೆ... 

2 /6

ಕೂದಲು ದುರ್ಬಲಗೊಳ್ಳಲು ಈ ಒತ್ತಡಭರಿತ ಜೀವನಶೈಲಿ ಒಂದು ಬಹಳ ಮುಖ್ಯ ಕಾರಣ. ನಿಯಮಿತವಾಗಿ ಕೂದಲಿಗೆ ಎಣ್ಣೆ ಹಚ್ಚಿ ಮಸಾಜ್ ಮಾಡುವುದರಿಂದ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. 

3 /6

ಕೂದಲುದುರುವಿಕೆಗೆ ದೇಹದಲ್ಲಿನ ಪೋಷಕಾಂಶಗಳ ಕೊರತೆಯೂ ಕಾರಣ. ಇದನ್ನು ತಪ್ಪಿಸಲು ನಿಮ್ಮ ದೈನಂದಿನ ಆಹಾರದಲ್ಲಿ ಪ್ರೋಟೀನ್ ಮತ್ತು ವಿಟಮಿನ್‌ಗಳನ್ನು ಸೇರಿಸುವುದು ಉತ್ತಮ. ಇದು ಕೂದಲ ಬೆಳವಣಿಗೆಯನ್ನು ಪ್ರೋತ್ಸಾಹಿಸುತ್ತದೆ. 

4 /6

ಈರುಳ್ಳಿಯಲ್ಲಿ ಆಂಟಿಮೈಕ್ರೊಬಿಯಲ್ ಮತ್ತು ಉರಿಯೂತ ನಿವಾರಕ ಅಂಶಗಳು ಕಂಡುಬರುತ್ತವೆ. ಹಾಗಾಗಿ, ಈರುಳ್ಳಿ ರಸವನ್ನು ಬಳಸುವುದರಿಂದ ಇದು ಕೂದಲನ್ನು ಬೇರುಗಳಿಂದ ಬಲಗೊಳಿಸುತ್ತದೆ. 

5 /6

ದೇಹದ ಕೊಬ್ಬನ್ನು ಕಡಿಮೆ ಮಾಡುವಲ್ಲಿ ತುಂಬಾ ಪ್ರಯೋಜನಕಾರಿ ಆಗಿರುವ ಗ್ರೀನ್ ಟೀ ಯನ್ನು ಹೇರ್ ಮಾಸ್ಕ್ ಬಲಸುವುದರಿಂದ ಇದು ಕೂದಲ ಬೆಳವಣಿಗೆಯನ್ನು ಪ್ರೋತ್ಸಾಹಿಸುತ್ತದೆ. 

6 /6

ಮೆಂತ್ಯ ಬೀಜದಲ್ಲಿ ಪ್ರೋಟೀನ್, ಕಬ್ಬಿಣ ಮತ್ತು ನಿಕೋಟಿನಿಕ್ ಆಮ್ಲ ಕಂಡು ಬರುತ್ತದೆ. ಇದು ಕೂಡಲನ್ನು ಬೇರುಗಳಿಂದ ಬಲಪಡಿಸುತ್ತದೆ.  ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.