Leelavathi: ಹಿರಿಯ ನಟಿ ಲೀಲಾವತಿಯವರಿಗೆ ಸಂದ ಪ್ರಮುಖ ಪ್ರಶಸ್ತಿಗಳು

ವರನಟ ಡಾ.ರಾಜಕುಮಾರ್ ಜೊತೆ 36 ಸಿನಿಮಾಗಳಲ್ಲಿ ನಟಿಸಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ಅಭಿಮಾನಿಗಳನ್ನು ರಂಜಿಸಿದ್ದರು. ಅವರಿಗೆ ದೊರೆತ ಪ್ರಮುಖ ಪ್ರಶಸ್ತಿಗಳ ಮಾಹಿತಿ ಇಲ್ಲಿದೆ ನೋಡಿ.

Leelavathi Death: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶುಕ್ರವಾರ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ರಂಗಭೂಮಿ ಮತ್ತು ಸಿನೆಮಾಗಳಲ್ಲಿ ನಟಿಸಿದ್ದ ಲೀಲಾವತಿಯವರಿಗೆ ೮೫ ವರ್ಷ ವಯಸ್ಸಾಗಿತ್ತು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗಕ್ಕೆ ತುಂಬಲಾಗದ ನಷ್ಟವಾಗಿದೆ. ಹಿರಿಯ ನಟಿಯ ಅಗಲಿಕೆಯ ಸುದ್ದಿ ತಿಳಿದು ಅಭಿಮಾನಿಗಳು, ಆಪ್ತರು ಕಂಬನಿ ಮಿಡಿದಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಲೀಲಾವತಿಯವರು ನೀಡಿದ ಕೊಡುಗೆ ಅಪಾರ. ವರನಟ ಡಾ.ರಾಜಕುಮಾರ್ ಜೊತೆ 36 ಸಿನಿಮಾಗಳಲ್ಲಿ ನಟಿಸಿದ್ದ ಅವರು ಅಭಿಮಾನಿಗಳನ್ನು ರಂಜಿಸಿದ್ದರು. ಅವರಿಗೆ ದೊರೆತ ಪ್ರಮುಖ ಪ್ರಶಸ್ತಿಗಳ ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

‘ತುಂಬಿದ ಕೊಡ’, ‘ಮಹಾತ್ಯಾಗ’, ‘ಭಕ್ತ ಕುಂಬಾರ’, ‘ಸಿಪಾಯಿ ರಾಮು’ ಮತ್ತು ‘ಗೆಜ್ಜೆ ಪೂಜೆ’ ಸಿನಿಮಾಗಳ ನಟನೆಗೆ  ನಟಿ ಲೀಲಾವತಿಯವರಿಗೆ ರಾಜ್ಯ ಪ್ರಶಸ್ತಿ ಲಭಿಸಿದೆ. 

2 /5

‘ಕನ್ನಡದ ಕಂದ’ ಚಿತ್ರಕ್ಕೆ ಹಿರಿಯ ನಟಿ ಲೀಲಾವತಿಯವರಿಗೆ ಫಿಲ್ಮ್ ಫೇರ್​ ಪ್ರಶಸ್ತಿ ಕೂಡ ಸಿಕ್ಕಿದೆ.

3 /5

‘ಮದುವೆ ಮಾಡಿನೋಡು’ ಮತ್ತು ‘ಸಂತ ತುಕಾರಾಮ್​’ ಸಿನಿಮಾಗಳಿಗೆ ಲೀಲಾವತಿಯವರು 2 ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.

4 /5

ಜೀವಮಾನ ಸಾಧನೆಗಾಗಿ ನಟಿ ಲೀಲಾವತಿಯವರು 1999ರಲ್ಲಿ ‘ಡಾ.ರಾಜಕುಮಾರ್​ ಪ್ರಶಸ್ತಿ’ ಪಡೆದುಕೊಂಡರು.

5 /5

2008ರಲ್ಲಿ ತುಮಕೂರು ವಿಶ್ವವಿದ್ಯಾಲಯದಿಂದ ನಟಿ ಲೀಲಾವತಿಯವರಿಗೆ ಗೌರವ ಡಾಕ್ಟರೇಟ್​ ನೀಡಿ ಗೌರವಿಸಲಾಗಿದೆ.