Much Awaited South Movies: ಸೌತ್ ಅಬ್ಬರಕ್ಕೆ ಬಾಲಿವುಡ್ ಬಾಕ್ಸ್ ಆಫೀಸ್ ಮತ್ತೆ ಅಲ್ಲೋಲಕಲ್ಲೋಲ!

Much Awaited South Movies: ಸೌತ್ ನಟರ ಸಾಲು ಸಾಲು ಬಿಗ್ ಬಜೆಟ್ ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ. ಸೌತ್‍ ಸಿನಿಮಾಗಳಿಂದ ಬೆಚ್ಚಿಬಿದ್ದಿರುವ ಬಾಲಿವುಡ್ ಮಂದಿಗೆ ದೊಡ್ಡ ಶಾಕ್ ಎದುರಾಗಿದೆ. ಸೌತ್ ನಟರ ಸಿನಿಮಾಗಳು ಬಾಲಿವುಡ್ ಬಾಕ್ಸ್ ಆಫೀಸ್‍ ಅಲ್ಲೋಲಕಲ್ಲೋಲ ಮಾಡಲು ಸಿದ್ಧವಾಗಿವೆ.

Much Awaited South Movies: ಬಾಲಿವುಡ್ ಮಾತ್ರವಲ್ಲದೆ ಸೌತ್‍ನಲ್ಲೂ ಹಲವು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ತಮ್ಮ ನೆಚ್ಚಿನ ಸ್ಟಾರ್ ನಟರ ಬಹುಕೋಟಿ ವೆಚ್ಚದ ಅದ್ದೂರಿಯಾಗಿ ನಿರ್ಮಿಸಿರುವ ಸಿನಿಮಾಗಳನ್ನು ವೀಕ್ಷಿಸಲು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಈ ಸಿನಿಮಾಗಳು ಬಿಡುಗಡೆಯಾದರೆ ಬಾಕ್ಸ್ ಆಫೀಸ್ ನಲ್ಲಿ ಸಖತ್ ಸೌಂಡ್ ಮಾಡಲಿವೆ. ಸ್ಟಾರ್ ನಟರಾದ ಅಲ್ಲು ಅರ್ಜುನ್, ಪ್ರಭಾಸ್, ಎನ್‍ಟಿಆರ್ ನಟನೆಯ ಬಹುಬಜೆಟ್‍ನ ಸಿನಿಮಾಗಳನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

2021ರಲ್ಲಿ ಬಿಡುಗಡೆಯಾದ ಅಲ್ಲು ಅರ್ಜುನ್ ಅಭಿನಯದ ಪುಷ್ಪ-1(Pushpa: The Rise) ಬಾಲಿವುಡ್ ಬಾಕ್ಸ್ ಆಫೀಸ್‍ನ್ನು ಅಲುಗಾಡಿಸಿತು. ಇದೀಗ ಪುಷ್ಪ - 2ರ ಅಬ್ಬರಕ್ಕೆ ಬಾಲಿವುಡ್ ಮಂದಿ ಹೆದರಿದ್ದಾರೆ. ಈ ಸಿನಿಮಾದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಮುಂದಿನ ವರ್ಷ ಚಿತ್ರ ಬಿಡುಗಡೆಯಾಗಬಹುದು. ಈ ಚಿತ್ರ ಬಿಡುಗಡೆಗೂ ಮುನ್ನವೇ ಹಿಟ್ ಅಂತಾ ಘೋಷಿಸಲಾಗಿದೆ.

2 /5

ಸ್ಟಾರ್ ನಟ ಪ್ರಭಾಸ್ ಅಭಿನಯದ ‘ಸಲಾರ್’ ಚಿತ್ರಕ್ಕಾಗಿ ಅಭಿಮಾನಿಗಳು ಬಹಳ ದಿನಗಳಿಂದ ಕಾಯುತ್ತಿದ್ದಾರೆ. ಈ ಚಿತ್ರವು ಡಿಸೆಂಬರ್ 22ರಂದು ಬಿಡುಗಡೆಯಾಗಲದ್ದು, ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ‘ಡಂಕಿ’ಯೊಂದಿಗೆ ಫೈಟ್ ಮಾಡಲಿದೆ. ಉಭಯ ಚಿತ್ರಗಳ ನಡುವೆ ಪ್ರಚಂಡ ಪೈಪೋಟಿ ನಡೆಯಲಿದ್ದು, ಯಾರು ಗೆಲ್ಲುತ್ತಾರೆ ಅನ್ನೋದು ತೀವ್ರ ಕುತೂಹಲ ಮೂಡಿಸಿದೆ.

3 /5

ರಾಮ್ ಚರಣ್ ಅಭಿನಯದ ಈ ಚಿತ್ರಕ್ಕೆ ಮೊದಲು RC 15 ಶೀರ್ಷಿಕೆ ಇಡಲಾಗಿತ್ತು. ಆದರೆ ಇದೀಗ ‘ಗೇಮ್ ಚೇಂಜರ್’ ಎಂದು ಹೆಸರು ಬದಲಾಯಿಸಲಾಗಿದೆ. ಕಿಯಾರಾ ಅಡ್ವಾಣಿ ಮತ್ತು ರಾಮ್ ಚರಣ್ ಜೋಡಿ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲು. ನಿರ್ದೇಶಕ ಶಂಕರ್ ನಿರ್ದೇಶನದ ಈ ಚಿತ್ರ ಮುಂದಿನ ವರ್ಷ ಬಿಡುಗಡೆಯಾಗಲಿದೆ.

4 /5

ಜೂನಿಯರ್ NTR ದೊಡ್ಡ ದೊಡ್ಡ ಸಿನಿಮಾಗಳ ಮೂಲಕ ಮಿಂಚಲು ಸಜ್ಜಾಗಿದ್ದಾರೆ. ಈ ಪೈಕಿ ಅವರ NTR 31 ಕೂಡ ಒಂದು. ಈ ಚಿತ್ರದಲ್ಲಿ ಕಮಲ್ ಹಾಸನ್ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಈ ಚಿತ್ರವು ಸಾಕಷ್ಟು ನಿರೀಕ್ಷೆಯನ್ನು ಮೂಡಿಸಿದೆ. ಈ ಬಹುವೆಚ್ಚದ ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸುತ್ತಿದ್ದಾರೆ.

5 /5

‘ದೇವರ’ ಚಿತ್ರದ ಅದ್ಭುತ ಪಾತ್ರವರ್ಗದ ಫಸ್ಟ್ ಲುಕ್ ರಿವೀಲ್ ಆಗಿದೆ. ಜೂನಿಯರ್ ಎನ್‌ಟಿಆರ್ ಅವರ ಈ ಚಿತ್ರದ ಮೂಲಕ ಜಾನ್ವಿ ಕಪೂರ್ ದಕ್ಷಿಣಕ್ಕೆ ಕಾಲಿಡಲಿದ್ದಾರೆ. ಸಿನಿಮಾದ ಫಸ್ಟ್ ಲುಕ್ ಸಂಚಲನ ಮೂಡಿಸಿದ್ದು, ಈಗ ಅದರ ಟೀಸರ್ ಮತ್ತು ಟ್ರೈಲರ್ ಬಿಡುಗಡೆಗೆ ಅಭಿಮಾನಿಗಳು ಕಾಯುತ್ತಿದ್ದಾರೆ.