ವಿಜಯ ರಾಘವೇಂದ್ರ ಅಭಿನಯದ 'ಕಾಸಿನ ಸರ' ಚಿತ್ರದ ಮಹೂರ್ತಕ್ಕೆ ಚಾಲನೆ

  • Aug 01, 2022, 16:02 PM IST

ನೇಟಿವ್ ಕ್ರಿಯೇಷನ್ಸ್ ಅರ್ಪಿಸುವ ಗ್ರಾಮೀಣ ಸೊಗಡಿನ ಕೌಟುಂಬಿಕ ಕತೆಯನ್ನು ಒಳಗೊಂಡ “ಕಾಸಿನ ಸರ” ಚಿತ್ರದ ಚಿತ್ರೀಕರಣಕ್ಕೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಕ್ಲ್ಯಾಪ್ ಮಾಡಿ ಚಾಲನೆ ನೀಡಿದರು.ನಗರದ ಮಲೇಶ್ವರಂನ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವರು ಚಿತ್ರ ಯಶಸ್ವಿಯಾಗಲಿ ಎಂದು ಚಿತ್ರತಂಡಕ್ಕೆ ಶುಭಕೋರಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಚಿತ್ರದ ನಾಯಕ ನಟ ವಿಜಯರಾಘವೇಂದ್ರ, ನಾಯಕಿ ನಟಿ ಹರ್ಷಿಕಾ ಪೊಣ್ಣಚ್ಚ, ಛಾಯಗ್ರಾಹಕ ವೇಣುಗೋಪಾಲ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್, ಹಿರಿಯ ನಿರ್ಮಾಪಕರಾದ ಚಿನ್ನೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

2 /5

ನಿರ್ದೇಶಕ ನಂಜುಡೇಗೌಡ ಅವರು ಮಾತನಾಡಿ, ಇಂದು ಕನ್ನಡ ಚಿತ್ರದ ಕಡೆ ಭಾರತೀಯ ಚಿತ್ರರಂಗ ನೋಡುವಂತಾಗಿದೆ. ಇದು ಹೆಮ್ಮೆಯ ವಿಚಾರ. “ಕಾಸಿನ ಸರ” ನಮ್ಮ ಸಂಸ್ಕೃತಿ, ಪರಂಪರೆಯನ್ನು ಒಳಗೊಂಡಿರುವ ಚಿತ್ರ ಎಂದರು.

3 /5

ನಿರ್ಮಾಪಕರಾದ ದೊಡ್ಡನಾಗಯ್ಯ ಅವರು ಮಾತನಾಡಿ, ಇಂದಿನ ದಿನಗಳಲ್ಲಿ ಕೌಟುಂಬಿಕ ಸಂಬಂಧಗಳು ದೂರವಾಗುತ್ತಿವೆ. ನಮ್ಮ ಸಂಸ್ಕೃತಿ ಮರೆಯಾಗುತ್ತಿದೆ. ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಹೀಗಾಗಿ ಇವುಗಳ ಮಹತ್ವವನ್ನು ಸಾರುವ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಿತ್ರಕತೆಗಾಗಿ ಹುಡುಕಾಡಿದಾಗ ನಂಜುಡೇಗೌಡ ಅವರು “ಕಾಸಿನ ಸರ” ಕತೆಯನ್ನು ಹೇಳಿದರು. ತುಂಬಾ ಇಷ್ಟವಾಯಿತು. ಚಿಕ್ಕಬಜೆಟ್ ನ ಚಿತ್ರಗಳ ಮೂಲಕ ಹೊಸ ಪ್ರತಿಭೆಗಳ ಅವಕಾಶ ನೀಡುವುದರ ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಬೇಕು ಎಂಬ ಅಭಿಲಾಷೆಯೊಂದಿಗೆ ಚಿತ್ರ ನಿರ್ಮಿಸಲಾಗುತ್ತಿದೆ. ಚಿತ್ರೀಕರಣ ಆರಂಭವಾಗಿದೆ. ಚಿತ್ರದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಹೇಳಿದರು.

4 /5

5 /5

ಈ ವೇಳೆ ಮಾತನಾಡಿದ ಸಚಿವರು, ಉತ್ತಮ ಕಥೆಯನ್ನು ಒಳಗೊಂಡಿರುವ ಚಿತ್ರ ಇದಾಗಿದ್ದು ಕುಟುಂಬ ಪ್ರಧಾನ ಚಿತ್ರ. ಸ್ನೇಹಿತರಾಗಿರುವ ದೊಡ್ಡನಾಗಯ್ಯ ಅವರಿಗೆ ಕೃಷಿ ಎಂದರೆ ತುಂಬಾ ಅಚ್ಚುಮೆಚ್ಚು. ಗ್ರಾಮೀಣ ಭಾಗದಿಂದ ಬಂದವರಾಗಿದ್ದು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರು ಚಿತ್ರ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಚಿತ್ರ ಉತ್ತಮವಾಗಿ ಮೂಡಿಬರಲಿ. ಚಿತ್ರತಂಡಕ್ಕೆ ಯಶಸ್ಸು ಸಿಗಲಿ. “ಕಾಸಿನ ಸರ” ಎಲ್ಲಾ ಕಡೆ ಸದ್ದು ಮಾಡಲಿ, ಚಿತ್ರತಂಡಕ್ಕೆ ಶುಭವಾಗಲಿ ಎಂದರು.