ಕೊಹ್ಲಿ, ರೋಹಿತ್ ಬಳಿಕ ಟೀಂ ಇಂಡಿಯಾದ ಸೂಪರ್’ಸ್ಟಾರ್ ಆಟಗಾರರು ಈ ಇಬ್ಬರು ಬ್ಯಾಟ್ಸ್’ಮನ್’ಗಳು

Matthew Hayden statement: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2023) ನ ಕೊನೆಯ ಋತುವಿನಲ್ಲಿ ಪ್ರಬಲ ಪ್ರದರ್ಶನ ನೀಡಿದ ಗಿಲ್, ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಅವಕಾಶ ಸಿಗದಿದ್ದರೂ ಟಿ 20 ಸರಣಿಯಲ್ಲಿ ಪಾದಾರ್ಪಣೆ ಮಾಡಿದ ನಂತರ ತಿಲಕ್ ವರ್ಮಾ ತಮ್ಮ ಬ್ಯಾಟಿಂಗ್‌ನಿಂದ ಪ್ರಭಾವ ಬೀರಿದ್ದಾರೆ ಎಂದು ಅವರು ಹೇಳಿದ್ದಾರೆ.

Written by - Bhavishya Shetty | Last Updated : Aug 22, 2023, 09:16 AM IST
    • ಏಷ್ಯಾಕಪ್ 2023ಕ್ಕೆ ಟೀಮ್ ಇಂಡಿಯಾ ತಂಡ ಪ್ರಕಟ
    • ಶುಭ್ಮನ್ ಗಿಲ್ ಮತ್ತು ತಿಲಕ್ ವರ್ಮಾರಂತಹ ಯುವ ಬ್ಯಾಟ್ಸ್‌ಮನ್‌’ಗಳು ಕ್ರಿಕೆಟ್’ನಲ್ಲಿ ಪ್ರಭಾವ ಬೀರಲು ಸಾಧ್ಯ
    • ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಮ್ಯಾಥ್ಯೂ ಹೇಡನ್ ಹೇಳಿಕೆ
ಕೊಹ್ಲಿ, ರೋಹಿತ್ ಬಳಿಕ ಟೀಂ ಇಂಡಿಯಾದ ಸೂಪರ್’ಸ್ಟಾರ್ ಆಟಗಾರರು ಈ ಇಬ್ಬರು ಬ್ಯಾಟ್ಸ್’ಮನ್’ಗಳು title=
team india squad for asia cup 2023

Matthew Hayden statement: ಏಷ್ಯಾಕಪ್ 2023ಕ್ಕೆ ಟೀಮ್ ಇಂಡಿಯಾ ತಂಡ ಪ್ರಕಟವಾಗಿದ್ದು, ಈ ಬೆನ್ನಲ್ಲೇ ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಮ್ಯಾಥ್ಯೂ ಹೇಡನ್ ಹೇಳಿಕೆಯೊಂದನ್ನು ನೀಡಿದ್ದಾರೆ. ಟೀಮ್ ಇಂಡಿಯಾದ ಇಬ್ಬರು ಬ್ಯಾಟ್ಸ್‌’ಮನ್‌’ಗಳನ್ನು ಭವಿಷ್ಯದ ಸೂಪರ್‌’ಸ್ಟಾರ್‌’ಗಳು ಎಂದು ಬಣ್ಣಿಸಿದ್ದಾರೆ. 2023ರ ಏಷ್ಯಾಕಪ್‌’ಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ಶುಭ್ಮನ್ ಗಿಲ್ ಮತ್ತು ತಿಲಕ್ ವರ್ಮಾ ಅವರಂತಹ ಯುವ ಬ್ಯಾಟ್ಸ್‌ಮನ್‌’ಗಳು ಕ್ರಿಕೆಟ್ ನಲ್ಲಿ ಪ್ರಭಾವ ಬೀರಲು ಸಾಧ್ಯವಾಗುತ್ತದೆ ಎಂದು ಆಸ್ಟ್ರೇಲಿಯಾದ ಮಾಜಿ ಬ್ಯಾಟ್ಸ್‌ಮನ್ ಮ್ಯಾಥ್ಯೂ ಹೇಡನ್ ಭರವಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಏಷ್ಯಾ ಕಪ್’ಗೆ ಆಯ್ಕೆಯಾದ ಟೀಂ ಇಂಡಿಯಾ ಆಟಗಾರರ ಏಕದಿನ ಕ್ರಿಕೆಟ್ ದಾಖಲೆಗಳು ಹೇಗಿವೆ ಗೊತ್ತಾ?

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2023) ನ ಕೊನೆಯ ಋತುವಿನಲ್ಲಿ ಪ್ರಬಲ ಪ್ರದರ್ಶನ ನೀಡಿದ ಗಿಲ್, ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಅವಕಾಶ ಸಿಗದಿದ್ದರೂ ಟಿ 20 ಸರಣಿಯಲ್ಲಿ ಪಾದಾರ್ಪಣೆ ಮಾಡಿದ ನಂತರ ತಿಲಕ್ ವರ್ಮಾ ತಮ್ಮ ಬ್ಯಾಟಿಂಗ್‌ನಿಂದ ಪ್ರಭಾವ ಬೀರಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಿಯೆಟ್ ಕ್ರಿಕೆಟ್ ರೇಟಿಂಗ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಮ್ಯಾಥ್ಯೂ ಹೇಡನ್, “ಇದು ಪ್ರತಿಭಾವಂತ ತಂಡವಾಗಿದೆ, ವಿಶೇಷವಾಗಿ ಬ್ಯಾಟಿಂಗ್ ವಿಷಯದಲ್ಲಿ. ಗಿಲ್ ತನ್ನ ದೇಶಕ್ಕಾಗಿ ಹೆಚ್ಚಿನ ODI ಕ್ರಿಕೆಟ್ ಆಡಿಲ್ಲ. ತಿಲಕ್ ವರ್ಮಾ ಅವರು ಈ ಸ್ವರೂಪದಲ್ಲಿ ಪಾದಾರ್ಪಣೆ ಮಾಡಿಲ್ಲ. ಹಾಗೆಂದು ಒಳ್ಳೆಯ ಫಲಿತಾಂಶಗಳನ್ನು ನೀಡುವ ಸಾಮರ್ಥ್ಯ ಅವರ ಬಳಿ ಇಲ್ಲ ಎಂದು ಅರ್ಥ ಮಾಡಿಕೊಳ್ಳಬಾರದು” ಎಂದಿದ್ದಾರೆ.

“ಭಾರತೀಯ ಕ್ರಿಕೆಟ್ ಉತ್ತಮರ ಕೈಯಲ್ಲಿದೆ”

“ ನಾನು ಈ ಬಗ್ಗೆ ಐಪಿಎಲ್‌’ನಲ್ಲಿ ಗಮನಿಸಿದ್ದೇನೆ. ಭಾರತೀಯ ಕ್ರಿಕೆಟ್ ಉತ್ತಮರ ಕೈಯಲ್ಲಿದೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ'' ಎಂದರು. ಇನ್ನು ಭಾರತ ತಂಡದ ಮಧ್ಯಮ ಕ್ರಮಾಂಕದ ಕಳವಳದ ಬಗ್ಗೆ ಹೇಡನ್ ಮಾತನಾಡಿದ್ದು, ''ಭಾರತದ ಮಧ್ಯಮ ಕ್ರಮಾಂಕವನ್ನು ನೋಡಿದಾಗ ಶ್ರೇಯಸ್ ಅಯ್ಯರ್, ರಾಹುಲ್ ಮುಂತಾದ ಆಟಗಾರರಿದ್ದಾರೆ. ರಾಹುಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ. ರೋಹಿತ್ ಶರ್ಮಾ ಅತ್ಯುತ್ತಮ ಆಟಗಾರರು ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ:Dina Bhavishya: ಶ್ರಾವಣ ಶುಭ ಮಂಗಳವಾರ ಈ ರಾಶಿಗೆ ಸಕಲ ಸಂಪತ್ತು ಕರುಣಿಸಲಿದ್ದಾನೆ ಆಂಜನೇಯ

ಏಷ್ಯಾ ಕಪ್ 2023ಗಾಗಿ ಭಾರತದ 17 ಸದಸ್ಯರ ತಂಡ:

ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಪ್ರಸಿದ್ಧ ಕೃಷ್ಣ, ಸಂಜು ಸ್ಯಾಮ್ಸನ್ (ಬ್ಯಾಕಪ್).

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News