ICC World Cup 2023: ಐಸಿಸಿ ವಿಶ್ವಕಪ್ ಬ್ರಾಂಡ್ ಅಂಬಾಸಿಡರ್ ಆಗಿ ಶಾರುಖ್ ಖಾನ್ ನೇಮಕ

ICC World Cup 2023: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಶಾರುಖ್ ಖಾನ್ ಅವರು ಐಸಿಸಿ ಟ್ರೋಫಿಯೊಂದಿಗಿರುವ ವಿಡಿಯೋ ಮತ್ತು ಫೋಟೋವನ್ನು ಹಂಚಿಕೊಳ್ಳಲಾಗಿದೆ.

Written by - Puttaraj K Alur | Last Updated : Jul 20, 2023, 04:55 PM IST
  • ಐಸಿಸಿ ವಿಶ್ವಕಪ್ 2023ರ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟ ಶಾರುಖ್ ಖಾನ್ ನೇಮಕ
  • ಟ್ರೋಫಿಯೊಂದಿಗೆ ಶಾರುಖ್ ಇರುವ ಫೋಟೋ ಮತ್ತು ವಿಡಿಯೋ ಹಂಚಿಕೊಂಡಿರುವ ಐಸಿಸಿ
  • ಭಾರತದ ಆತಿಥ್ಯದಲ್ಲಿ ಅ.5ರಿಂದ ನ.19ರವರೆಗೆ ಏಕದಿನ ವಿಶ್ವಕಪ್ ಟೂರ್ನಿ ನಡೆಯಲಿದೆ
ICC World Cup 2023: ಐಸಿಸಿ ವಿಶ್ವಕಪ್ ಬ್ರಾಂಡ್ ಅಂಬಾಸಿಡರ್ ಆಗಿ ಶಾರುಖ್ ಖಾನ್ ನೇಮಕ  title=
ಐಸಿಸಿ ವಿಶ್ವಕಪ್ 2023

ನವದೆಹಲಿ: ಬಾಲಿವುಡ್ ಸೂಪರ್‌ಸ್ಟಾರ್ ನಟ ಶಾರುಖ್ ಅವರನ್ನು 2023ನೇ ಸಾಲಿನ ಐಸಿಸಿ ವಿಶ್ವಕಪ್ ಟೂರ್ನಿಯ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿದೆ.   

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಶಾರುಖ್ ಖಾನ್ ಅವರು ಐಸಿಸಿ ಟ್ರೋಫಿಯೊಂದಿಗಿರುವ ವಿಡಿಯೋ ಮತ್ತು ಫೋಟೋವನ್ನು ಹಂಚಿಕೊಳ್ಳಲಾಗಿದೆ. ‘King Khan With #CWC23 Trophy. It’s nearly here…’ ಎಂದು ಕಿಂಗ್ ಖಾನ್ ಪೋಸ್ ನೀಡಿರುವ ಫೋಟೋಗೆ ಕ್ಯಾಪ್ಶನ್ ನೀಡಲಾಗಿದೆ.

ಇದನ್ನೂ ಓದಿ: Asia Cup schedule: 15 ದಿನಗಳಲ್ಲಿ ಭಾರತ-ಪಾಕ್ 3 ಬಾರಿ ಮುಖಾಮುಖಿ ಸಾಧ್ಯತೆ

ಅದೇ ರೀತಿ 2:13 ನಿಮಿಷಗಳ ವಿಡಿಯೋ ಹಂಚಿಕೊಂಡಿರುವ ಐಸಿಸಿ, ‘History will be written and dreams will be realised at the ICC Men's Cricket World Cup 2023. All it takes is just one day’ ಎಂದು ಅದಕ್ಕೆ ಕ್ಯಾಪ್ಶನ್ ನೀಡಿದೆ.

ಭಾರತದ ಆತಿಥ್ಯದಲ್ಲಿ ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಏಕದಿನ ವಿಶ್ವಕಪ್ ಟೂರ್ನಿ ನಡೆಯಲಿದೆ. ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ 10 ತಂಡಗಳು ಭಾಗವಹಿಸಲಿವೆ. ಅಕ್ಟೋಬರ್ 8ರಂದು ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾವು ತನ್ನ ವಿಶ್ವಕಪ್ ಅಭಿಯಾನ ಪ್ರಾರಂಭಿಸಲಿದೆ. ಅಕ್ಟೋಬರ್ 15ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.

ಇದನ್ನೂ ಓದಿ: ಟೆಸ್ಟ್ ಕ್ರಿಕೆಟ್‌ನಲ್ಲಿ ದ್ವಿ ಶತಕಕ್ಕೆ ಒಂದು ರನ್ ಬಾಕಿ ಇರುವಾಗಲೇ ಔಟ್ ಆದ ಬ್ಯಾಟ್ಸ್ಮನ್ ಗಳಲ್ಲಿ ಈ ಕನ್ನಡಿಗನೂ ಇದ್ದಾನೆ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News