Team India: ಟೀಂ ಇಂಡಿಯಾಗೆ ದಿಢೀರ್ ಎಂಟ್ರಿ ಕೊಟ್ಟ ಈ ಮಾರಕ ಬೌಲರ್!

Border Gavaskar Trophy 3rd Test: ಇಂದೋರ್‌ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ 3ನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಭಾರತ ತಂಡ ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. 3ನೇ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಆಸೀಸ್ ಮಾರಕ ಬೌಲಿಂಗ್ ದಾಳಿಗೆ ಟೀಂ ಇಂಡಿಯಾ ತತ್ತರಿಸಿ ಹೋಗಿದೆ.

Written by - Puttaraj K Alur | Last Updated : Mar 1, 2023, 12:08 PM IST
  • ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯಕ್ಕೆ ದಿಢೀರ್ ಎಂಟ್ರಿ ಕೊಟ್ಟ ಮಾರಕ ಬೌಲರ್
  • ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಿದ್ದರಿಂದ ಉಮೇಶ್ ಯಾದವ್‍ಗೆ ಸಿಕ್ತು ಅವಕಾಶ
  • ಆಸ್ಟ್ರೇಲಿಯಾದ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ರೋಹಿತ್ ಶರ್ಮಾ ಪಡೆ
Team India: ಟೀಂ ಇಂಡಿಯಾಗೆ ದಿಢೀರ್ ಎಂಟ್ರಿ ಕೊಟ್ಟ ಈ ಮಾರಕ ಬೌಲರ್! title=
ಆಸೀಸ್ ದಾಳಿಗೆ ರೋಹಿತ್ ಪಡೆ ತತ್ತರ!

ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾಗೆ ಬಾರ್ಡರ್ ಗವಾಸ್ಕರ್ ಟ್ರೋಫಿಯ 3ನೇ ಟೆಸ್ಟ್ ಪಂದ್ಯವು ತುಂಬಾ ಮಹತ್ವದ್ದಾಗಿದೆ. ಇಂದೋರ್‌ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಪಂದ್ಯಕ್ಕೆ ಭಾರತ ತಂಡದಲ್ಲಿ 2 ಪ್ರಮುಖ ಬದಲಾವಣೆಗಳಾಗಿವೆ. ಕೆ.ಎಲ್.ರಾಹುಲ್ ಬದಲಿಗೆ ಶುಭಮನ್ ಗಿಲ್ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಅದೇ ರೀತಿ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ ಬದಲಿಗೆ ವೇಗದ ಬೌಲರ್ ತಂಡಕ್ಕೆ ಎಂಟ್ರಿಕೊಟ್ಟಿದ್ದಾರೆ.

ಈ ಬೌಲರ್‌ನ ಎಂಟ್ರಿ!

ಇಂದೋರ್ ಟೆಸ್ಟ್‌ಗಾಗಿ ಭಾರತ ತಂಡದಲ್ಲಿ 2 ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಕೆ.ಎಲ್.ರಾಹುಲ್ ಬದಲಿಗೆ ಶುಭಮನ್ ಗಿಲ್ ತಂಡದಲ್ಲಿ ಆರಂಭಿಕರಾಗಿ ಅವಕಾಶ ಪಡೆದಿದ್ದಾರೆ. ಬೌಲಿಂಗ್‌ನಲ್ಲಿ 2ನೇ ಬದಲಾವಣೆಯಾಗಿದೆ. ಮೊಹಮ್ಮದ್ ಶಮಿ ಬದಲಿಗೆ ವೇಗದ ಬೌಲರ್ ಉಮೇಶ್ ಯಾದವ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಆದರೆ, ಉಮೇಶ್‌ಗೆ ಭಾರತದ ಪರ ಟೆಸ್ಟ್‌ ಕ್ರಿಕೆಟ್‌ನಲ್ಲಿ ನಿರಂತರವಾಗಿ ಆಡುವ ಅವಕಾಶ ಸಿಗುವುದು ಅಪರೂಪ. 3ನೇ ಟೆಸ್ಟ್‌ನಲ್ಲಿ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಟಾಸ್ ವೇಳೆ ನಾಯಕ ರೋಹಿತ್ ಹೇಳಿದ್ದರು. ಅವರ ಸ್ಥಾನದಲ್ಲಿ ವೇಗಿ ಉಮೇಶ್‌ಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿಟೀಂ ಇಂಡಿಯಾಗೆ ಮತ್ತೆ ಎಂಟ್ರಿಕೊಡ್ತಾರಾ Rishabh Pant? ಅಪ್ಡೇಟ್ ಹೊರಬರುತ್ತಿದ್ದಂತೆ ಆಘಾತಕ್ಕೊಳಗಾದ ಫ್ಯಾನ್ಸ್!

ಟೆಸ್ಟ್ ಕ್ರಿಕೆಟ್‌ನಲ್ಲಿ ಉಮೇಶ್ ಯಾದವ್ ಪ್ರದರ್ಶನ

ಉಮೇಶ್ ಯಾದವ್ ಇದುವರೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ 54 ಪಂದ್ಯಗಳನ್ನು ಆಡಿದ್ದಾರೆ. 106 ಇನ್ನಿಂಗ್ಸ್‌ಗಳಲ್ಲಿ 165 ವಿಕೆಟ್ ಪಡೆದಿದ್ದಾರೆ. ಉಮೇಶ್ ಅವರ ತಂದೆ ಕಳೆದ ವಾರವಷ್ಟೇ ನಿಧನರಾದರು. ಅವರ ತಂದೆ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ತಂದೆ ತೀರಿಕೊಂಡ ನಂತರ ಉಮೇಶ್ ಕೂಡ ಸೋಷಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಾಕಿದ್ದರು.  

ಟೀಂ ಇಂಡಿಯಾದ ಕಣ್ಣು WTC ಫೈನಲ್‌ ಮೇಲೆ! 

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಭಾರತ ತಂಡ 2-0 ಮುನ್ನಡೆ ಸಾಧಿಸಿದೆ. 3ನೇ ಪಂದ್ಯವನ್ನೂ ಗೆದ್ದರೆ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಲಗ್ಗೆ ಇಡಲಿದೆ. ಟೀಂ ಇಂಡಿಯಾ ಫೈನಲ್‌ಗೆ ಪ್ರವೇಶಿಸಲು ಆಸ್ಟ್ರೇಲಿಯಾವನ್ನು 3-0 ಅಥವಾ 3-1 ಅಂತರದಿಂದ ಸೋಲಿಸಬೇಕು. ಇಂತಹ ಪರಿಸ್ಥಿತಿಯಲ್ಲಿ ಭಾರತಕ್ಕೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಮತ್ತೊಂದೆಡೆ ಆಸ್ಟ್ರೇಲಿಯಾ ಕೂಡ ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ಸೋಲಿನಿಂದ ಪಾರಾಗಲು ಪ್ರಯತ್ನಿಸುತ್ತಿದೆ.

ಆಸೀಸ್ ಮಾರಕ ದಾಳಿಗೆ ರೋಹಿತ್ ಪಡೆ ತತ್ತರ!

ಸದ್ಯದ ಮಾಹಿತಿ ಪ್ರಕಾರ ಆಸ್ಟ್ರೇಲಿಯಾದ ಮಾರಕ ಬೌಲಿಂಗ್ ದಾಳಿಗೆ ತುತ್ತಾಗಿರುವ ಟೀ ಇಂಡಿಯಾ ತನ್ನ ಮೊದಲ ಇನ್ನಿಂಗ್ಸ್‍ನಲ್ಲಿ 26 ಓವರ್‍ಗಳಲ್ಲಿ 7 ವಿಕೆಟ್ ಕಳೆದುಕೊಂಡು ಕೇವಲ 84 ರನ್ ಗಳಿಸಿದೆ. ಭಾರತದ ವಿರುದ್ಧ ಮಾರಕ ಬೌಲಿಂಗ್ ದಾಳಿ ನಡೆಸಿದ ಆಸೀಸ್‍ನ ಮ್ಯಾಥ್ಯೂ ಕುಹ್ನೆಮನ್ 14ಕ್ಕೆ 3 ಮತ್ತು  ನಾಥನ್ ಲಿಯಾನ್ 23ಕ್ಕೆ 3 ವಿಕೆಟ್ ಗಳಿಸಿ ಮಿಂಚಿದ್ದಾರೆ. ಟಾಡ್ ಮರ್ಫಿ ಸಹ 1 ವಿಕೆಟ್ ಕಬಳಿಸಿದ್ದಾರೆ.

ಇದನ್ನೂ ಓದಿ: Rohit Sharma : ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ ರೋಹಿತ್ ಶರ್ಮಾ, ಎಂದೂ ನಡೆಯದ ಕ್ಷಣಕ್ಕೆ ಸಾಕ್ಷಿಯಾಗಲಿದೆ ಇಂದೋರ್‌.!

3ನೇ ಟೆಸ್ಟ್‌ಗೆ ಭಾರತ ತಂಡ ಹೀಗಿದೆ ನೋಡಿ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News