ವೆಸ್ಟ್ಇಂಡೀಸ್ ವಿರುದ್ದ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾರ ಎರಡು ವಿಶ್ವ ದಾಖಲೆಗಳೇನು ಗೊತ್ತೇ?

ಭಾರತ ಮತ್ತು ವೆಸ್ಟ್ಇಂಡೀಸ್ ನಡುವಿನ ಅಂತಿಮ ಪಂದ್ಯದಲ್ಲಿ ಭಾರತದ ರೋಹಿತ್ ಶರ್ಮಾ ಏಕದಿನ ಪಂದ್ಯದಲ್ಲಿ 200 ಸಿಕ್ಸರ್ಗಳನ್ನು ವೇಗವಾಗಿ ಗಳಿಸಿದ ಬ್ಯಾಟ್ಸ್ಮನ್ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ 

Last Updated : Nov 1, 2018, 07:49 PM IST
ವೆಸ್ಟ್ಇಂಡೀಸ್ ವಿರುದ್ದ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾರ ಎರಡು ವಿಶ್ವ ದಾಖಲೆಗಳೇನು ಗೊತ್ತೇ?  title=

ನವದೆಹಲಿ: ಭಾರತ ಮತ್ತು ವೆಸ್ಟ್ಇಂಡೀಸ್ ನಡುವಿನ ಅಂತಿಮ ಪಂದ್ಯದಲ್ಲಿ ಭಾರತದ ರೋಹಿತ್ ಶರ್ಮಾ ಏಕದಿನ ಪಂದ್ಯದಲ್ಲಿ 200 ಸಿಕ್ಸರ್ಗಳನ್ನು ವೇಗವಾಗಿ ಗಳಿಸಿದ ಬ್ಯಾಟ್ಸ್ಮನ್ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ 

ಭಾರತದ ರೋಹಿತ್ ಶರ್ಮಾ ಈ ಸಾಧನೆ ಮಾಡಲು ಕೇವಲ 187 ಇನ್ನಿಂಗ್ಸ್ ಗಳನ್ನು ತೆಗೆದುಕೊಂಡಿದ್ದಾರೆ.ಇದಕ್ಕೂ  ಮೊದಲು ಪಾಕಿಸ್ತಾನದ ಆಲ್ ರೌಂಡರ್  ಶಾಹಿದ್ ಆಫ್ರಿದಿ ಅವರು 195 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದಾರೆ.ಇದೇ ವೇಳೆ ರೋಹಿತ್ ಶರ್ಮಾ ಅವರು 2018 ರಲ್ಲಿ ವಿರಾಟ್ ಕೊಹ್ಲಿ ಮತ್ತು ಜಾನಿ ಬೈರ್ಸ್ಟೊ ನಂತರ 1,000 ಏಕದಿನ ರನ್ಗಳನ್ನು ಗಳಿಸಿದ ಮೂರನೇ ಬ್ಯಾಟ್ಸ್ಮನ್ ಎನ್ನುವ ಖ್ಯಾತಿಯನ್ನು ಪಡೆದರು. 

ವಿಂಡಿಸ್ ವಿರುದ್ದ ಅಂತಿಮ ಪಂದ್ಯದಲ್ಲಿ 56 ಎಸೆತಗಳಲ್ಲಿ 63 ರನ್ ಗಳಿಸುವ ಮೂಲಕ  ಮೂಲಕ ಈ ಎರಡು ದಾಖಲೆಗಳಿಗೆ ಸಾಕ್ಷಿಯಾದರು. ಆರಂಭಿಕ ಆಟಗಾರನಾಗಿ ರೋಹಿತ್ ಶರ್ಮಾ ಸತತ ಮೂರು ವರ್ಷಗಳ ಕಾಲ ನಿರಂತರವಾಗಿ ವರ್ಷವೊಂದರಲ್ಲಿ ಸಾವಿರ ರನ್ ಗಳನ್ನು ಪೂರೈಸಿದ ಸಾಧನೆ ಮಾಡಿದ್ದಾರೆ.ಇದಕ್ಕೂ ಮೊದಲು ಭಾರತದ ಪರ ಸೌರವ ಗಂಗೂಲಿ, ಸಚಿನ್ ತೆಂಡುಲ್ಕರ್ ಈ ಸಾಧನೆ ಮಾಡಿದ್ದರು. 

 

Trending News