2 ವರ್ಷಗಳಲ್ಲಿ ಎಷ್ಟೊಂದು ಬದಲಾಯ್ತು T20 ವಿಶ್ವಕಪ್ ತಂಡ! ಅಂದು ಟೀಂ ಇಂಡಿಯಾದಲ್ಲಿ ಮಿಂಚಿದ್ದ 7 ಆಟಗಾರರಿಗೆ ಇಂದು ಇಲ್ಲ ಸ್ಥಾನ

T20 World Cup India Squad: 2022ರಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ತಲುಪಿತ್ತು. ಆ ತಂಡದಲ್ಲಿ ಆಡಿದ್ದ ಏಳು ಆಟಗಾರರಿಗೆ ಈ ಬಾರಿ ಅವಕಾಶ ಸಿಗಲಿಲ್ಲ. ಅಂತಹ ಆಟಗಾರರು ಯಾರು ಎಂಬುದನ್ನು ತಿಳಿದುಕೊಳ್ಳೋಣ

Written by - Bhavishya Shetty | Last Updated : Apr 30, 2024, 09:54 PM IST
    • ಟಿ20 ವಿಶ್ವಕಪ್‌’ಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ
    • ಕೆಲ ಆಟಗಾರರು ಸಹ ಚೊಚ್ಚಲ ಪ್ರವೇಶ ಮಾಡುತ್ತಿದ್ದಾರೆ
    • ಆ ತಂಡದಲ್ಲಿ ಆಡಿದ್ದ ಏಳು ಆಟಗಾರರಿಗೆ ಈ ಬಾರಿ ಅವಕಾಶ ಸಿಗಲಿಲ್ಲ
2 ವರ್ಷಗಳಲ್ಲಿ ಎಷ್ಟೊಂದು ಬದಲಾಯ್ತು T20 ವಿಶ್ವಕಪ್ ತಂಡ! ಅಂದು ಟೀಂ ಇಂಡಿಯಾದಲ್ಲಿ ಮಿಂಚಿದ್ದ 7 ಆಟಗಾರರಿಗೆ ಇಂದು ಇಲ್ಲ ಸ್ಥಾನ title=
T20 World Cup Team

T20 World Cup India Squad: ಟಿ20 ವಿಶ್ವಕಪ್‌’ಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದ್ದು, ಇದರಲ್ಲಿ ಹಾರ್ದಿಕ್ ಪಾಂಡ್ಯ ಉಪನಾಯಕರಾಗಿದ್ದಾರೆ. ಇದುವರೆಗೂ ಈ ಟೂರ್ನಿಯಲ್ಲಿ ಆಡಲು ಸಾಧ್ಯವಾಗದ ಕೆಲ ಆಟಗಾರರು ಸಹ ಚೊಚ್ಚಲ ಪ್ರವೇಶ ಮಾಡುತ್ತಿದ್ದಾರೆ.

ಇನ್ನು 2022ರಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ತಲುಪಿತ್ತು. ಆ ತಂಡದಲ್ಲಿ ಆಡಿದ್ದ ಏಳು ಆಟಗಾರರಿಗೆ ಈ ಬಾರಿ ಅವಕಾಶ ಸಿಗಲಿಲ್ಲ. ಅಂತಹ ಆಟಗಾರರು ಯಾರು ಎಂಬುದನ್ನು ತಿಳಿದುಕೊಳ್ಳೋಣ.

ಇದನ್ನೂ ಓದಿ: T20 ವಿಶ್ವಕಪ್ ತಂಡದಿಂದ ಹೊರಬಿದ್ದ ಭಾರತದ ಐವರು ಸ್ಟಾರ್ ಆಟಗಾರರು ಇವರೇ! ಚಾನ್ಸ್ ಮಿಸ್ ಆಗಲು ಕಾರಣ?

ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಕೆಎಲ್ ರಾಹುಲ್, ರಿಂಕು ಸಿಂಗ್, ರವಿ ಬಿಷ್ಣೋಯ್, ರಿತುರಾಜ್ ಗಾಯಕ್ವಾಡ್ ಮತ್ತು ಶುಭಮನ್ ಗಿಲ್ ಸ್ಥಾನ ಪಡೆದಿಲ್ಲ. ಇವರಲ್ಲಿ ರಾಹುಲ್ ಅವರನ್ನು 2022ರ ಟಿ20 ವಿಶ್ವಕಪ್‌’ನ ತಂಡಕ್ಕೆ ಸೇರಿಸಲಾಗಿತ್ತು. ಅದಕ್ಕೂ ಮೊದಲು ಅವರು 2021 ರಲ್ಲಿ ತಂಡದ ಭಾಗವಾಗಿದ್ದರು. ಎರಡೂ ಬಾರಿ ರಾಹುಲ್ ಪ್ರದರ್ಶನ ನಿರಾಶಾದಾಯಕವಾಗಿತ್ತು. ಐಪಿಎಲ್‌’ನಲ್ಲಿ ಅವರ ಅದ್ಭುತ ಪ್ರದರ್ಶನದ ಹೊರತಾಗಿಯೂ, ಎರಡೂ ಟಿ20 ವಿಶ್ವಕಪ್‌ಗಳಲ್ಲಿ ವಿಫಲರಾಗಿದ್ದರು.

ರಾಹುಲ್ ಜೊತೆ ರವಿಚಂದ್ರನ್ ಅಶ್ವಿನ್ ಕೂಡ ಔಟಾಗಿದ್ದಾರೆ. ಇದುವರೆಗಿನ ಐಪಿಎಲ್‌’ನಲ್ಲಿ ಇವರ ಪ್ರದರ್ಶನ ಫ್ಲಾಪ್ ಎಂದು ಸಾಬೀತುಪಡಿಸಿದ್ದಾರೆ. ಈ ಮೂಲಕ ಸೀಮಿತ ಓವರ್‌ಗಳಲ್ಲಿ ಅವರ ವೃತ್ತಿಜೀವನ ಮುಕ್ತಾಯದ ಹಂತ ತಲುಪಿದೆ ಎಂಬುದು ಸ್ಪಷ್ಟವಾಗುತ್ತಿದೆ.

2022ರ ಟಿ 20 ವಿಶ್ವಕಪ್‌’ನಲ್ಲಿ ಹರ್ಷಲ್ ಪಟೇಲ್, ಮೊಹಮ್ಮದ್ ಶಮಿ, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್ ಮತ್ತು ದೀಪಕ್ ಹೂಡಾ ಕೂಡ ಇದ್ದರು. ಆದರೆ ಈ ಬಾರಿ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಈ ಪೈಕಿ ಶಮಿ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ. ಅವರು ಫಿಟ್ ಆಗಿದ್ದರೆ ತಂಡದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿತ್ತು.

2022 ರ ಟಿ20 ವಿಶ್ವಕಪ್‌’ನ ಭಾರತೀಯ ತಂಡ

ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಬ್ ಪಂತ್, ಅಕ್ಷರ್ ಪಟೇಲ್, ಯುಜುವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ದೀಪಕ್ ಹೂಡಾ, ಕೆಎಲ್ ರಾಹುಲ್, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ರವಿಚಂದ್ರನ್ ಅಶ್ವಿನ್.

ಇದನ್ನೂ ಓದಿ: ನಿತ್ಯ ಮುಂಜಾನೆ ಒಂದು ಲೋಟ ಈ ನೀರನ್ನು ಕುಡಿಯಿರಿ: ಕಿಡ್ನಿಯಲ್ಲಿ ಕಲ್ಲು ಇದ್ದರೆ ತಾನಾಗೇ ಕರಗಿ ಹೋಗುತ್ತೆ! ಬ್ಲಡ್ ಶುಗರ್ ಕೂಡ ನಾರ್ಮಲ್ ಮಾಡುತ್ತೆ!

2024ರ ಟಿ20 ವಿಶ್ವಕಪ್‌’ಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಅಕ್ಷರ್ ಪಟೇಲ್, ಯುಜುವೇಂದ್ರ ಚಾಹಲ್, ಅರ್ಷ್‌ದೀಪ್ ಸಿಂಗ್, ರವೀಂದ್ರ ಜಡೇಜಾ, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಶಿವಂ ದುಬೆ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News