ದೇಶದ ನಂಬರ್ -1 ಕ್ಯಾಪ್ಟನ್ ವಿರಾಟ್ ಕೊಹ್ಲಿಯ ಐತಿಹಾಸಿಕ ಸಾಧನೆ!

ವೆಸ್ಟ್ ಇಂಡೀಸ್‌ ವಿರುದ್ಧಡ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ ಗೆದ್ದಿದೆ. ಇದರೊಂದಿಗೆ ಭಾರತ ತಂಡ ಟೆಸ್ಟ್ ಸರಣಿಯನ್ನು 2–0ರಿಂದ ತನ್ನದಾಗಿಸಿಕೊಂಡಿದೆ.  

Last Updated : Sep 3, 2019, 08:16 AM IST
ದೇಶದ ನಂಬರ್ -1 ಕ್ಯಾಪ್ಟನ್ ವಿರಾಟ್ ಕೊಹ್ಲಿಯ ಐತಿಹಾಸಿಕ ಸಾಧನೆ! title=
File Image

ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ಧ ಭಾರತದ ಅದ್ಭುತ ಜಯದೊಂದಿಗೆ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ದೇಶದ ಅತ್ಯಂತ ಯಶಸ್ವಿ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರ ನಾಯಕತ್ವದಲ್ಲಿ ಭಾರತ 28 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ. ಈ ಗೆಲುವಿನೊಂದಿಗೆ ವಿರಾಟ್ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (ಎಂ.ಎಸ್. ಧೋನಿ) ಅವರ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ನಾಯಕ ಎಂಬ ದಾಖಲೆಯನ್ನು ಮುರಿದಿದ್ದಾರೆ. 

ಎರಡನೇ ಟೆಸ್ಟ್ ಪಂದ್ಯದ ಮೊದಲು ವಿರಾಟ್ ಕೊಹ್ಲಿ ಮತ್ತು ಎಂ.ಎಸ್.ಧೋನಿ 27-27 ಗೆಲುವುಗಳೊಂದಿಗೆ ಸಮನಾಗಿತ್ತು. ಟೆಸ್ಟ್ ಸರಣಿಯ ಮೊದಲು ಭಾರತ ತಂಡ ಏಕದಿನ ಮತ್ತು ಟಿ 20 ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡಿತು.

ಈ ಗೆಲುವಿನೊಂದಿಗೆ ಭಾರತವು ವೆಸ್ಟ್ ಇಂಡೀಸ್ (ಭಾರತ ವಿರುದ್ಧ ವೆಸ್ಟ್ ಇಂಡೀಸ್) ವಿರುದ್ಧ ಸತತ ಎಂಟನೇ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿತು. ಎರಡನೇ ಟೆಸ್ಟ್ ಪಂದ್ಯದ ಗೆಲುವು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ 60 ಅಂಕಗಳನ್ನು ನೀಡಿತು. ಈಗ ಅವರು 120 ಅಂಕಗಳೊಂದಿಗೆ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಮೊದಲ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಟೀಂ ಇಂಡಿಯಾ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ಜೊತೆ ಜಂಟಿಯಾಗಿ ನಂಬರ್ -1 ಸ್ಥಾನದಲ್ಲಿತ್ತು.

ಕ್ಯಾಪ್ಟನ್ ವಿರಾಟ್ ಕೊಹ್ಲಿಯ ಐತಿಹಾಸಿಕ ಸಾಧನೆಯ ಬಗ್ಗೆ ಮಾತನಾಡುವುದಾದರೆ, ಭಾರತೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವವನ್ನು ಟೀಕಿಸಿರುವ ದೊಡ್ಡ ತಂಡವೇ ಇದೆ. ವಿರಾಟ್ ಸಹ ಕಾಲಕಾಲಕ್ಕೆ ಅವರಿಗೆ ಸೂಕ್ತ ಪ್ರತಿಕ್ರಿಯೆ ನೀಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಗೆಲುವು ಅವರನ್ನು ಭಾರತದ ಅಂಕಿಅಂಶಗಳಲ್ಲಿ ಅತ್ಯಂತ ಯಶಸ್ವಿ ನಾಯಕನನ್ನಾಗಿ ಮಾಡಿದೆ.

ಕ್ಯಾಪ್ಟನ್ ಗಂಗೂಲಿ 21 ಟೆಸ್ಟ್ ಪಂದ್ಯಗಳನ್ನು ಗೆದ್ದಿದ್ದಾರೆ:
ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ಇದುವರೆಗೆ 48 ಟೆಸ್ಟ್ ಪಂದ್ಯಗಳನ್ನು ಆಡಿದೆ. ಅದರಲ್ಲಿ 28 ಟೆಸ್ಟ್ ಪಂದ್ಯಗಳಲ್ಲಿ ಭಾರತ ಜಯಗಳಿಸಿದೆ. ಬೇರೆ ಯಾವ ಭಾರತೀಯ ತಂಡವೂ ಇಷ್ಟು ಟೆಸ್ಟ್ ಪಂದ್ಯಗಳನ್ನು ಗೆದ್ದಿಲ್ಲ. ವಿರಾಟ್ ಕೊಹ್ಲಿ ಮೊದಲು ಎಂಎಸ್ ಧೋನಿ ದೇಶದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ಎಂಬ ಕೀರ್ತಿ ಹೊಂದಿದ್ದರು. ಧೋನಿ ನಾಯಕತ್ವದಲ್ಲಿ ಭಾರತ 27 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ. ಸೌರವ್ ಗಂಗೂಲಿ 21 ಟೆಸ್ಟ್ ಪಂದ್ಯಗಳ ಗೆಲುವುಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಅತಿ ಹೆಚ್ಚು ಪಂದ್ಯಗಳ ನಾಯಕತ್ವ ವಹಿಸಿದ್ದ ಧೋನಿ:
ವಿರಾಟ್ ಕೊಹ್ಲಿ ಭಾರತದಿಂದ ಹೆಚ್ಚಿನ ಟೆಸ್ಟ್ ಪಂದ್ಯಗಳ ನಾಯಕನಾಗಿ ಮೂರನೇ ಸ್ಥಾನದಲ್ಲಿದ್ದಾರೆ. ಅವರು 48 ಟೆಸ್ಟ್ ಪಂದ್ಯಗಳ ನಾಯಕತ್ವ ವಹಿಸಿದ್ದರು. ಹೆಚ್ಚಿನ ಟೆಸ್ಟ್ ಪಂದ್ಯಗಳ ನಾಯಕತ್ವ ವಹಿಸಿರುವುದನ್ನು ನೋಡುವುದಾದರೆ 60 ಟೆಸ್ಟ್ ಪಂದ್ಯಗಳ ನಾಯಕತ್ವ ವಹಿಸಿದ್ದ ಎಂ.ಎಸ್.ಧೋನಿ ಪ್ರಥಮ ಸ್ಥಾನದಲ್ಲಿದ್ದಾರೆ. 49 ಟೆಸ್ಟ್‌ಗಳಲ್ಲಿ ಭಾರತದ ಕ್ಯಾಪ್ಟನ್ ಆಗಿದ್ದ ಸೌರವ್ ಗಂಗೂಲಿ ಎರಡನೇ ಸ್ಥಾನದಲ್ಲಿದ್ದಾರೆ. 47-47 ಟೆಸ್ಟ್ ನಾಯಕತ್ವ ವಹಿಸಿದ್ದ ಮೊಹಮ್ಮದ್ ಅಜರುದ್ದೀನ್ ಮತ್ತು ಸುನಿಲ್ ಗವಾಸ್ಕರ್ ಸಹ ಜಂಟಿಯಾಗಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ವಿರಾಟ್ ನಾಯಕತ್ವದಲ್ಲಿ ಭಾರತ 58% ಗೆದ್ದಿದೆ:
ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ 58.33% ಪಂದ್ಯಗಳನ್ನು ಗೆದ್ದಿದೆ. ಕನಿಷ್ಠ ಐದು ಟೆಸ್ಟ್ ಪಂದ್ಯಗಳಲ್ಲಿ ಅವರು ಅತ್ಯಂತ ಯಶಸ್ವಿ ನಾಯಕ. ಈ ಸಂದರ್ಭದಲ್ಲಿ ಎಂ.ಎಸ್.ಧೋನಿ (45%) ಎರಡನೇ ಮತ್ತು ಸೌರವ್ ಗಂಗೂಲಿ (42.85%) ಮೂರನೇ ಸ್ಥಾನದಲ್ಲಿದ್ದಾರೆ.

Trending News