Watch: ಲೈವ್ ಪಂದ್ಯದಲ್ಲಿ ಅಂಪೈರ್ ಜೊತೆ ವಾಗ್ವಾದಕ್ಕಿಳಿದ ವಿರಾಟ್! ಕೊಹ್ಲಿ ಸಿಟ್ಟಿಗೆ ಕಾರಣವಾಗಿದ್ದೇನು?

IPL 2024, RCB vs DC: ಈ ಘಟನೆಯು ಡೆಲ್ಲಿ ಕ್ಯಾಪಿಟಲ್ಸ್‌ ಬ್ಯಾಟಿಂಗ್‌ ಮಾಡುತ್ತಿದ್ದ ಎರಡನೇ ಓವರ್‌’ನಲ್ಲಿ ಸಂಭವಿಸಿದೆ. ಈ ಓವರ್‌’ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಬೌಲಿಂಗ್ ಮಾಡುತ್ತಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟ್ಸ್‌ಮನ್ ಅಭಿಷೇಕ್ ಪೊರೆಲ್ ಸ್ಟ್ರೈಕ್‌’ನಲ್ಲಿ ಹಾಜರಿದ್ದರು.

Written by - Bhavishya Shetty | Last Updated : May 13, 2024, 04:16 PM IST
    • ವಿರಾಟ್ ಕೊಹ್ಲಿ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದು ಕಂಡುಬಂತು
    • ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
    • ಘಟನೆಯು ಡೆಲ್ಲಿ ಕ್ಯಾಪಿಟಲ್ಸ್‌ ಬ್ಯಾಟಿಂಗ್‌ ಮಾಡುತ್ತಿದ್ದ ಎರಡನೇ ಓವರ್‌’ನಲ್ಲಿ ಸಂಭವಿಸಿದೆ
Watch: ಲೈವ್ ಪಂದ್ಯದಲ್ಲಿ ಅಂಪೈರ್ ಜೊತೆ ವಾಗ್ವಾದಕ್ಕಿಳಿದ ವಿರಾಟ್! ಕೊಹ್ಲಿ ಸಿಟ್ಟಿಗೆ ಕಾರಣವಾಗಿದ್ದೇನು? title=
virat kohli

IPL 2024, RCB vs DC: ರಾಯಲ್ ಚಾಲೆಂಜರ್ಸ್ ಬೆಂಗಳೂರು ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌’ಗಳಿಂದ ಸೋಲಿಸುವ ಮೂಲಕ ತಮ್ಮ ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಈ ಪಂದ್ಯದ ವೇಳೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದು ಕಂಡುಬಂತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ  ಬರಲಿದೆ:ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ

ಈ ಘಟನೆಯು ಡೆಲ್ಲಿ ಕ್ಯಾಪಿಟಲ್ಸ್‌ ಬ್ಯಾಟಿಂಗ್‌ ಮಾಡುತ್ತಿದ್ದ ಎರಡನೇ ಓವರ್‌’ನಲ್ಲಿ ಸಂಭವಿಸಿದೆ. ಈ ಓವರ್‌’ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಬೌಲಿಂಗ್ ಮಾಡುತ್ತಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟ್ಸ್‌ಮನ್ ಅಭಿಷೇಕ್ ಪೊರೆಲ್ ಸ್ಟ್ರೈಕ್‌’ನಲ್ಲಿ ಹಾಜರಿದ್ದರು. ಮೊಹಮ್ಮದ್ ಸಿರಾಜ್ ಮೊದಲ ಎಸೆತದಲ್ಲಿ ಇನ್-ಸ್ವಿಂಗಿಂಗ್ ಯಾರ್ಕರ್ ಆಯಿತು. ಸ್ಟಂಪ್‌ ಮುಂಭಾಗದಲ್ಲಿ ಅಭಿಷೇಕ್ ಪೊರೆಲ್ ಅವರ ಪ್ಯಾಡ್‌’ಗೆ ಚೆಂಡು ಬಡಿದು ಅವರು ಎಲ್‌ಬಿಡಬ್ಲ್ಯೂ ಆಗಿ ಔಟಾದರು ಎಂಬುದು ಆರ್‌’ಸಿಬಿ ಕ್ರಿಕೆಟಿಗರಿಗೆ ಖಚಿತವಾಗಿತ್ತು. ಆನ್ ಫೀಲ್ಡ್ ಅಂಪೈರ್ ನಾಟೌಟ್ ನೀಡಿದ ನಂತರ ಆರ್‌ಸಿಬಿ ಡಿಆರ್‌ಎಸ್ ಪರಿಶೀಲನೆ ನಡೆಸಿತು.

ಅಭಿಷೇಕ್ ಪೊರೆಲ್ ಅವರ ಬ್ಯಾಟ್‌’ನಿಂದ ಚೆಂಡು ಬಂದಿದೆ ಎಂದು ಮೂರನೇ ಅಂಪೈರ್ ನಿರ್ಧರಿಸಿದರು. ಇಂತಹ ಪರಿಸ್ಥಿತಿಯಲ್ಲಿ ಅಭಿಷೇಕ್ ಪೊರೆಲ್ ಔಟಾಗದೆ ಉಳಿದರು. ಮೂರನೇ ಅಂಪೈರ್ ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ತೀರ್ಪು ನೀಡಿದರು. ಇದಾದ ನಂತರ ವಿರಾಟ್ ಕೊಹ್ಲಿ ಮತ್ತು ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಈ ನಿರ್ಧಾರದಿಂದ ಅಸಮಾಧಾನಗೊಂಡು, ಈ ವಿಚಾರವಾಗಿ ಅಂಪೈರ್‌’ಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ಈ ಅವಧಿಯಲ್ಲಿ ವಿರಾಟ್ ಕೊಹ್ಲಿ ಮೈದಾನದ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ರಜತ್ ಪಾಟಿದಾರ್ ಅರ್ಧಶತಕದ, ಯಶ್ ದಯಾಳ್ ಸೇರಿ ಬೌಲರ್‌’ಗಳ ಅತ್ಯುತ್ತಮ ಪ್ರದರ್ಶನದಿಂದಾಗಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಡೆಲ್ಲಿ ಕ್ಯಾಪಿಟಲ್ಸ್ ಅನ್ನು 47 ರನ್‌’ಗಳಿಂದ ಸೋಲಿಸಿ ಸತತ ಐದನೇ ಗೆಲುವು ದಾಖಲಿಸಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News