ರೋಹಿತ್ ಶರ್ಮಾ ದಾಖಲೆ ಮುರಿದ ವಿರಾಟ್ ಕೊಹ್ಲಿ !

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಅಜೇಯ 72 ರನ್ ಗಳಿಸುವ ಮೂಲಕ ಟಿ-20 ಕ್ರಿಕೆಟ್ ನಲ್ಲಿ ಅಧಿಕ ರನ್ ಗಳಿಸಿದ ಆಟಗಾರ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ. 

Last Updated : Sep 19, 2019, 01:16 PM IST
ರೋಹಿತ್ ಶರ್ಮಾ ದಾಖಲೆ ಮುರಿದ ವಿರಾಟ್ ಕೊಹ್ಲಿ !    title=
file photo

ನವದೆಹಲಿ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಅಜೇಯ 72 ರನ್ ಗಳಿಸುವ ಮೂಲಕ ಟಿ-20 ಕ್ರಿಕೆಟ್ ನಲ್ಲಿ ಅಧಿಕ ರನ್ ಗಳಿಸಿದ ಆಟಗಾರ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ. 

ಆ ಮೂಲಕ ಈಗ ರೋಹಿತ್ ಶರ್ಮಾ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ವಿರಾಟ್ ಕೊಹ್ಲಿ 77 ಪಂದ್ಯಗಳಲ್ಲಿ  2,441 ರನ್ ಗಳಿಸಿದ್ದರೆ ರೋಹಿತ್ ಶರ್ಮಾ ಅವರು 97 ಪಂದ್ಯಗಳಿಂದ 2,434 ರನ್ ಗಳಿಸಿದ್ದಾರೆ. ಮೂರನೇ ಸ್ಥಾನ ಪಡೆದಿರುವ ನ್ಯೂಜಿಲೆಂಡ್ ತಂಡದ ಬ್ಯಾಟ್ಸಮನ್ ಮಾರ್ಟಿನ್ ಗುಪ್ಟಿಲ್ 2,283 ರನ್ ಗಳಿಸಿದ್ದಾರೆ. 

ವಿರಾಟ್ ಕೊಹ್ಲಿ ಅವರ ಭರ್ಜರಿ ಬ್ಯಾಟಿಂಗ್ ನಿಂದಾಗಿ ಮೊಹಾಲಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಟಿ-20 ಪಂದ್ಯದಲ್ಲಿ ಗೆಲ್ಲುವ ಮೂಲಕ ಈಗ ಭಾರತ  ಸರಣಿಯಲ್ಲಿ 1-0 ಅಂತರದಿಂದ ಮುಂದಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ-20 ಸೆಪ್ಟೆಂಬರ್ 22 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. 

Trending News