Virat-Anushka: ವಿಶ್ವಕಪ್ ಸೋಲಿನ ಬಳಿಕ ಭಾವುಕರಾದ ಕಿಂಗ್ ಕೊಹ್ಲಿಯನ್ನು ಪತ್ನಿ ಅನುಷ್ಕಾ ಸಂತೈಸಿದ್ದು ಹೀಗೆ...!

Virat-Anushka: 2023ರ ವಿಶ್ವಕಪ್ ನಲ್ಲಿ ಆರಂಭದಿಂದಲೂ ಅತ್ಯುತ್ತಮ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ಫೈನಲ್‌ನಲ್ಲಿ ಮುಗ್ಗರಿಸಿದೆ. ಅಭಿಮಾನಿಗಳಾಗಿ ಕ್ರಿಕೆಟ್ ಪ್ರೇಮಿಗಳಿಗೆ ಇದು ಎಷ್ಟು ಭರಿಸಲಾಗದ ದುಃಖವೋ ಕ್ರಿಕೆಟ್ ಆಟಗಾರರಿಗೂ ಕೂಡ ಅಷ್ಟೇ ಕಷ್ಟದ ಸಮಯ ಎಂತಲೇ ಹೇಳಬಹುದು. 

Written by - Yashaswini V | Last Updated : Nov 20, 2023, 10:20 AM IST
  • ಕೋಟ್ಯಂತರ ಭಾರತೀಯ ಅಭಿಮಾನಿಗಳ ಕನಸನ್ನು ಆಸ್ಟ್ರೇಲಿಯಾ ತಂಡ ಭಗ್ನಗೊಳಿಸಿದೆ.
  • ಟೀಂ ಇಂಡಿಯಾವನ್ನು 6 ವಿಕೆಟ್‌ಗಳಿಂದ ಸೋಲಿಸಿ ಟ್ರೋಫಿ ಎತ್ತಿ ಹಿಡಿದಿದೆ.
  • ಈ ಸೋಲು ಬಹುಶಃ ಟೀಂ ಇಂಡಿಯಾಗೆ ಬಹುಕಾಲ ನೋವುಂಟು ಮಾಡಲಿದೆ
Virat-Anushka: ವಿಶ್ವಕಪ್ ಸೋಲಿನ ಬಳಿಕ ಭಾವುಕರಾದ ಕಿಂಗ್ ಕೊಹ್ಲಿಯನ್ನು ಪತ್ನಿ ಅನುಷ್ಕಾ ಸಂತೈಸಿದ್ದು ಹೀಗೆ...!  title=

Virat-Anushka: ಕಿಕ್ಕಿರಿದು ತುಂಬಿದ್ದ  ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್‌ 2023ರ ಫೈನಲ್‌ ಪಂದ್ಯದಲ್ಲಿ ಆತಿಥೇಯ ಭಾರತವನ್ನು ಆರು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಆಸ್ಟ್ರೇಲಿಯಾ ಆರನೇ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದೆ. ಈ ಮೂಲಕ  ಕೋಟ್ಯಂತರ ಭಾರತೀಯ ಅಭಿಮಾನಿಗಳ ಕನಸನ್ನು ಆಸ್ಟ್ರೇಲಿಯಾ ತಂಡ ಭಗ್ನಗೊಳಿಸಿದೆ. 

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಆಸೀಸ್‌ ಗೆಲುವಿಗೆ 241 ರನ್‌ಗಳ ಸಾಧಾರಣ ಗುರಿ ನೀಡಿತು. ಚೇಸಿಂಗ್‌ ನಡೆಸಿದ ಆಸ್ಟ್ರೇಲಿಯಾ, ಕೇವಲ 43 ಓವರ್‌ಗಳಲ್ಲಿ ಗುರಿ ತಲುಪಿತು.  ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ 7ವಿಕೆಟ್ ಗಳ ಹೀನಾಯ ಸೋಲು ಕಂಡಿತು. ಇದರೊಂದಿಗೆ ಭಾರತದ 3ನೇ ಬಾರಿಗೆ ವಿಶ್ವಕಪ್‌ ಗೆಲ್ಲುವ ಕನಸು ಭಗ್ನವಾಯಿತು.  

ಆರಂಭದಿಂದಲೂ ಉತ್ತಮ ಆಟವನ್ನಾಡಿ ಒಂದೂ ಪಂದ್ಯದಲ್ಲಿ ಸೋಲು ಕಂಡಿರದ ಟೀಂ ಇಂಡಿಯಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹೀನಾಯ ಸೋಲು ಕಂಡಿರುವುದು, ಕೊನೆ ಗಳಿಗೆಯಲ್ಲಿ ಟ್ರೋಫಿ ಕೈತಪ್ಪಿರುವುದು ನಿಜಕ್ಕೂ ಎಲ್ಲರಿಗೂ ಸಹಿಸಲಾಗದ ದುಃಖವಾಗಿದೆ. ಕ್ರಿಕೆಟ್ ಅಭಿಮಾನಿಗಳಿಗೆ ಮಾತ್ರವಲ್ಲ, ಕ್ರಿಕೆಟ್ ಆಟಗಾರರಿಗೂ ಇದೊಂದು ಎಂದೂ ಮಾಸದ ಗಾಯ. ಇದಕ್ಕೆ ಕನ್ನಡಿ ಎಂಬಂದಿಂತಿದೆ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ವಿರುಷ್ಕಾ ಫೋಟೋ. 

ಇದನ್ನೂ ಓದಿ- ಫೈನಲ್’ನಲ್ಲಿ ಮುಗ್ಗರಿಸಿದ ಭಾರತ-ನನಸಾಗಲಿಲ್ಲ ಟ್ರೋಫಿ ಕನಸು.. 6ನೇ ಬಾರಿ ವಿಶ್ವಕಿರೀಟ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ

ಹೌದು, ಟೀಂ ಇಂಡಿಯಾದಲ್ಲಿ ರನ್ ಮಿಷನ್ ಎಂತಲೇ ಖ್ಯಾತಿ ಪಡೆದಿರುವ ಕ್ರಿಕೆಟ್  ಸೂಪರ್‌ಸ್ಟಾರ್ ವಿರಾಟ್ ಕೊಹ್ಲಿ ವಿಶ್ವಕಪ್ ಫೈನಲ್ ಪಂದ್ಯದ ಬಳಿಕ ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರನ್ನು ಭೇಟಿಯಾದಾಗ ಕಿಂಗ್ ಕೊಹ್ಲಿ ಅವರ ದುಃಖದ ಕಟ್ಟೆ ಒಡೆದಿತ್ತು. ಪತ್ನಿಯನ್ನು ಕಂಡೊಡನೆ ಆಕೆಯನ್ನು ಬೀಗಿದಪ್ಪಿದ ವಿರಾಟ್ ಕೊಹ್ಲಿ ಭಾವುಕರಾದರು. ಈ ಸಂದರ್ಭದಲ್ಲಿ ತಮ್ಮಲ್ಲಿನ ನೋವನ್ನು ಮರೆಮಾಚುತ್ತಾ ಅನುಷ್ಕಾ ಶರ್ಮಾ ಪತಿ ವಿರಾಟ್ ಕೊಹ್ಲಿಗೆ ಸಾಂತ್ವನ ಹೇಳುತ್ತಿದ್ದರು. ಸದ್ಯ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. 

ಈ ಫೋಟೋದಲ್ಲಿ ವಿರಾಟ್ ಕೊಹ್ಲಿ ಪತ್ನಿ, ಖ್ಯಾತ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ನೋವಿನಲ್ಲಿರುವುದನ್ನು ಕಾಣಬಹುದು. ಈ ಸಂದರ್ಭದಲ್ಲಿ ಅನುಷ್ಕಾ ಶರ್ಮಾ ವಿರಾಟ್ ಕೊಹ್ಲಿಅವರನ್ನು ತಬ್ಬಿಕೊಂಡು ತಮ್ಮ ಬೇಸರವನ್ನು ಮರೆಮಾಚುತ್ತಾ ಪತಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.  ಈ ಫೋಟೋದಲ್ಲಿ ವಿರಾಟ್ ಕೊಹ್ಲಿ ಅವರ ಮುಖ ಕಾಣುವುದಿಲ್ಲ. ಆದರೆ, ಅವರ ನೀಲಿ ಜರ್ಸಿಯಲ್ಲಿ ವಿರಾಟ್ ಎಂದು ಬರೆದಿರುವುದನ್ನು ಕಾಣಬಹುದು. 

ಇದನ್ನೂ ಓದಿ- ಸೋಲಿನ ಮಧ್ಯೆ ಶ್ರೇಷ್ಠ ದಾಖಲೆ ಬರೆದ ವಿರಾಟ್ ಕೊಹ್ಲಿ -ಮೊಹಮ್ಮದ್ ಶಮಿ

ಇನ್ನೂ ವಿಶ್ವಕಪ್ ಫೈನಲ್‌ನಲ್ಲಿ ಸೋತಿದ್ದರೂ ಕೂಡ ಈ ಇಡೀ ವಿಶ್ವಕಪ್ ಪಂದ್ಯಾವಳಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಬ್ಲೂ ಬಾಯ್ಸ್ ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದಿದ್ದಾರೆ. ಸಾಮಾಜಿಕ ಜಾಲತಾನದಲ್ಲಿ ಭಾರತ ತಂಡಕ್ಕೆ ತಮ್ಮ ಪ್ರೀತಿ ಮತ್ತು ಬೆಂಬಲ ವ್ಯಕ್ತಪಡಿಸುವಲ್ಲಿ ಜನ ಕೂಡ ಹಿಂದೆ ಬಿದ್ದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ವಿವಿಧ ರೀತಿಯಲ್ಲಿ  ಪೋಸ್ಟ್‌ಗಳನ್ನು ಹಾಕುವ ಮೂಲಕ ಕ್ರಿಕೆಟ್ ಅಭಿಮಾನಿಗಳು ತಮ್ಮ ಕ್ರಿಕೆಟ್ ಸೂಪರ್‌ಸ್ಟಾರ್ಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News