WPL 2024: ನಾಳೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಶಾರುಖ್ ಖಾನ್

WPL 2024: ಫೆಬ್ರವರಿ 23ರಿಂದ ಮಹಿಳಾ ಪ್ರೀಮಿಯರ್ ಲೀಗ್ ನಡೆಯಲಿದ್ದು, ನಾಳೆ ನಡೆಯಲಿರುವ ಉದ್ಘಾಟನೆಯಲ್ಲಿ ಶಾರುಖ್ ಖಾನ್ ಭಾಗವಹಿಸಲಿದ್ದಾರೆ. 

Written by - Zee Kannada News Desk | Last Updated : Feb 22, 2024, 09:56 AM IST
  • ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದೊಂದಿಗೆ ಈ ಬಾರಿಯ ಮಹಿಳಾ ಪ್ರೀಮಿಯರ್ ಲೀಗ್ ಆರಂಭವಾಗಲಿದೆ.
  • ನಾಳೆ ನಡೆಯಲಿರುವ ಉದ್ಘಾಟನೆಯಲ್ಲಿ ಶಾರುಖ್ ಖಾನ್ ಭಾಗವಹಿಸಲಿದ್ದಾರೆ.
  • ಉದ್ಘಾಟನಾ ಸಮಾರಂಭ ಸಂಜೆ 6.30ಕ್ಕೆ ನಡೆಯಲಿದೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ತಂಡ ಫೈನಲ್‌ಗೆ ಅರ್ಹತೆ ಪಡೆಯಲಿದೆ.
WPL 2024:  ನಾಳೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಶಾರುಖ್ ಖಾನ್  title=

Shah Rukh Khan at the opening ceremony :  ಐಪಿಎಲ್‌ಗೂ ಮುನ್ನ ಮಹಿಳಾ ಪ್ರೀಮಿಯರ್ ಲೀಗ್ ನಡೆಯಲಿದ್ದು,  ಫೆಬ್ರವರಿ 23ರಿಂದ ಪ್ರಾರಂಭವಾಗಲಿದೆ. ಮೊದಲ 11 ಪಂದ್ಯಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ ಮತ್ತು ಉಳಿದ 9 ಪಂದ್ಯಗಳು ಮತ್ತು ಎರಡು ಪ್ಲೇಆಫ್ ಪಂದ್ಯಗಳು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಫೈನಲ್​  ಪಂದ್ಯವು ಕೂಡ  ದೆಹಲಿಯಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ. 

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದೊಂದಿಗೆ ಈ ಬಾರಿಯ ಮಹಿಳಾ ಪ್ರೀಮಿಯರ್ ಲೀಗ್ ಆರಂಭವಾಗಲಿದೆ. 

ಇದನ್ನು ಓದಿ : IPL 2024: ಹೊರಬಿತ್ತು ಐಪಿಎಲ್ ಸಂಬಂಧ ಬಿಗ್ ಅಪ್ಡೇಟ್: ಮೊದಲ ಹಂತದ ವೇಳಾಪಟ್ಟಿ ಇಂದು ಪ್ರಕಟ!

ಎರಡು ಮತ್ತು ಮೂರನೇ ಸ್ಥಾನ ಪಡೆಯುವ ತಂಡಗಳು ಎಲಿಮಿನೇಟರ್‌ನಲ್ಲಿ ಮುಖಾಮುಖಿಯಾಗಲಿವೆ. ಎಲಿಮಿನೇಟರ್‌ನಲ್ಲಿ ಗೆದ್ದ ತಂಡವು ಫೈನಲ್‌ಗೆ ತಲುಪಿದ ಎರಡನೇ ತಂಡವಾಗಲಿದೆ. ಇನ್ನು, ಆರ್​ಸಿಬಿ, ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಸ್​ ಮತ್ತು ಗುಜರಾತ್​ ಜೈಂಟ್ಸ್​ ತಂಡಗಳು ಸೆಣಸಾಡಲಿದೆ. ಎರಡನೇ ಆವೃತ್ತಿಯ ಟೂರ್ನಿಯಲ್ಲಿ ಒಟ್ಟು 5 ತಂಡಗಳು ಭಾಗವಹಿಸಲಿವೆ 

ಇದನ್ನು ಓದಿ :  Gold Rate: ಮತ್ತೆ ಗಗನ ಕುಸುಮವಾಯ್ತು ಬಂಗಾರ… ಇಂದು ಎಷ್ಟಾಗಿದೆ ಗೊತ್ತಾ 10 ಗ್ರಾಂ ಚಿನ್ನದ ಬೆಲೆ?
 
ಪಂದ್ಯ ಆರಂಭವಾಗುವ ಮುನ್ನ ಬಿಸಿಸಿಐ ಉದ್ಘಾಟನಾ ಸಮಾರಂಭ ಆಯೋಜಿಸಲಿದೆ. ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ ತಾರೆಯರು ಕಾರ್ಯಕ್ರಮ ನೀಡಲಿದ್ದಾರೆ. ಉದ್ಘಾಟನಾ ಪಂದ್ಯ ಸಂಜೆ 7.30ಕ್ಕೆ ಆರಂಭವಾಗಲಿದ್ದು, ಉದ್ಘಾಟನಾ ಸಮಾರಂಭ ಸಂಜೆ 6.30ಕ್ಕೆ ನಡೆಯಲಿದೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ತಂಡ ಫೈನಲ್‌ಗೆ ಅರ್ಹತೆ ಪಡೆಯಲಿದೆ.

ಈ ಪಂದ್ಯಾವಳಿಯ ಎರಡನೇ ಆವೃತ್ತಿಯ ಉದ್ಘಾಟನಾ ಸಮಾರಂಭದಲ್ಲಿ ನಟರಾದ ಶಾಹಿದ್ ಕಪೂರ್, ಟೈಗರ್ ಶ್ರಾಫ್, ವರುಣ್ ಧವನ್, ಸಿದ್ಧಾರ್ಥ್ ಮಲ್ಹೋತ್ರಾ ಉಪಸ್ಥಿತರಿರುತ್ತಾರೆ ಎಂದು ಮಹಿಳಾ ಪ್ರೀಮಿಯರ್ ಲೀಗ್ (WPL 2024) ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ. ಕಾರ್ತಿಕ್ ಆರ್ಯನ್ ಸಹ ಪ್ರದರ್ಶನ ನೀಡಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News