ಭಾರತದ ವಿರಾಟ್ ಕೊಹ್ಲಿ ಹಾಗೂ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನಾ ಏಕದಿನ ಹಾಗೂ ಟ್ವೆಂಟಿ ಕ್ರಿಕೆಟ್ ನಲ್ಲಿ ಉತ್ತಮ ಪ್ರದರ್ಶನ ನೀಡಿರುವ ಹಿನ್ನಲೆಯಲ್ಲಿ 2018 ರ ವಿಸ್ಡನ್ ಪ್ರಮುಖ ಕ್ರಿಕೆಟ್ ಆಟಗಾರರ ಸ್ಥಾನದಲ್ಲಿ ಅಗ್ರಸ್ತಾನವನ್ನು ಪಡೆದುಕೊಂಡಿದ್ದಾರೆ.
ಭಾರತದ ನಾಯಕ ವಿರಾಟ್ ಕೊಹ್ಲಿ ಪ್ರಸಕ್ತ ಸಂದರ್ಭದಲ್ಲಿ ವಿಶ್ವದ ಅಗ್ರಗಣ್ಯ ಬ್ಯಾಟ್ಸ್ಮನ್ ಗಳಲ್ಲಿ ಒಬ್ಬರು. ಕೊಹ್ಲಿ ಕ್ರಿಕೆಟ್ ಮೈದಾನದಲ್ಲಿ ಬದ್ದತೆಗೆ ಹೆಸರುವಾಸಿಯಾಗಿ ನಿರಂತರವಾಗಿ ದಾಖಲೆಗಳನ್ನು ತಮ್ಮ ಹೆಸರಿಗೆ ದಾಖಲಿಸಿಕೊಳ್ಳುತ್ತಿದ್ದಾರೆ.
ದಕ್ಷಿಣ ಆಫ್ರಿಕಾದ ಹಾಶಿಮ್ ಆಮ್ಲಾ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಪಾಕಿಸ್ತಾನದ ವಿರುದ್ಧ ನಡೆದ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಅವರು ತಮ್ಮ 27ನೇ ಶತಕವನ್ನು ಗಳಿಸಿದರು.
ವಿರಾಟ್ ಕೊಹ್ಲಿ ಈಗ ಕ್ರಿಕೆಟ್ ವಲಯದಲ್ಲಿ ಮುಟ್ಟಿದ್ದೆಲ್ಲವು ಚಿನ್ನ ಎನ್ನುವ ಹಾಗೆ ಆಗಿದೆ. ಏಕದಿನ,ಟೆಸ್ಟ್ ಅಥವಾ ಟ್ವೆಂಟಿ ಕ್ರಿಕೆಟ್ ಆಗಿರಬಹುದು ಹೀಗೆ ಎಲ್ಲ ಮಾದರಿಯ ಕ್ರಿಕೆಟ್ ದಾಖಲೆಗಳನ್ನು ಮುರಿಯಲಿದ್ದಾರೆ ಎನ್ನುವ ಅಭಿಪ್ರಾಯ ಬಹುತೇಕ ಹಿರಿಯ ಕ್ರಿಕೆಟಿಗರದ್ದು, ಇದಕ್ಕೆ ಈಗ ಮಾಜಿ ಕ್ರಿಕೆಟ್ ಆಟಗಾರ ಮೊಹಮ್ಮದ್ ಅಜರುದ್ದೀನ್ ಅವರು ನೀಡಿರುವ ಹೇಳಿಕೆಯೇ ಸಾಕ್ಷಿ.
ನಾಯಕ ವಿರಾಟ್ ಕೊಹ್ಲಿ ಅವರ ಶತಕದೊಂದಿಗೆ ಸುಸ್ಥಿತಿಯಲ್ಲಿದ್ದ ಭಾರತ ತಂಡ ನಂತರ ಕುಸಿತ ಕಂಡು 283ಕ್ಕೆ ಆಲೌಟ್ ಆಗಿದೆ, ಆ ಮೂಲಕ ಭಾರತ ಮೊದಲ ಇನ್ನಿಂಗ್ ನಲ್ಲಿ 43 ರನ್ ಗಳ ಹಿನ್ನಡೆಯನ್ನು ಅನುಭವಿಸಿದೆ.
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆಯುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ.ಆದರೆ ಈಗ ಅವರು ತಮ್ಮ ಡ್ಯಾನ್ಸ್ ಮೂಲಕವು ಸಹಿತ ಪ್ರೇಕ್ಷಕರ ಗಮನ ಸೆಳೆದಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಈಗ ವಿರಾಟ್ ಕೊಹ್ಲಿ "ನೀವು ಬೇರೆ ದೇಶದ ಬ್ಯಾಟ್ಸ್ ಮನ್ ಗಳನ್ನು ಇಷ್ಟಪಟ್ಟರೆ ಭಾರತದಲ್ಲಿರಬೇಡಿ" ಎಂದು ಪ್ರತಿಕ್ರಿಯಿಸಿದ್ದಾರೆ.
ಟ್ವೆಂಟಿ ಕ್ರಿಕೆಟ್ ಬಂದ ಮೇಲೆ ಟೆಸ್ಟ್ ಕ್ರಿಕೆಟ್ ಮೇಲಿನ ಮಹತ್ವದ ಕಡಿಮೆಯಾಗುತ್ತಿದೆ ಆದರೆ ವಿರಾಟ್ ಕೊಹ್ಲಿಯಂತಹ ಸ್ಟಾರ್ ಆಟಗಾರರು ಟೆಸ್ಟ್ ಆಟದ ಮೇಲೆ ತೋರಿಸುತ್ತಿರುವ ಪ್ರೀತಿ ಅದನ್ನು ಜೀವಂತವಾಗಿರಿಸಿದೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಗ್ರೆಮ್ ಸ್ಮಿತ್ ಅಭಿಪ್ರಾಯ ಪಟ್ಟಿದ್ದಾರೆ.
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಏಕದಿನ ಕ್ರಿಕೆಟ್ನಲ್ಲಿ ಸತತ ಮೂರು ಶತಕಗಳನ್ನು ಬಾರಿಸಿದ ಮೊದಲ ಭಾರತೀಯ ಆಟಗಾರ ಎನ್ನುವ ಖ್ಯಾತಿಗೆ ಪಾತ್ರರಾದರು . ಅಲ್ಲದೆ ಎದುರಾಳಿ ತಂಡದ ವಿರುದ್ಧ ಸತತ ನಾಲ್ಕು ಏಕದಿನ ಪಂದ್ಯಗಳಲ್ಲಿ ಶತಕಗಳನ್ನು ಗಳಿಸಿದ ಮೊದಲ ಆಟಗಾರ ಎನ್ನುವ ಶ್ರೆಯವನ್ನು ತಮ್ಮದಾಗಿಸಿಕೊಂಡರು.
ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ನಿರಂತರ ಫಾರ್ಮ್ ಮೂಲಕ ಅದ್ಬುತ ಸ್ಕೋರ್ ಗಳಿಸುತ್ತಿದ್ದಾರೆ.ಅದರಲ್ಲೂ ಇತ್ತೀಚಿಗೆ ಪ್ರತಿ ಪಂದ್ಯದಲ್ಲೂ ಶತಕವನ್ನು ಗಳಿಸತೊಡಗಿದ್ದಾರೆ.ಈ ಕಾರಣಕ್ಕಾಗಿ ಮಾಜಿ ಆಟಗಾರ ಸುನಿಲ್ ಗವಾಸ್ಕರ್ ಕೊಹ್ಲಿಯನ್ನು ಕ್ರಿಕೆಟ್ ಜಗತ್ತಿನ ದಂತಕಥೆ ಡಾನ್ ಬ್ರಾಡ್ಮನ್ ಅವರಿಗೆ ಹೋಲಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.