Lok Sabha Election 2024:ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಖಚಿತ ಮಾಹಿತಿ ಮೇರೆಗೆ ಎಫ್ಎಸ್ಟಿ ಮತ್ತು ಎಸ್ಎಸ್ಟಿ ತಂಡಗಳು ದಾಳಿ ನಡೆಸಿ, ಜಪ್ತಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ
ತಾಲ್ಲೂಕಿನ ಸಂಗನಕಲ್ಲಿನ ಸಣ್ಣ ರಾಚಮ್ಮ ಗುಡ್ಡದಲ್ಲಿರುವ ಶಿಲಾಯುಗದ ರೇಖಾಚಿತ್ರಗಳ ಹತ್ತಿರದಲ್ಲಿನ ಬಂಡೆಯನ್ನು ಯಾರೋ ದುಷ್ಕರ್ಮಿಗಳು ಕತ್ತರಿಸಿ ತೆಗೆದುಕೊಂಡು ಹೋಗಿದ್ದು, ಈ ಕುರಿತು ಬಳ್ಳಾರಿಯ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Lok Sabha Election 2024: ಅಖಂಡ 09-ಬಳ್ಳಾರಿ ಲೋಕಸಭಾ ಕ್ಷೇತ್ರವು ಹೂವಿನ ಹಡಗಲಿ, ಹಗರಿಬೊಮ್ಮನಹಳ್ಳಿ, ವಿಜಯನಗರ, ಕಂಪ್ಲಿ, ಬಳ್ಳಾರಿ ಗ್ರಾಮೀಣ, ಬಳ್ಳಾರಿ ನಗರ, ಸಂಡೂರು, ಹಾಗೂ ಕೂಡ್ಲಿಗಿ ಸೇರಿದಂತೆ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು, ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ವಿಧಾನಸಭಾ ಕ್ಷೇತ್ರವು ಮಾತ್ರ ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ವಿವಿಧ ಚೆಕ್ ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಪೊಲೀಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ಮಂಗಳವಾರ(ಏ.3) ಭೇಟಿ ನೀಡಿ ಪರಿಶೀಲಿಸಿದರು.
ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಿದ್ದು, ಭಾನುವಾರ ಅನಧೀಕೃತವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿ, ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಸಂಬಂಧ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, 09-ಬಳ್ಳಾರಿ (ಪ.ಪಂ) ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ರೂ.50 ಸಾವಿರ ಮೇಲ್ಪಟ್ಟು ನಗದು ಹಣವನ್ನು ಸೂಕ್ತ ದಾಖಲೆಗಳಿಲ್ಲದೇ ತೆಗೆದುಕೊಂಡು ಹೋಗಲು ಮತ್ತು ಸಾಗಾಣಿಕೆ ಮಾಡಲು ಅವಕಾಶ ಇರುವುದಿಲ್ಲ.
ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆಯು ಕಟ್ಟುನಿಟ್ಟಾಗಿ ಜಾರಿಯಾಗಿದ್ದು, ಶುಕ್ರವಾರದಂದು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧೀಕೃತವಾಗಿ ಸಾಗಿಸುತ್ತಿದ್ದ 629.94 ಲೀಟರ್ (ರೂ.2,53,141 ಮೌಲ್ಯ) ಮದ್ಯ, ರೂ.26 ಲಕ್ಷ ನಗದು ಹಣ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ, ಬುಧವಾರದಂದು ಅಬಕಾರಿ ಪೊಲೀಸ್ ಅಧಿಕಾರಿಗಳು ವಿವಿಧೆಡೆ ದಾಳಿ ನಡೆಸಿ ಅಕ್ರಮ ಮದ್ಯ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಎನ್.ಮಂಜುನಾಥ ಅವರು ತಿಳಿಸಿದ್ದಾರೆ.
ಭಾರತ ಸಂಸತ್ತು ಎರಡು ಸದನಗಳನ್ನು ಹೊಂದಿದೆ. ಇವುಗಳನ್ನು ರಾಜ್ಯಸಭೆ ಮತ್ತು ಲೋಕಸಭೆ ಎಂದು ಕರೆಯಲಾಗುತ್ತದೆ. ಲೋಕಸಭಾ ಸದನವೂ 545 ಸದಸ್ಯರನ್ನು ಹೊಂದಿದ್ದು, ಭಾರತದ ಸಂವಿಧಾನದ ಪ್ರಕಾರ ಈ ಪೈಕಿ 543 ಸದಸ್ಯರು ಚುನಾವಣಾ ಕ್ಷೇತ್ರಗಳಿಂದ ಐದು ವರ್ಷಗಳಿಗೊಮ್ಮೆ ಒಂದು ಅವಧಿಗಾಗಿ ಚುನಾಯಿಸಲ್ಪಡುತ್ತಾರೆ. ಇವರೆಲ್ಲರೂ ಚುನಾಯಿತ ಜನಪ್ರತಿನಿಧಿಗಳಾಗಿತ್ತಾರೆ, ಅಂದರೆ ಜನರಿಂದ ಆಯ್ಕೆಯಾಗುತ್ತಾರೆ. ಸಂಸದರ ಆಯ್ಕೆ ಮಾಡಲು ಮತದಾರರ ಪ್ರಭುಗಳೇ ಅಂತಿಮ. ಅಭಿವೃದ್ಧಿ ಲೆಕ್ಕಚಾರ ಸೇರಿದಂತೆ ನಾನಾ ವಿಷಯಗಳನ್ನು ಯೋಚಿಸಿ ತಮ್ಮ ಮತವನ್ನು ಮತದಾರರು ಚಲಾಯಿಸುತ್ತಾರೆ. ಈ ಸಲ ಯಾವ ಪಕ್ಷದಿಂದ ಯಾರು ಅಭ್ಯರ್ಥಿಯಾದ್ರೆ ಸೂಕ್ತ ಅನ್ನೋ ಸಮಗ್ರ ಮಾಹಿತಿಯನ್ನು ವೀಕ್ಷಕರ ಮುಂದಿಡುವುದೇ ಲೋಕಾ ಲೆಕ್ಕಚಾರ, ಸಂಸದರ ರಿಪೋರ್ಟ್ ಕಾರ್ಡ್..!
ಡೇ ನಲ್ಮ್ ಯೋಜನೆಯಡಿ ಪಿಎಂ ಸ್ವನಿಧಿ (ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ಯೋಜನೆ) ಹಾಗೂ ನಿರಾಶ್ರಿತರಿಗೆ ಆಶ್ರಯ ಕೇಂದ್ರದ ಸೌಲಭ್ಯ (Night Shelter) ಈ ಎರಡು ಯೋಜನೆಯಲ್ಲಿ ಅತ್ಯುತ್ತಮ ಗುರಿ ಸಾಧನೆಗೆ ಬಳ್ಳಾರಿ ಮಹಾನಗರ ಪಾಲಿಕೆಗೆ 2 ರಾಜ್ಯ ಪ್ರಶಸ್ತಿಗಳು ಲಭಿಸಿವೆ.
ಕಲಬುರಗಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರ ಸ್ಥಾನಕ್ಕೆ ಜನವರಿ 10 ರಂದು ಬೆಳಿಗ್ಗೆ 11 ಗಂಟೆಗೆ ಪಾಲಿಕೆಯ ಶ್ರೀ ಕೃಷ್ಣದೇವರಾಯ ಸಭಾಂಗಣದಲ್ಲಿ ಚುನಾವಣೆ ಸಭೆ ನಡೆಸಲು ನಿಗಧಿಪಡಿಸಲಾಗಿದೆ ಎಂದು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್ ಅವರು ತಿಳಿಸಿದ್ದಾರೆ.
Blood water Comes in Water Tap: ನಲ್ಲಿಯಲ್ಲಿ ರಕ್ತದ ನೀರು ಬರುತ್ತಿರುವ ದೃಶ್ಯವನ್ನು ಕಂಡು ಯುವಕರು ತಮ್ಮ ಮೊಬೈಲ್ನಲ್ಲಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.
Ballari Gang rape Case: ಬಿಕಾಂ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸೆಗಿರುವ ಆರೋಪಿಗಳಾದ ನವೀನ್, ಸಕೀಬ್, ತನು ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಆರೋಪಿಗಳೆಲ್ಲರೂ ಬಳ್ಳಾರಿಯ ಕೌಲ್ ಬಜಾರ್ ನಿವಾಸಿಗಳೆಂದು ತಿಳಿದುಬಂದಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ ರಮೇಶಬಾಬು ಅವರ ಮಾರ್ಗದರ್ಶನದಲ್ಲಿ ಬಳ್ಳಾರಿ ನಗರದ ಜಾಗೃತಿ ನಗರ, ಕವಾಡಿ ಸ್ಟ್ರೀಟ್, ರೇಷ್ಮೆ ಕಚೇರಿ ಹತ್ತಿರ ಯಾವುದೇ ಕ್ಲಿನಿಕ್ ಹೆಸರಿನ ಬೋರ್ಡ್ಗಳಿಲ್ಲದ 04 ನಕಲಿ ಕ್ಲಿನಿಕ್ಗಳ ಮೇಲೆ ದಾಳಿ ಮಾಡಿ, ಪರಿಶೀಲಿಸಲಾಗಿದ್ದು, ನಕಲಿ ವೈದ್ಯರಾದ ಕರೀಮ್, ಗೋವಿಂದ್, ಜಾವೀದ್, ಶಬಾನಾ ಅವರ ವಿರುದ್ಧ ಕೌಲ್ಬಜಾರ್ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನ ಕುಮಾರಿ ತಿಳಿಸಿದ್ದಾರೆ.
Chairman of Gram Panchayat : ಗಣಿನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ರಾಜ್ಯದಲ್ಲಿಯೇ ಮೊದಲ ಬಾರಿ ಮಂಗಳಮುಖಿಯೊಬ್ಬರು ಆಯ್ಕೆಯಾಗಿದ್ದು, ಈ ಬಗ್ಗೆ ಚೋರಾನೂರು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ಕಂಪ್ಲಿ ಪಟ್ಟಣದಲ್ಲಿ ಜಿಲ್ಲಾ ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಬಚಪನ್ ಬಚಾವೋ ಆಂದೋಲನ, ಪೆÇೀಲಿಸ್ ಇಲಾಖೆ,ˌ ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ ಮತ್ತು ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಮಂಗಳವಾರದಂದು ಕಾರ್ಮಿಕ ನಿರೀಕ್ಷಕರಾದ ಎಂ.ಅಶೋಕ, ಬಚಪನ್ ಬಚಾವೋ ಆದೋಲನ ರಾಜ್ಶ ಸಮನ್ವಯಾಧಿಕಾರಿ ಬೀನು ವರ್ಗೀಸ, ಕ್ಷೇತ್ರಾಧಿಕಾರಿ ಪಿ.ಎಂ ಈಶ್ವರಯ್ಯ ಮತ್ತು ಇತರ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿ 04 ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.