ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ 8000 ಶಾಲಾ ಕೊಠಡಿ ನಿರ್ಮಾಣ, 17,000 ಶಿಕ್ಷಕರ ನೇಮಕ ಯಾವುದೇ ಹಗರಣವಿಲ್ಲದೆ ನೇಮಕ ಮಾಡಲಾಗಿದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅರ್ಜಿ ಹಾಕದವರಿಗೂ ಶಿಕ್ಷಕರ ನೇಮಕ ಮಾಡಿ ಭ್ರಷ್ಟಾಚಾರ ಮಾಡಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ದ್ವಿತೀಯ ಪಿಯು ಪರೀಕ್ಷೆಗಳು ಆರಂಭವಾಗಿದ್ದು ತಿಪಟೂರಿನಲ್ಲಿ ಶಿಕ್ಷಣ ಸಚಿವ ನಾಗೇಶ್ ಹೂ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದ್ದಾರೆ.. ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ.
ಶಾಲಾ ಕಟ್ಟಡ ದುರಸ್ತಿ ಬಗ್ಗೆ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಪ್ರಿಯಾಂಕ್ ಖರ್ಗೆ ಮಾತಾನ್ನಾಡುವ ಸಂದರ್ಭದಲ್ಲಿ ಧಾರಾಳವಾಗಿ ಎಲ್ಲ ಕೇಸರೀಕರಣ ಮಾಡಿ ನೋ ಪ್ರಾಬ್ಲಂಮ್, ಎನ್ನುವ ಮೂಲಕ, ವಿಧಾನಸಭೆಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಗೆ ಟಾಂಗ್ ನೀಡಿದರು.
ಈ ಬಗ್ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯು 2023ರ ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ಪರೀಕ್ಷೆ ನಡೆಯಲಿವೆ.
ಮೊದಲು ಶಾಲೆಗಳಲ್ಲಿ ಅಗತ್ಯ ಸಂಖ್ಯೆಯಲ್ಲಿ ಶಿಕ್ಷಕರನ್ನು ನೇಮಿಸಿ ಅವಶ್ಯಕವಾದ ಬೋದನಾ ಸಲಕರಣೆಗಳನ್ನು ಸರ್ಕಾರ ಒದಗಿಸಬೇಕು. ಪ್ರತಿಶಾಲೆಯಲ್ಲಿ ಕಲೆ, ಸಂಗೀತ ಮತ್ತು ಕ್ರೀಡೆಗಳಲ್ಲಿ ತರಬೇತಿ ನೀಡುವ ಶಿಕ್ಷಕರನ್ನು ನೇಮಿಸಬೇಕು. ಇದನ್ನು ಬಿಟ್ಟು ತಮ್ಮ ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬಾರದು ಎಂದು ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.
ಮಾದರಿ ಶಾಲೆ, ಸ್ಪೋಕನ್ ಇಂಗ್ಲಿಷ್ ತರಗತಿ, ನೈತಿಕ ವಿಜ್ಞಾನ ತರಗತಿ ಸೇರಿ ಇನ್ನಿತರ ಶೈಕ್ಷಣಿಕ ಅಭಿವೃದ್ಧಿ ಉಪಕ್ರಮಗಳನ್ನು ಅನುಷ್ಠಾನಗೊಳಿಸುವ ಗುರಿ ಇದೆ ಎಂದು ಬಿ.ಸಿ.ನಾಗೇಶ್ ಹೇಳಿದ್ದಾರೆ.
ನಿಮ್ಮ ಸರ್ಕಾರಕ್ಕೆ ಮಕ್ಕಳಿಗೆ ಕೊಡಬೇಕಾದ್ದನ್ನು ಕೊಡುವ ಯೋಗ್ಯತೆ ಇಲ್ಲದಿದ್ದರೆ ಅವರನ್ನು ಹಂಗಿಸುವ ಸಾಹಸ ಮಾಡಬೇಡಿ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಶಿಕ್ಷಣ ಸಚಿವ ಬಿ.ಸಿ,ನಾಗೇಶ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ಶಿಕ್ಷಣ ಇಲಾಖೆಯಲ್ಲಿ ವರ್ಗಾವನೆಯಾಗದ ಹಿನೆಲೆಯಲ್ಲಿ ಶಿಕ್ಷಕರ ಕುಟುಂಬ ವಿಚ್ಚೇದನ ಹಂತ ತಲುಪುತ್ತಿದೆ. ಈ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡುವಂತೆ ಶಿಕ್ಷಕತು ಶಿಕ್ಷಣ ಸಚಿವರ ಮುಂದೆ ಕಣ್ಣೀರಿಟ್ಟಿದ್ದಾರೆ.
ಸರ್ಕಾರ ಮಕ್ಕಳಿಗೆ ಶೂ, ಸಾಕ್ಸ್ ಸ್ಥಗಿತಗೊಳಿಸಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಬಿ.ಸಿ.ನಾಗೇಶ್ ತಿರುಗೇಟು ನೀಡಿದ್ದಾರೆ.. ಮಕ್ಕಳು ಶಾಲೆಗೆ ಬರುವುದು ಶಿಕ್ಷಣಕ್ಕಾಗಿ. ಶೂ, ಸಾಕ್ಸ್ ಕೊಡೋಕೆ ಆಗಲ್ಲ ಎಂದು ನಾವು ಹೇಳಲಿಲ್ಲ ಎಂದು ನಾಗೇಶ್ ಕಿಡಿ ಕಾರಿದ್ದಾರೆ.
ರಾಜ್ಯದಲ್ಲಿ ತಣ್ಣಗಾಗಿದ್ದ ಪಠ್ಯಪುಸ್ತಕ ಪರಿಷ್ಕರಣೆ ಗುದ್ದಾಟ ಮತ್ತೆ ಮುನ್ನಲೆಗೆ ಬಂದಿದೆ. ರೋಹಿತ್ ಚಕ್ರತೀರ್ಥ ಸಮಿತಿಯ ಎಡವಟ್ಟು ಸರಿಪಡಿಸಲು ಶಿಕ್ಷಣ ಇಲಾಖೆ ಸಿಎಂ ಸೂಚನೆಯಂತೆ ಮತ್ತೊಂದು ಸಮಿತಿ ಮೊರೆ ಹೋಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.