Salaam Aarti: ಇನ್ನುಮುಂದೆ ‘ದೀವಟಿಗೆ ಸಲಾಂ’ ಪದದ ಬದಲಾಗಿ ‘ದೀವಟಿಗೆ ನಮಸ್ಕಾರ’, ‘ಸಲಾಂ ಆರತಿ’ ಪದದ ಬದಲಾಗಿ ‘ಆರತಿ ನಮಸ್ಕಾರ’ ಎಂದು ಹಾಗೂ ‘ಸಲಾಂ ಮಂಗಳಾರತಿ” ಪದದ ಬದಲಾಗಿ ‘ಮಂಗಳಾರತಿ ನಮಸ್ಕಾರ’ ಎಂದು ಹೆಸರು ಬದಲಾಯಿಸಿ ಸೇವಾಕಾರ್ಯ ಮುಂದುವರೆಸಲು ಸುತ್ತೋಲೆ ಹೊರಡಿಸಲಾಗಿದೆ.
ಸಂವಿಧಾನ ವಿರೋಧಿ ಎಂಬ ಕಾರಣಕ್ಕೇ ಅಂಬೇಡ್ಕರ್ ಕಾಂಗ್ರೆಸ್ನ್ನು ತ್ಯಜಿಸಿದ್ದು. ನಮ್ಮನ್ನೇ ಬಿಟ್ಟ ನಿಮಗೆ ಸೋಲೇ ಖಚಿತವೆಂದು ಸಂವಿಧಾನ ಶಿಲ್ಪಿಯ ವಿರುದ್ಧ ಕಾಂಗ್ರೆಸ್ ಕುತಂತ್ರ ಮಾಡಿತ್ತು ಅಂತಾ ಬಿಜೆಪಿ ಕುಟುಕಿದೆ.
Siddu vs DKS: ಕಾಂಗ್ರೆಸ್ ಟಿಕೆಟ್ಗಾಗಿ ಅರ್ಜಿ ಸಲ್ಲಿಸುವ ಅಂತಿಮ ದಿನವನ್ನು ಎರಡೆರಡು ಬಾರಿ ಮುಂದಕ್ಕೆ ಹಾಕಿದರೂ ಡಿಕೆಶಿ ಮಾತಿಗೆ ಸಿದ್ದರಾಮಯ್ಯ ಕಿಮ್ಮತ್ತೇ ನೀಡಲಿಲ್ಲ ಅಂತಾ ಬಿಜೆಪಿ ಟೀಕಿಸಿದೆ.
ವೋಟರ್ ಐಡಿ ಅಕ್ರಮ ಪ್ರಕರಣ ಸಂಬಂಧ ರಾಜಕೀಯ ಒತ್ತಡದಿಂದ ಚಿಲುಮೆ ಸಂಸ್ಥೆಗೆ ಸಹಕರಿಸಿದ್ದೆವು ಎಂದು ಅಧಿಕಾರಿಗಳು ಹೇಳಿದ್ದಾರೆ. ಒತ್ತಡ ಹಾಕಿದ ರಾಜಕೀಯದವರು ಯಾರು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Karnataka Voter ID Scam: 2017ರಲ್ಲಿ ಪ್ರಥಮ ಬಾರಿಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಚುನಾವಣಾ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಚಿಲುಮೆಗೆ ಆದೇಶ ನೀಡಲಾಗಿತ್ತು. ಸಿದ್ದರಾಮಯ್ಯನವರೇ ಇದನ್ನು ನೀವು ಮರೆತಿದ್ದೀರಾ ಅಥವಾ ಜಾಣ ಮರೆವೇ? ಎಂದು ಬಿಜೆಪಿ ಪ್ರಶ್ನಿಸಿದೆ.
Vehicle Scrapping Policy: 20 ವರ್ಷ ಪೂರೈಸಿದ ಖಾಸಗಿ ವಾಹನಗಳನ್ನು ಕಡ್ಡಾಯವಾಗಿ ಗುಜರಿಗೆ ಹಾಕುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಬಳಿಯಿದ್ದು, ಈ ಕುರಿತು ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.
Basavaraj Bommai vs Siddaramaiah: ಏನೂ ಮಾತನಾಡದೆ ಜನರ ಕೆಲಸ ಮಾಡುತ್ತಿರುವುದು ಬಿಜೆಪಿ ಸರ್ಕಾರ. ಆದರೆ ಕಾಂಗ್ರೆಸ್ ನವರು ಸುಳ್ಳು ಆಶ್ವಾಸನೆಗಳನ್ನು ನೀಡಿ ಜನರಿಗೆ ವಂಚಿಸಿದರು ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಗಳಿಂದ ಡಿಕೆಶಿ ಅರ್ಜಿ ಸ್ವೀಕರಿಸುತ್ತಿದ್ದರೆ, ಇತ್ತ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೆಲೆ ಇಲ್ಲವೇ? ಎಂದು BJP ಪ್ರಶ್ನಿಸಿದೆ.
ರಾಜ್ಯದಲ್ಲಿ ಶೇ.24.1ರಷ್ಟಿರುವ SC/ST ಜನಸಂಖ್ಯೆಗನುಗುಣವಾಗಿ ಯೋಜನಾ ವೆಚ್ಚದ ಶೇ.24.1ರಷ್ಟು ಹಣವನ್ನು ಕಾನೂನುಬದ್ಧವಾಗಿ ಮೀಸಲಿಟ್ಟಿದ್ದು ನಮ್ಮ ಬದ್ದತೆ. ನಿಮ್ಮ ಬದ್ದತೆ ಏನು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮತದಾರರ ನೋಂದಣಿ ಕುರಿತು ಜಾಗೃತಿ ಮೂಡಿಸಲು ಪಡೆದುಕೊಂಡ ಅನುಮತಿಯನ್ನು ಚಿಲುಮೆ ಸಂಸ್ಥೆ ದುರ್ಬಳಕೆ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿರುವುದರಿಂದ ತನಿಖೆ ನಡೆಯುತ್ತಿದೆ ಎಂದು ಕಟೀಲ್ ಹೇಳಿದ್ದಾರೆ.
ಬಿಜೆಪಿಯ ನಾಯಕರೊಂದಿಗೆ ಚಿಲುಮೆ ಸಂಸ್ಥೆಗೆ ನೇರ ಸಂಪರ್ಕವಿರುವುದು ಜಗಜ್ಜಾಹೀರು. ಹೀಗಿರುವಾಗ ಅದೇ ಸಂಸ್ಥೆಯ "ಉಚಿತ ಸೇವೆ"ಗೆ ಸರ್ಕಾರ ಒಪ್ಪಿಗೆ ಕೊಟ್ಟಿದ್ದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.