ಈ ಕ್ಷೇತ್ರದಲ್ಲಿ ಒಕ್ಕಲಿಗರು, ಲಿಂಗಾಯತರು, ಮುಸಲ್ಮಾನರು, ಪರಿಶಿಷ್ಟ ಜಾತಿ, ಪಂಗಡದವರು ಸೇರಿದಂತೆ ಎಲ್ಲ ವರ್ಗದವರೂ ಇದ್ದಾರೆ. ಇಲ್ಲಿ ಜಾತಿ ಮೇಲೆ ರಾಜಕಾರಣ ಮಾಡಿದರೆ ಪ್ರಯೋಜನವಿಲ್ಲ. ನೀತಿ ಮೇಲೆ ರಾಜಕಾರಣ ಮಾಡಬೇಕು. ನಾವು ಹುಟ್ಟುವಾಗ ಇಂತಹುದೇ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಲ್ಲ. ಕಾಂಗ್ರೆಸ್ ಎಲ್ಲ ಜಾತಿ ಹಾಗೂ ವರ್ಗದ ಪಕ್ಷ. ಎಲ್ಲರಿಗೂ ರಕ್ಷಣೆ ನೀಡುತ್ತಾ ಬಂದಿದ್ದೇವೆ.
‘ರಸ್ತೆಗುಂಡಿಗಳ ವಿಚಾರವಾಗಿ ಮಾಧ್ಯಮಗಳು ಅಭಿಯಾನ ಮಾಡಿದರೂ ಈ ಸರಕಾರ ಅರಿಯಲಿಲ್ಲ. ಜನ ತೊಂದರೆ ಅನುಭವಿಸುವಾಗ ರಸ್ತೆ ಗುಂಡಿ ಮುಚ್ಚಲಿಲ್ಲ. ತಮ್ಮ ನಾಯಕರು ಬರುತ್ತಿದ್ದಾರೆ ಎಂದ ತಕ್ಷಣ ರಸ್ತೆಗೆ ಡಾಂಬರು ಹಾಕಿದರು. ಅವರ ಆದ್ಯತೆ ಜನರಲ್ಲ, ಅವರ ನಾಯಕರು.ಅವರಿಗೆ ಜನರ ಜೀವನ, ಸಮಸ್ಯೆ ಮುಖ್ಯವಲ್ಲ, ಅವರ ನಾಯಕರುಗಳ ಅನುಕೂಲ ಮುಖ್ಯ ಎಂಬುದು ಸಾಬೀತಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಟೀಕಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.