ಕನ್ನಡಿಗ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ಇಲ್ಲಿವರೆಗೆ ಹದಿಮೂರು ಪಂದ್ಯಗಳನ್ನಾಡಿರುವ ಲಕ್ನೋ, ಎಂಟರಲ್ಲಿ ಗೆಲುವು ಸಾಧಿಸಿ, ಐದರಲ್ಲಿ ಸೋಲು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಹದಿನಾರು ಅಂಕ ಗಳಿಸಿ ಮೂರನೇ ಸ್ಥಾನದಲ್ಲಿದೆ.
ಕಳೆದ ಬಾರಿ ಸತತ ಸೋಲುಗಳನ್ನು ಕಂಡು ಎಡವಿರುವ ಸನ್ರೈಸರ್ಸ್ ಹೈದರಾಬಾದ್ ತಂಡವು ಪ್ಲೇ ಆಫ್ನಿಂದ ಹೊರಬಿದ್ದಿದೆ. ಕೇನ್ ವಿಲಿಯಮ್ಸನ್ ನಾಯಕತ್ವದಲ್ಲಿ ಕಣಕ್ಕಿಳಿದಿರುವ ಹೈದರಾಬಾದ್ ತಂಡವು ಹನ್ನೆರಡು ಪಂದ್ಯಗಳನ್ನಾಡಿದ್ದು, ಐದರಲ್ಲಿ ಗೆಲುವು ಕಂಡಿದೆ. ಇನ್ನುಳಿದ ಏಳು ಪಂದ್ಯಗಳಲ್ಲಿ ಸೋಲು ಅನುಭವಿಸಿ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನ ಗಳಿಸಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಉಭಯ ತಂಡಗಳು ಅದ್ಭುತ ಪ್ರದರ್ಶನ ನೀಡುತ್ತಿದೆ. ಕನ್ನಡಿಗ ಕೆ.ಎಲ್ ರಾಹುಲ್ ನಾಯಕತ್ವದಲ್ಲಿ ಮುನ್ನಡೆಯುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಟೂರ್ನಿಯಲ್ಲಿ ಭರ್ಜರಿ ಹವಾ ಶುರು ಮಾಡಿದೆ.
ಚೊಚ್ಚಲ ಬಾರಿಗೆ ನಾಯಕತ್ವ ವಹಿಸಿಕೊಂಡ ಹಾರ್ದಿಕ್ ಪಾಂಡ್ಯ ಟೂರ್ನಿಯಲ್ಲಿ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದಾರೆ. ಗುಜರಾತ್ ಟೈಟಾನ್ಸ್ ತಂಡವು ಮೊದಲ ಬಾರಿಗೆ ಟೂರ್ನಿಯಲ್ಲಿ ಆಡುತ್ತಿದ್ದರೂ ಸಹ ಆಟದ ವೈಖರಿ ಮಾತ್ರ ಭರ್ಜರಿಯಾಗಿದೆ.
ಕೇನ್ ವಿಲಿಯಂಸನ್ ನಾಯಕತ್ವದಲ್ಲಿ ಮುನ್ನಡೆಯುತ್ತಿರುವ ಸನ್ರೈಸರ್ಸ್ ಹೈದರಾಬಾದ್ ತಂಡವು ಟೂರ್ನಿಯಲ್ಲಿ ಸಮಾಧಾನಕರ ಪ್ರದರ್ಶನ ನೀಡುತ್ತಿದೆ. ಇಲ್ಲಿಯವರೆಗೆ ಆಡಿರುವ ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಸಾಧಿಸಿದ್ದು, ಆರರಲ್ಲಿ ಸೋಲು ಅನುಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
ಇನ್ನು ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಆಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟೂರ್ನಿಯಲ್ಲಿ ಅದ್ಭುತವಾಗಿ ಆಡುತ್ತಿದೆ. ಇಲ್ಲಿವರೆಗೆ ಆಟವಾಡಿರುವ ಹನ್ನೆರಡು ಪಂದ್ಯಗಳ ಪೈಕಿ ಏಳರಲ್ಲಿ ಗೆಲುವು ಸಾಧಿಸಿದ್ದು, ಐದರಲ್ಲಿ ಸೋಲನ್ನನುಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
ರಾಜಸ್ಥಾನ ರಾಯಲ್ಸ್ ತಂಡವನ್ನು ಸಂಜು ಸ್ಯಾಮ್ಸನ್ ಮುನ್ನಡೆಸುತ್ತಿದ್ದು, ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಈವರೆಗೆ ಆಡಿರುವ ಹನ್ನೊಂದು ಪಂದ್ಯಗಳ ಪೈಕಿ ಏಳರಲ್ಲಿ ಗೆಲುವು ಸಾಧಿಸಿದ್ದು, ನಾಲ್ಕರಲ್ಲಿ ಸೋಲು ಅನುಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಗಳಿಸಿದೆ.
ಕಳೆದ 14 ಸೀಸನ್ಗಳಿಂದ ಉತ್ತಮ ಲಯದಲ್ಲಿದ್ದ ತಂಡ 15ನೇ ಆವೃತ್ತಿಯಲ್ಲಿ ಹೀಗೆ ಮಕಾಡೆ ಮಲಗಲು ಕಾರಣವೇನು ಅಂತ ಹುಡುಕಿದ್ರೆ, ಸಿಗೋದು ಆತಂರಿಕ ಕಲಹ. ಹೌದು, ತಂಡದ ಡ್ರೆಸ್ಸಿಂಗ್ ರೂಂನಲ್ಲಿ ಕೆಲ ಆಟಗಾರರ ನಡುವೆ ಭಿನ್ನಾಭಿಪ್ರಾಯಗಳು ಹುಟ್ಟಿದ್ದು, ಸಾಂಘಿಕ ಪ್ರದರ್ಶನದ ಮೇಲೆ ಹೆಚ್ಚು ಪರಿಣಾಮ ಬಿದ್ದಿದೆ ಎನ್ನಲಾಗಿದೆ. ಇನ್ನು ರೋಹಿತ್, ಪೋಲಾರ್ಡ್ ಮೇಲೆ ಬ್ಯಾಟಿಂಗ್ ವಿಭಾಗದಲ್ಲಿ ಹೆಚ್ಚಿದ ಒತ್ತಡ ಕೂಡ ತಂಡದ ಹಿನ್ನಡೆಗೆ ಕಾರಣವಾಗಿದೆ.
ಈ ಬಾರಿಯ ಟೂರ್ನಿಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡುತ್ತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಇಂದಿನ ಪಂದ್ಯದಲ್ಲಿ ಯಾವ ರೀತಿ ಪ್ರದರ್ಶನ ನೀಡಿಲಿದೆ ಎಂಬುದನ್ನು ಕಾದುನೋಡಬೇಕಿದೆ.
ಮುಂಬರುವ ಎಲ್ಲಾ ಪಂದ್ಯಗಳಲ್ಲಿ ಗೆಲುವು ಪಡೆದರೆ ಮಾತ್ರ ಆರ್ಸಿಬಿ ತಂಡವು ಪ್ಲೇ ಆಫ್ಗೆ ಪ್ರವೇಶ ಪಡೆಯಬಹುದು. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಈ ಪಂದ್ಯವು ನಿರ್ಣಾಯಕವಾಗಲಿದೆ.
ಸದ್ಯ ಗುಜರಾತ್ ಟೈಟಾನ್ಸ್ ತಂಡ ಮೊದಲ ಬಾರಿಗೆ ಟೂರ್ನಿ ಪ್ರವೇಶಿಸಿದ್ದರೂ ಸಹ ಅದ್ಭುತ ಪ್ರದರ್ಶನ ನೀಡುತ್ತಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಗುಜರಾತ್ ಟೈಟಾನ್ಸ್ ತಂಡವು ಆಡಿರುವ 10 ಪಂದ್ಯಗಳಲ್ಲಿ ಎಂಟರಲ್ಲಿ ಗೆಲುವು ಸಾಧಿಸಿದ್ದು, ಎರಡಲ್ಲಿ ಸೋಲು ಅನುಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಪಾಡಿಕೊಂಡಿದೆ.
ಎಂ.ಎಸ್ ಧೋನಿ ನಾಯಕತ್ವದಲ್ಲಿ ಸದ್ಯ ಮುಂದುವರೆಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟೂರ್ನಿಯಲ್ಲಿ ಒಂಬತ್ತು ಪಂದ್ಯಗಳನ್ನಾಡಿದ್ದು ಆರರಲ್ಲಿ ಸೋಲು ಕಂಡು, ಮೂರರಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನ ಪಡೆದಿದೆ.
ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ತಂಡವು ಆಡಿರುವ ಒಂಬತ್ತು ಪಂದ್ಯಗಳಲ್ಲಿ ಎಂಟರಲ್ಲಿ ಗೆಲುವು ಸಾಧಿಸಿದ್ದು, ಒಂದರಲ್ಲಿ ಸೋಲನ್ನಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದೆ. ಟೂರ್ನಿಗೆ ಮೊದಲ ಬಾರಿ ಎಂಟ್ರಿ ಕೊಟ್ಟಿರುವ ಗುಜರಾತ್ ಅದ್ಭುತ ಪ್ರದರ್ಶನ ನೀಡುತ್ತಿದೆ.
ಗುಜರಾತ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಹಾರ್ದಿಕ್ ಪಾಂಡ್ಯ ಉತ್ತಮ ಫಾರ್ಮ್ನ್ನು ಕಂಡುಕೊಂಡಿದ್ದಾರೆ. ಈಗಾಗಲೇ ಐಪಿಎಲ್ ಟೂರ್ನಿಯಲ್ಲಿ ಆಡಿರುವ ಎಂಟು ಪಂದ್ಯಗಳ ಪೈಕಿ ಏಳರಲ್ಲಿ ಜಯ ಸಾಧಿಸಿದ್ದು, ಒಂದರಲ್ಲಿ ಸೋಲು ಕಂಡಿದ್ದಾರೆ.
ಬ್ಯಾಟಿಂಗ್ಗೆ ಇಳಿದ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್ 37 ಎಸೆತಗಳಲ್ಲಿ 46 ರನ್ ಗಳಿಸಿದರೆ, ದೀಪಕ್ ಹೂಡಾ 34 ರನ್ ಗಳಿಸಿದರು. ಪಂಜಾಬ್ ಪರ ವೇಗಿ ಕಗಿಸೊ ರಬಾಡ ಬೌಲರ್ಗಳ ಆಯ್ಕೆಯಾಗಿದ್ದು, ದಕ್ಷಿಣ ಆಫ್ರಿಕಾದ ಎಲ್ಎಸ್ಜಿ ನಾಯಕ ಕೆಎಲ್ ರಾಹುಲ್ ಸೇರಿದಂತೆ ನಾಲ್ಕು ವಿಕೆಟ್ ಪಡೆದರು. ಸ್ಪಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.