ಕೆ.ಆರ್.ಪೇಟೆ ನಾಯಕನ ಹಳ್ಳಿ ಕಳಪೆ ರಸ್ತೆ ಕಾಮಗಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪೇಟೆ ತಾಲೂಕು JDS ಮುಖಂಡ ಎಚ್.ಟಿ.ಮಂಜು ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಕಳಪೆ ಕಾಮಗಾರಿಗೆ ಕಾರಣ ನೀಡಿದರೂ ಸಚಿವ ನಾರಾಯಣಗೌಡ ಸಮರ್ಥನೆ ಮಾಡಿಕೊಂಡಿದ್ದಾರೆ.
ಸಿದ್ದರಾಮಯ್ಯ ಸೋಲಿಸಲು ಕಾಂಗ್ರೆಸ್ನವರೇ ಸಾಕು ಎಂಬ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. ನಾನು ಅವರ ಇವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ. ಗೆಲುವು.. ಸೋಲು ಜನರು ತೀರ್ಮಾನ ಮಾಡ್ತಾರೆ ಎಂದಿದ್ದಾರೆ.
ಕೋಲಾರದಲ್ಲಿ ನೂರಕ್ಕೆ ನೂರು ಸಿದ್ದರಾಮಯ್ಯ ಗೆಲ್ಲಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಎಲ್ಲರೂ ಸೇರಿ ನಿಮ್ಮನ್ನು ಬಲಿ ನೀಡಲು ಹೊರಟಿದ್ದಾರೆ. ಕೋಲಾರಕ್ಕೆ ಹೋಗಬೇಡಿ ವರಣಾದಲ್ಲೇ ನಿಲ್ಲಿ ಎಂದು ಇಬ್ರಾಹಿಂ ಹೇಳಿದ್ದಾರೆ.
ನಾವೇನ್ ಬಿಜೆಪಿ ಜೊತೆ ಸೇರಿ ಕುತಂತ್ರ ಮಾಡಬೇಕಿಲ್ಲ
ಸಿದ್ದರಾಮಯ್ಯರನ್ನ ಸೋಲಿಸಲು ಬಿಜೆಪಿ ಬೆಂಬಲ ಬೇಡ
ಯಾವುದೇ ಕಾರಣಕ್ಕೂ ಒಳ ಒಪ್ಪಂದ ಮಾಡಿಕೊಳ್ಳಲ್ಲ
ಬಿಜೆಪಿ ಜೊತೆ ಚರ್ಚೆ ಆಗಿಲ್ಲ.. ಮುಂದೆಯೂ ಆಗಲ್ಲ
ಸಿದ್ದರಾಮಯ್ಯ ಕೋಲಾರದಲ್ಲೇ ನಿಲ್ಲಲಿ, ಬೇರೆ ಕಡೆ ನಿಲ್ಲಲಿ- ಮಾಜಿ ಸಿಎಂ ಕುಮಾರಸ್ವಾಮಿ
ಮುಂಬರುವ ಚುನಾವಣೆಗೆ ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ- ಜೆಡಿಎಸ್ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
Assembly Elections 2023: ಪ್ರಮುಖವಾಗಿ ಬಿಜೆಪಿಗೆ ಕೆಲ ನಾಯಕರ ವಲಸೆ, ಕಾಂಗ್ರೆಸ್ಗೆ ಅಭ್ಯರ್ಥಿ ಕೊರತೆ ಹೆಚ್ಚಾಗಿದೆ,ಅಭ್ಯರ್ಥಿ ಕೊರತೆಯ ನಡುವೆ ಗೆಲ್ಲೋದು ಹೇಗೆ ಅಂತಲೂ ಪ್ಲಾನ್ ರೂಪಿಸಿದೆ.
ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್ಡಿಡಿ ಆಹ್ವಾನ ನೀಡದೇ ಇರೋದಕ್ಕೆ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕ್ತಿದ್ದಾರೆ. ಉತ್ಸವ ಮೂರ್ತಿ ಇಲ್ಲದೇ ಉತ್ಸವ ಮಾಡಿದಂತೆ ಎಂದು ಸರ್ಕಾರದ ವಿರುದ್ಧ ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಸಿ.ಎಸ್.ಪುಟ್ಟರಾಜು ಕಿಡಿಕಾರಿದ್ದಾರೆ..
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರ ಹುಡುಕಾಟ ನಡೆಸುತ್ತಿರುವ ಬಗ್ಗೆ, ಅವರು ಕೋಲಾರಕ್ಕೆ ಹೋಗಿರುವ ಬಗ್ಗೆ ನಾನು ಲಘುವಾಗಿ ಮಾತನಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ನಾಡಪ್ರಭು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭುಗಳ ಪ್ರತಿಮೆ ಅನಾವರಣ ಸಮಾರಂಭಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸದೇ ಶಿಷ್ಟಾಚಾರ ಉಲ್ಲಂಘನೆ ಮಾಡಿರುವ ಬಿಜೆಪಿ ಸರಕಾರದ ವಿರುದ್ಧ ಜೆಡಿಎಸ್ ವಾಗ್ದಾಳಿ ಮುಂದುವರಿಸಿದೆ.
ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಆಹ್ವಾನ ಗೊಂದಲ ಮುಗಿಯುವಂತೆ ಕಾಣುತ್ತಿಲ್ಲ. ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಜೆಡಿಎಸ್, ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕೇಶವ ಕೃಪದ ಕಾರ್ಯಕ್ರಮ ಅಲ್ಲ. ಇದಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಲಿ ಎಂದು ಒತ್ತಾಯಿಸಿದೆ. ಅಲ್ಲದೆ,
ಸುಳ್ ಬಿಜೆಪಿ, ಗೊಬೆಲ್ ಬಿಜೆಪಿ ಹಾಗೂ ಮುಖ್ಯಮಂತ್ರಿಯನ್ನು ಸುಳ್ ಸಿಎಂ ಎಂದು ಜೆಡಿಎಸ್ ಕುಟುಕಿದೆ.
ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದ್ರೆ ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ ಎಂದು ಜೆಡಿಎಸ್ ಟೀಕಿಸಿದೆ.
ನಾಡಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಆಹ್ವಾನಿಸಿಲ್ಲವೆಂದು ಜೆಡಿಎಸ್ ಅಸಮಾಧಾನ ಹೊರ ಹಾಕಿದ್ದಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಬಿಜೆಪಿ, ‘ಮೊದಲ ಆಹ್ವಾನ ಪತ್ರಿಕೆಯನ್ನೇ ಎಚ್.ಡಿ.ದೇವೇಗೌಡರಿಗೆ ನೀಡಿದ್ದೇವೆ’ ಅಂತಾ ಹೇಳಿದೆ.
ನಾಡಪ್ರಭು ಕೆಂಪೇಗೌಡರ ನೂರೆಂಟು ಅಡಿ ಎತ್ತರದ ಪ್ರತಿಮೆ ಅನಾವರಣ ಸಮಾರಂಭಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸದೇ ಇರುವ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ಜೆಡಿಎಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.